Homeರಾಷ್ಟ್ರೀಯತಮಿಳುನಾಡು: ಶಾಲಾ ಬಾಲಕಿಯ ಸಾವು ಸರಣಿ ಮುಂದುವರಿಕೆ; 2 ವಾರಗಳಲ್ಲಿ 4ನೇ ಪ್ರಕರಣ

ತಮಿಳುನಾಡು: ಶಾಲಾ ಬಾಲಕಿಯ ಸಾವು ಸರಣಿ ಮುಂದುವರಿಕೆ; 2 ವಾರಗಳಲ್ಲಿ 4ನೇ ಪ್ರಕರಣ

- Advertisement -
- Advertisement -

ಕಳೆದೆರಡು ವಾರಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿರುವ ಶಾಲಾ ಬಾಲಕಿಯರ ಸಾವಿನ ಸರಣಿಗೆ ಮತ್ತೊಂದು ಸಾವು ಸೇರ್ಪಡೆಯಾಗಿದೆ. 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಮಂಗಳವಾರ ಶಿವಕಾಶಿಯ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ ಎನ್‌ಡಿಟಿವಿ ವರದಿ ಮಾಡಿದೆ. ಆದರೆ “ತನಿಖೆ ಪೂರ್ಣಗೊಳ್ಳುವವರೆಗೂ ನಾವು ಏನನ್ನೂ ಹೇಳುವುದಿಲ್ಲ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಅದು ಉಲ್ಲೇಖಿಸಿದೆ. ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಪತ್ರ ಇನ್ನೂ ಪತ್ತೆಯಾಗಿಲ್ಲ. ಬಾಲಕಿಯು ಆಗಾಗ್ಗೆ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ 12 ನೇ ತರಗತಿಯ ಮೂವರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಸಾವಿಗೀಡಾಗಿರುವ ಬಾಲಕಿ 11 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ. ರಾಜ್ಯದ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಶವವಾಗಿ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಶಿವಕಾಶಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ಕಡಲೂರು ವಿದ್ಯಾರ್ಥಿನಿಯು ನಾಲ್ಕು ಪುಟಗಳ ಆತ್ಮಹತ್ಯೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ತನ್ನ ಹೆತ್ತವರು ತನ್ನ ಮೇಲೆ ಇಟ್ಟಿರುವ ಐಎಎಸ್ ಆಕಾಂಕ್ಷೆಗಳನ್ನು ಪೂರೈಸಲು ಅಸಮರ್ಥಳಾಗಿರುವುದರಿಂದ ಕೃತ್ಯ ಎಸಗುತ್ತಿರುವುದಾಗಿ ಬರೆದಿದ್ದಾರೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಕಾರ್ತಿಕ್ ಹೇಳಿದ್ದಾರೆ.

ಮರುಕಳಿಸುತ್ತಿರುವ ವಿದ್ಯಾರ್ಥಿನಿಯರ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ವಿದ್ಯಾರ್ಥಿನಿಯರು ಆತ್ಮಹತ್ಯೆಯ ಆಲೋಚನೆಗಳನ್ನು ದೂರವಿಡುವಂತೆ ಮನವಿ ಮಾಡಿದ್ದಾರೆ. “ಹೆಣ್ಣು ಮಕ್ಕಳನ್ನು ಯಾವತ್ತೂ ಆತ್ಮಹತ್ಯಾ ಯೋಚನೆಗೆ ತಳ್ಳಬಾರದು. ವಿದ್ಯಾರ್ಥಿನಿಯರಿಗೆ ಲೈಂಗಿಕ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ನಂಬಿಕೆಗಳಲ್ಲಿ ಹಸ್ತಕ್ಷೇಪವಿಲ್ಲ, ಆದರೆ ತಮಿಳರನ್ನು ವಿಭಜಿಸಲು ಧರ್ಮ ಬಳಸಿದರೆ ವಿರೋಧಿಸುತ್ತೇವೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್

ಸೋಮವಾರ, ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ 12 ನೇ ತರಗತಿಯ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ.

ಇತ್ತೀಚೆಗೆ ನಡೆದ ನಾಲ್ಕು ಸಾವುಗಳಲ್ಲಿ ಮೊದಲನೆಯದು ಜುಲೈ 13 ರಂದು ಕಲ್ಲಕುರಿಚಿ ಜಿಲ್ಲೆಯಲ್ಲಿ ವರದಿಯಾಗಿದೆ. ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯು ಖಾಸಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಘಟನೆಯಿಂದಾಗಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡರು.

ಕಲ್ಲಾಕುರಿಚಿ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರು ಶಿಕ್ಷಕರು ವಿದ್ಯಾರ್ಥಿನಿಯನ್ನು, ‘ಶೈಕ್ಷಣಿಕವಾಗಿ ಹಿಂದುಳಿದಿದ್ದಕ್ಕಾಗಿ ಅವಮಾನಿಸಿದ್ದರು’ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡು: ತಂದೆಯಿಂದಲೆ ನವವಿವಾಹಿತ ಮಗಳು, ಅಳಿಯನ ಕೊಲೆ

ಆದಾಗ್ಯೂ, ಬಾಲಕಿಯ ಪೋಷಕರು, ಅಪರಾಧದ ಸ್ಥಳದಲ್ಲಿ ದೈಹಿಕ ಹೊಡೆದಾಟ ನಡೆದಿರುವ ಲಕ್ಷಣಗಳಿವೆ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ನಂತರ ಮದ್ರಾಸ್ ಹೈಕೋರ್ಟ್ ಪುನರಾವರ್ತಿತ ಶವಪರೀಕ್ಷೆಗೆ ಆದೇಶ ನೀಡಿತು. ಶಿಕ್ಷಣ ಸಂಸ್ಥೆಗಳಲ್ಲಿನ ಸಾವುಗಳ ಬಗ್ಗೆ ಸಿಬಿಐ-ಸಿಐಡಿ ತನಿಖೆ ನಡೆಸುವಂತೆಯೂ ಹೈಕೋರ್ಟ್ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...