Homeಕರ್ನಾಟಕಪ್ರವೀಣ್ ಮೃತದೇಹ ನೋಡಲು ತಡವಾಗಿ ಬಂದ ಜನಪ್ರತಿನಿಧಿಗಳು; ಬಿಜೆಪಿಗೆ ಧಿಕ್ಕಾರ ಕೂಗಿದ ಉದ್ರಿಕ್ತರು

ಪ್ರವೀಣ್ ಮೃತದೇಹ ನೋಡಲು ತಡವಾಗಿ ಬಂದ ಜನಪ್ರತಿನಿಧಿಗಳು; ಬಿಜೆಪಿಗೆ ಧಿಕ್ಕಾರ ಕೂಗಿದ ಉದ್ರಿಕ್ತರು

ಶವ ಮೆರವಣಿಗೆ ವೇಳೆ ಯಾರಿಗೂ ತೊಂದರೆ ಕೊಡಬೇಡಿ, ಜೈಕಾರ ಮತ್ತು ಘೋಷಣೆ ಕೂಗಬೇಡಿ ಎಂದು ಪ್ರವೀಣ್ ಅವರ ಕುಟುಂಬಿಕರು ವಿನಂತಿಸಿದ್ದರು

- Advertisement -
- Advertisement -

ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಮೃತದೇಹದ ಮೆರವಣಿಗೆಯನ್ನು ಸಂಘ ಪರಿವಾರದ ಸಂಘಟನೆಗಳು ನಡೆಸುತ್ತಿವೆ. ಈ ನಡುವೆ ತಡವಾಗಿ ಮೃತದೇಹ ನೋಡಲು ಬಂದ ಬಿಜೆಪಿ ಶಾಸಕರು ಮತ್ತು ಸ್ಥಳೀಯ ನಾಯಕರ ವಾಹನವನ್ನು ಉದ್ರಿಕ್ತ ಜನರು ತಡೆದು ನಿಲ್ಲಿಸಿ, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ.

ಪ್ರವೀಣ್ ಅವರ ಕುಟುಂಬಿಕರು ಮೃತದೇಹವಿದ್ದ ಆಸ್ಪತ್ರೆಯಲ್ಲಿ ಮಾತನಾಡಿ,‘‘ಮೆರವಣಿಗೆ ವೇಳೆ ಯಾರಿಗೂ ತೊಂದರೆ ಕೊಡಬೇಡಿ. ಯಾರೂ ಜೈಕಾರ, ಘೋಷಣೆ ಕೂಗಬೇಡಿ” ಎಂದು ವಿನಂತಿಸಿದ್ದರು. ಅದಾಗಿಯೂ ಸೇರಿದ್ದ ಜನರು ಜಯಕಾರ ಕೂಗಿ, ಘೋಷಣೆಗಳನ್ನು ಹಾಕುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಸ್ಪತ್ರೆಯಲ್ಲಿ ಮಾತನಾಡಿದ ಪ್ರವೀಣ್ ಕುಟುಂಬದ ಸದಸ್ಯರೊಬ್ಬರು, “ಬಿಜೆಪಿ ಸಚಿವರು ಶವವನ್ನು ಮುಂದಿಟ್ಟು ಅವರು ಶೋ ಮಾಡುವುದು ಬೇಡ. ಏರ್‌ಪೋರ್ಟ್‌‌ ಅಲ್ಲಿದ್ದಾರೆ ಎಂದು ಹೇಳುತ್ತಾ ನಮ್ಮ ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ನಿನ್ನೆ ರಾತ್ರಿ ಘಟನೆ ನಡೆದಿದೆ, ಆದರೆ ಸಚಿವರು ಇನ್ನೂ ಸ್ಥಳಕ್ಕೆ ತಲುಪಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೃತದೇಹವನ್ನು ನಮ್ಮಷ್ಟಕ್ಕೆ ನಾವು ಕೊಂಡೊಯ್ಯುತ್ತೇವೆ. ಯಾರೂ ಕೂಡಾ ಜಯಕಾರ, ಘೋಷಣೆಗಳನ್ನು ಕೂಗಬಾರದು. ಮೆರವಣಿಯಲ್ಲಿ ಯಾರಿಗೂ ತೊಂದರೆ ನೀಡಬೇಡಿ. ನಾವು ನಮ್ಮ ಕುಟುಂಬದ ಸದಸ್ಯನನ್ನು ಕಳೆದುಕೊಂಡಿದ್ದೇವೆ. ಅವನ ಆತ್ಮಕ್ಕೆ ಶಾಂತಿ ಸಿಗಬೇಕು, ಅದಕ್ಕಾಗಿ ನೀವೆಲ್ಲರೂ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಕುಟುಂಬಸ್ಥರ ಮನವಿಯ ಹೊರತಾಗಿಯೂ ಸೇರಿದ್ದ ಜನರು ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡನ ಕೊಲೆ 

