Homeರಾಷ್ಟ್ರೀಯಶಾಲೆ ಮುಚ್ಚಿಸಲು ಬಂದ ಎಬಿವಿಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿ ವಾಪಾಸು ಕಳುಹಿಸಿದ ಮುಖ್ಯೋಪಾಧ್ಯಾಯಿನಿ

ಶಾಲೆ ಮುಚ್ಚಿಸಲು ಬಂದ ಎಬಿವಿಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿ ವಾಪಾಸು ಕಳುಹಿಸಿದ ಮುಖ್ಯೋಪಾಧ್ಯಾಯಿನಿ

- Advertisement -
- Advertisement -

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರಾಜಂಪೇಟೆ ಪಟ್ಟಣದ ಜಿಲ್ಲಾ ಪಂಚಾಯತ್‌‌ ಬಾಲಕಿಯರ ಪ್ರೌಢಶಾಲೆಯಲ್ಲಿ, ಶಾಲೆ ಮುಚ್ಚುವಂತೆ ಒತ್ತಾಯಿಸಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಾಯಕ ದಾಸರಿ ಅಶೋಕ್ ಎಂಬವರಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

ಎಬಿವಿಪಿ ಆಂಧ್ರಪ್ರದೇಶದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿರುವ ಅಶೋಕ್‌ ಅವರು ಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವಿ ಅವರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದರಿಂದ ಕಪಾಲ ಮೋಕ್ಷ ಮಾಲಾಗಿದೆ ಎಂದು ಸಾಕ್ಷಿ ಪತ್ರಿಕೆ ವರದಿ ಮಾಡಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಗಳ ವಿಲೀನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಎಬಿವಿಪಿ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿ, ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿಸಿದ್ದರು. ಇದೆ ವೇಳೆ ಎಬಿವಿಪಿ ನಾಯಕ ಅಶೋಕ್ ಅವರು ತಮ್ಮ ಇತರ ಮುಖಂಡರೊಂದಿಗೆ ಗರ್ಲ್ಸ್ ಹೈಸ್ಕೂಲ್‌ಗೆ ಬೆಳಿಗ್ಗೆ 11 ಗಂಟೆಗೆ ಶಾಲೆಗೆ ತಲುಪಿದ್ದರು. ಅಲ್ಲಿ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವಿ ಅವರೊಂದಿಗೆ ತಕ್ಷಣ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ಶಾಲೆ ಮುಚ್ಚುವಂತೆ ಕೇಳಿದ್ದರು.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ಆದರೆ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವೆ ಅವರು ಇದಕ್ಕೆ ಒಪ್ಪದೆ, ಮಧ್ಯಾಹ್ನದ ಊಟದ ನಂತರ ಮಕ್ಕಳನ್ನು ಮನೆಗೆ ಕಳುಹಿಸುವುದಾಗಿ ಎಬಿವಿಪಿ ಮುಖಂಡರಿಗೆ ತಿಳಿಸಿದ್ದರು. ಆದರೆ ಇದಕ್ಕೆ ಒಪ್ಪದ ಅಶೋಕ್ ಅವರು ವಿದ್ಯಾರ್ಥಿನಿಯರನ್ನು ತಕ್ಷಣವೆ ಮನೆಗೆ ಕಳುಹಿಸುವಂತೆ ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯೋಪಾಧ್ಯಾಯಿನಿ ವಿದ್ಯಾರ್ಥಿಗಳನ್ನು ಈಗಲೇ ಮನೆಗೆ ಕಳುಹಿಸಿದರೆ ಮಧ್ಯಾಹ್ನದ ಊಟ ಮತ್ತು ಅವರಿಗಾಗಿ ಬೇಯಿಸಿ ಸಿದ್ಧಪಡಿಸಿದ ಮೊಟ್ಟೆಗಳು ವ್ಯರ್ಥವಾಗುತ್ತವೆ ಎಂದು ವಿವರಿಸಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅನೇಕ ವಿದ್ಯಾರ್ಥಿಗಳ ಪೋಷಕರು ಮನೆಯಲ್ಲಿ ಇರುವುದಿಲ್ಲ, ಕೆಲಸಕ್ಕೆ ಹೋಗಿರುತ್ತಾರೆ. ಹಾಗಾಗಿ ಈಗಲೇ ಮಕ್ಕಳನ್ನು ಕಳುಹಿಸಿದರೆ ಅವರು ಊಟವಿಲ್ಲದೆ ಹೋಗಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದರು.

