Homeಮುಖಪುಟನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

- Advertisement -
- Advertisement -

ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಮಸ್ಕರಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಮೆರಾಗಳನ್ನು ನೋಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಆಮ್ ಆದ್ಮಿ ಪಕ್ಷದ ನಾಯಕರೊಬ್ಬರು ಟ್ವೀಟ್ ಮಾಡಿದ ವೀಡಿಯೊ ಈಗ ಪರವಿರೋಧದ ಚರ್ಚೆಗೆ ಕಾರಣವಾಗಿದೆ.

ಎಎಪಿ ನಾಯಕ ಸಂಜಯ್ ಸಿಂಗ್ ಅವರು ಮಾಡಿರುವ ಪೋಸ್ಟ್‌ ತಪ್ಪುದಾರಿಗೆಳೆಯುವಂತಿದೆ ಎಂದು ಬಿಜೆಪಿ ಟೀಕಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೂಲ ವೀಡಿಯೋದಲ್ಲಿ ಪ್ರಧಾನಮಂತ್ರಿಯವರು ರಾಷ್ಟ್ರಪತಿಗಳ ನಮನಕ್ಕೆ ಪ್ರತಿಕ್ರಿಯೆ ನೀಡಿದ ಬಳಿಕ ಕ್ಯಾಮೆರಾದತ್ತ ನೋಡುತ್ತಿರುವುದು ದಾಖಲಾಗಿದೆ. ಆದರೆ ಎಡಿಟ್ ಮಾಡಿದ ಬಳಿಕ ವಿಡಿಯೊವನ್ನು ಹರಿಬಿಡಲಾಗಿದೆ.

ಸಂಜಯ್ ಸಿಂಗ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋಕ್ಕೆ ವಿರುದ್ಧವಾಗಿ ರಾಷ್ಟ್ರಪತಿ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಸಂಜಯ್ ಸಿಂಗ್, “ನಿರ್ಗಮಿತ ರಾಷ್ಟ್ರಪತಿಗೆ ಅವಮಾನ ಮಾಡಲಾಗಿದೆ. ಇದಕ್ಕಿಂತ ದುರದೃಷ್ಟಕರ ಸಂಗತಿ ಬೇರೊಂದಿಲ್ಲ. ನಿಮ್ಮ ಅವಧಿ ಮುಗಿದ ಬಳಿಕ ನಿಮ್ಮ ಕಡೆ ಇವರು ತಿರುಗಿಯೂ ನೋಡುವುದಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

“ಎಡಿಟ್ ಮಾಡಿದ ಕ್ಲಿಪ್ ಅನ್ನು ಹಂಚಿಕೊಳ್ಳಲಾಗಿದೆ. ಸಾರ್ವಜನಿಕ ಡೊಮೈನ್‌ನಲ್ಲಿ ಪ್ರಧಾನಿ ಮೋದಿ ರಾಷ್ಟ್ರಪತಿಗಳಿಗೆ ಶುಭಾಶಯ ಕೋರುತ್ತಿರುವ ಚಿತ್ರಗಳಿವೆ. ಆದರೂ, ಅಂತಹ ಆರೋಪ ಹೊರಿಸಲಾಗಿದೆ, ಉದ್ದೇಶವೇನು?” ಎಂದು ಪೂನವಾಲ ಪ್ರಶ್ನಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಎಡಿಟ್ ಮಾಡಿದ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಬಿಜೆಪಿ ಈ ಹಿಂದೆ ಹಲವು ವಿಡಿಯೊಗಳನ್ನು ತಿರುಚಿ ಹಂಚಿಕೊಂಡ ಉದಾಹರಣೆಗಳಿವೆ. ಆದರೆ ಪ್ರತಿಪಕ್ಷಗಳೂ ಕೆಲವೊಮ್ಮೆ ಈ ಆರೋಪಕ್ಕೆ ಗುರಿಯಾಗಿವೆ.

ಇತ್ತೀಚೆಗೆ ಕರ್ನಾಟಕ ರಾಜ್ಯ ಬಿಜೆಪಿ ಘಟಕವು ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌ ಹೇಳಿಕೆಯನ್ನು ತಿರುಚಿ ಪೋಸ್ಟ್ ಮಾಡಿತ್ತು. ರಮೇಶ್ ಕುಮಾರ್‌ ಮಾತನಾಡಿದ್ದೇ ಬೇರೆಯ ವಿಷಯವಾಗಿತ್ತು.

ಪ್ರತಿಭಟನಾ ರ್‍ಯಾಲಿಯಲ್ಲಿ ಮಾತನಾಡಿದ ರಮೇಶ್ ಕುಮಾರ್, “ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಟ್ಟಿದ್ದೇವೆ. ಈಗ ನಮಗೆ ಅದರ ಋಣ ತೀರಿಸುವ ಸಮಯ ಬಂದಿದೆ, ಈ ಕಿಂಚಿತ್ ತ್ಯಾಗಕ್ಕೆ ತಯಾರಾಗದೆ ಹೋದ್ರೆ ನಾವು ಇನ್ನಮುಂದೆ ತಿನ್ನುವ ಅನ್ನದಲ್ಲಿ ಹುಳ ಬೀಳುತ್ತೆ” ಎಂದು ಹೇಳಿದ್ದರು. ಆದರೆ ಬಿಜೆಪಿ ಪೋಸ್ಟ್ ಮಾಡಿದ್ದ ವಿಡಿಯೊದಲ್ಲಿ “3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ” ಎಂದಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...