Homeರಾಷ್ಟ್ರೀಯದೆಹಲಿ ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ

ದೆಹಲಿ ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ

- Advertisement -
- Advertisement -

ಜುಲೈ 23 ಗುರುವಾರ ನವ ದೆಹಲಿಯ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ರೈಲ್ವೆ ಉದ್ಯೋಗಿಗಳನ್ನು ಬಂಧಿಸಲಾಗಿದೆ. ನಾಲ್ವರು ಆರೋಪಿಗಳು ರೈಲ್ವೆಯ ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಗಳು ಎಂದು ತಿಳಿದು ಬಂದಿದೆ.

ಆರೋಪಿಗಳನ್ನು ಸತೀಶ್ ಕುಮಾರ್( 35), ವಿನೋದ್ ಕುಮಾರ್(38), ಮಂಗಲ್ ಚಂದ್(33), ಜಗದೀಶ್ ಚಂದ್(37) ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುರುವಾರ ತಡರಾತ್ರಿ ಪ್ಲಾಟ್‌ಫಾರ್ಮ್‌ನಲ್ಲಿರುವ ರೈಲು ದೀಪದ ಗುಡಿಸಲಿನೊಳಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಇಬ್ಬರು ಆರೋಪಿಗಳು ತನ್ನ ಮೇಲೆ ಅತ್ಯಾಚಾರವೆಸಗಿದರೆ, ಇನ್ನಿಬ್ಬರು ಹೊರಗೆ ಕಾವಲು ಕಾಯುತ್ತಿದ್ದರು ಎಂದು ಮಹಿಳೆ ದೂರುನೀಡಿದ್ದಾರೆ.

ಮಹಿಳೆಯು ಬೆಳಿಗ್ಗೆ 3.27 ರ ಸುಮಾರಿಗೆ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆಯ ಬಗ್ಗೆ ಮಹಿಳೆ ತಿಳಿಸಿದ್ದಾರೆ. ತಕ್ಷಣ ಠಾಣೆಯಿಂದ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ ಎಂದು ರೈಲ್ವೆ ಡಿಸಿಪಿ ಹರೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ – ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

ಆರೋಪಿಗಳಲ್ಲಿ ಒಬ್ಬನಾದ ಸತೀಶ್ ಕುಮಾರ್‌ ಗುರುವಾರ ಕರೆ ಮಾಡಿ ತಮ್ಮ ಹೊಸ ಮನೆಗೆ ತನ್ನ ಮಗನ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸಿದರು. ರಾತ್ರಿ 10.30ರ ಸುಮಾರಿಗೆ ಸತೀಶ್ ಅವರನ್ನು ಕೀರ್ತಿನಗರ ಮೆಟ್ರೋ ನಿಲ್ದಾಣದಲ್ಲಿ ಭೇಟಿಯಾದೆ. ನಂತರ ನನ್ನನ್ನು ಹೊಸದಿಲ್ಲಿ ರೈಲು ನಿಲ್ದಾಣಕ್ಕೆ ಕರೆದೊಯ್ದು ಅಲ್ಲಿ ಮೂವರು ಆರೋಪಿಗಳನ್ನು ಭೇಟಿಮಾಡಿಸಿದ್ದಾನೆ ಎಂದು ಸಂತ್ರಸ್ಥೆ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

0
ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. ಇದಲ್ಲದೆ ವರದಿಯಲ್ಲಿ ರೋಹಿತ್‌ ವೇಮುಲಾ 'ದಲಿತ ಅಲ್ಲ', ತನ್ನ “ನಿಜವಾದ ಜಾತಿಯ ಗುರುತು”...