ಅದರಂತೆ ಪುತ್ತೂರು ನಗರದಿಂದ ಶವ ಮೆರವಣಿಗೆ ಹೊರಟು, ದರ್ಬೆ, ಸವಣೂರು, ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ‌ ಮೃತದೇಹವನ್ನು ಕೊಂಡೊಯ್ಯಲಾಗಿದೆ. ಈ ನಡುವೆ ತಡವಾಗಿ ಬಂದಿರುವ ಬಿಜೆಪಿ ನಾಯಕರ ವಾಹನವನ್ನು ಮೆರವಣಿಯಲ್ಲಿದ್ದ ಉದ್ರಿಕ್ತ ಜನರು ತಡೆದಿದ್ದು, ಅವರಿಗೆ ಧಿಕ್ಕಾರ ಕೂಗಿದ್ದಾರೆ.

ಶವ ಮೆರವಣಿಗೆ ಹಿನ್ನೆಲೆಯಲ್ಲಿ ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪುತ್ತೂರು ಉಪವಿಭಾಗ ವ್ಯಾಪ್ತಿಯ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಬುಧವಾರ(ಜು.27) ಬೆಳಗ್ಗೆ 6ರಿಂದ ಅನ್ವಯವಾಗುವಂತೆ ಜುಲೈ 28ರ ಮಧ್ಯರಾತ್ರಿಯವರೆಗೆ ಸೆಕ್ಷನ್ 144 ಜಾರಿಗೊಳಿಸಿ ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಎಂ. ಆದೇಶ ಹೊರಡಿಸಿದ್ದಾರೆ.

ಕೊಲೆಯ ಹಿನ್ನಲೆಯಲ್ಲಿ ನಿನ್ನೆ ರಾತ್ರಿಯಿಂದಲೇ ಸುಳ್ಯ ತಾಲೂಕಿನ ಮುಖ್ಯ ಪೇಟೆಗಳಲ್ಲಿರುವ ಅಂಗಡಿಗಳು ಮಾತ್ರವಲ್ಲದೆ ಸಣ್ಣ ಪುಟ್ಟ ಊರುಗಳ ಅಂಗಡಿಗಳನ್ನು ಬಿಜೆಪಿಪರ ಸಂಘಟನೆಯ ಕಾರ್ಯಕರ್ತರು ಮುಚ್ಚಿಸಿದ್ದಾರೆ. ಸುಬ್ರಹ್ಮಣ್ಯ ಮತ್ತು ಪುತ್ತೂರು ನಗರವನ್ನೂ ಬಂದ್‌ ಮಾಡಲಾಗಿದೆ.

ಇದನ್ನೂ ಓದಿ: ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ವಾರದ ಹಿಂದೆ ಕ್ಷುಲ್ಲಕ ಕಾರಣಕ್ಕೆ ಬೆಳ್ಳಾರೆಯಲ್ಲಿ ಮಸೂದ್‌ ಎಂಬ ಯುವಕನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಬಜರಂಗದಳದ ಐವರನ್ನು ಬಂಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...