ಆದರೆ ಅಶೋಕ್ ಇದನ್ನು ಒಪ್ಪದೆ ಹಠಮಾರಿ ದೋರಣೆ ತೆಳೆದು ಮುಖ್ಯೋಪಾಧ್ಯಾಯಿನಿ ಮೇಲೆ ರೇಗಲು ಪ್ರಾರಂಭಿಸಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಸಾಕ್ಷಿ ಪತ್ರಿಕೆ ವರದಿ ಮಾಡಿದೆ. ಈ ವೇಳೆ ಅವರ ಮಾತಿಗೆ ಕುಪಿತಗೊಂಡ ಲಕ್ಷ್ಮಿದೇವಿ ಅವರು ಬಿಗಿಯಾಗಿ ಕಪಾಳ ಮೋಕ್ಷ ಮಾಡಿ ಅವರನ್ನು ವಾಪಾಸು ಕಳುಹಿಸಿದ್ದಾರೆ.

ಇದನ್ನೂ ಓದಿ: 60 ವರ್ಷದ ಮಹಿಳೆಗೆ ಕಿರುಕುಳ: ಎಬಿವಿಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷನ ಬಂಧನ

ಘಟನೆಯ ವೇಳೆ ಪೊಲೀಸರು ಕೂಡಾ ಸ್ಥಳದಲ್ಲಿ ಇದ್ದರು. “ವಿದ್ಯಾರ್ಥಿಗಳಿಗೆ ಊಟ ನೀಡಿದ ನಂತರ ಅವರನ್ನು ಮನೆಗೆ ಕಳುಹಿಸಿ ನಂತರ ಶಾಲೆಯನ್ನು ಮುಚ್ಚಲು ಮುಖ್ಯೋಪಾಧ್ಯಾಯಿನಿ ಸಿದ್ದರಿದ್ದರು. ಆದರೆ ಅಶೋಕ್ ಹಠಮಾರಿ ಧೋರಣೆ ತೆಳೆದು ಅಸಭ್ಯವಾಗಿ ನಡೆದಿದ್ದರಿಂದ ಇದು ನಡೆದಿದೆ” ಎಂದು ಪ್ರತ್ಯಕ್ಷದರ್ಶಿಗಳು ಮುಖ್ಯೋಪಾಧ್ಯಾಯಿನಿಯ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಸಾಕ್ಷಿ ಪತ್ರಿಕೆ ಹೇಳಿದೆ.

ವಿಡಿಯೊ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲಾ ಮುಖ್ಯೋಪಾಧ್ಯಾಯರು ಆ ದರಿದ್ರ ಮುಂಡೆಮಗನಿಗೆ ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ಎಬಿವಿಪಿ ಲೋಫರ್ಸ್‌ಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಒದ್ದು ಒಳಗೆ ಹಾಕಿ ಎಲುಬು ಮರಿಬೇಕು.

  2. Inviting troubles ಅನ್ನೋದು ಇದಕ್ಕೇ. ಸಂಘಿಗಳು ತೀರಾ ನೀಚ ಮತ್ತು ಕೊಳಕು ಸ್ವಭಾವದವರು. ಆ ಶಿಕ್ಷಕಿಗೆ ಸರಕಾರ ಸೂಕ್ತ ರಕ್ಷಣೆ ಒದಗಿಸಲಿ.

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...