Homeಮುಖಪುಟಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ: ದೊಡ್ಡ ಅಂತರದಲ್ಲಿ ಗೆಲ್ಲಿಸಲು ಯಡಿಯೂರಪ್ಪ ಮನವಿ

ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ: ದೊಡ್ಡ ಅಂತರದಲ್ಲಿ ಗೆಲ್ಲಿಸಲು ಯಡಿಯೂರಪ್ಪ ಮನವಿ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪುತ್ರ ಬಿ.ವೈ ವಿಜಯೇಂದ್ರರವರು ಸ್ಪರ್ಧಿಸಲಿದ್ದು, ಅವರನ್ನು ನನಗಿಂತಲೂ ದೊಡ್ಡ ಅಂತರದಲ್ಲಿ ಗೆಲ್ಲಿಸಿಕೊಡಬೇಕೆಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನಿಂದ ತೆರವಾದ ಸ್ಥಾನಕ್ಕೆ ತನ್ನ ಮಗ ವಿಜಯೇಂದ್ರ ಸ್ಪರ್ಧಿಸುತ್ತಿದ್ದು, ಅವರನ್ನು ಗೆಲ್ಲಿಸಿ ಎಂದಿದ್ದಾರೆ.

ಹಳೆ ಮೈಸೂರು ಪ್ರಾಂತ್ಯದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಹಳ ಒತ್ತಾಯ ಇದೆ ನಿಜ. ಆದರೆ ನಾನು ಕ್ಷೇತ್ರ ಖಾಲಿ ಮಾಡುತ್ತಿರುವುದರಿಂದ, ನಾನು ನಿಲ್ಲದೇ ಇರುವುದರಿಂದ ವಿಜಯೇಂದ್ರ ಶಿಕಾರಿಪುರ ತಾಲ್ಲೂಕಿನಿಂದಲೇ ಸ್ಪರ್ಧಿಸುತ್ತಾರೆ” ಎಂದಿದ್ದಾರೆ.

ಇತ್ತೀಚಿಗೆ ವಿಧಾನಸಭೆಯಿಂದ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ವಿಜಯೇಂದ್ರರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿತ್ತು. ಆಗ ಯಡಿಯೂರಪ್ಪ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಈಗ ಅವರು ತಮ್ಮ ಸ್ಥಾನಕ್ಕೆ ತಮ್ಮ ಮಗನೇ ಉತ್ತರಾಧಿಕಾರಿ ಎಂದುಘೋಷಿಸಿದ್ದಾರೆ.

ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕೆಲವೆ ದಿನಗಳಲ್ಲಿ ಕುಸಿದ 15,000 ಕೋಟಿ ವೆಚ್ಚದ ಎಕ್ಸ್‌ಪ್ರೆಸ್ ವೇ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

0
ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಭಾರತದಲ್ಲಿ ನಾಪತ್ತೆಯಾದ ಎಂಟು ದಿನಗಳ ನಂತರ ಕೋಲ್ಕತ್ತಾ ಪೊಲೀಸರು ಅವರ ತುಂಡರಿಸಿದ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಕೋಲ್ಕತ್ತಾ ಪೊಲೀಸರು ಹತ್ಯೆಯು ಪೂರ್ವ ನಿಯೋಜಿತ ಎಂದು ಹೇಳಿಕೊಂಡಿದ್ದಾರೆ. ಅನಾರ್...