Homeಕರ್ನಾಟಕಪ್ರವೀಣ್‌ ಕೊಲೆ ಪ್ರಕರಣ: ನಳಿನ್‌ ಕಾರು ಉರುಳಿಸಲು ಬಿಜೆಪಿ ಕಾರ್ಯಕರ್ತರ ಯತ್ನ; ಲಾಠಿ ಚಾರ್ಜ್

ಪ್ರವೀಣ್‌ ಕೊಲೆ ಪ್ರಕರಣ: ನಳಿನ್‌ ಕಾರು ಉರುಳಿಸಲು ಬಿಜೆಪಿ ಕಾರ್ಯಕರ್ತರ ಯತ್ನ; ಲಾಠಿ ಚಾರ್ಜ್

- Advertisement -
- Advertisement -

ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಭೇಟಿ ನೀಡಿದ ವೇಳೆ ಪ್ರತಿಭಟನೆಯನ್ನು ಎದುರಿಸಬೇಕಾಯಿತು.

ಬಿಜೆಪಿ ಕಾರ್ಯಕರ್ತರು ನಳಿನ್ ಕುಮಾರ್ ಅವರಿಗೆ ಧಿಕ್ಕಾರ ಕೂಗಿದರು. ‘ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ’ ಎಂದು ಪ್ರಶ್ನಿಸಿದ ಅವರು, ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಕೊಲೆಗೀಡಾಗಿರುವ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಅಂತಿಮ‌ ದರ್ಶನಕ್ಕಾಗಿ ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಒಟ್ಟಿಗೆ ಬಂದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್‌ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ.

“ಕಾರನ್ನು ಉರುಳಿಸಲೂ ಕಾರ್ಯಕರ್ತರು ಯತ್ನಿಸಿದರು. ಟೈರ್​ಗಳಿಂದ ಗಾಳಿ ಹೊರಬಿಟ್ಟರು. ಪರಿಸ್ಥಿತಿ ಕೈಮೀರುವುದು ಮನಗಂಡ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚೆದುರಿಸಿದರು. ಪೊಲೀಸ್ ಭದ್ರತೆಯಲ್ಲಿಯೇ ನಳಿನ್ ಕುಮಾರ್ ಕಟೀಲ್ ಸ್ಥಳದಿಂದ ಹೊರನಡೆದರು” ಎಂದು ವರದಿಯಾಗಿದೆ.

ಪೊಲೀಸರೊಂದಿಗೆ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ‘ಬೇಕೇ ಬೇಕು, ನ್ಯಾಯ ಬೇಕು’ ಎಂಬ ಘೋಷಣೆ ಮೊಳಗಿಸಿದರು. ಬೆಳ್ಳಾರೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬಿಗಿ ಬಂದೋಬಸ್ತ್ ಹಾಕಲಾಗಿದೆ. ಅಂಗಡಿಗಳನ್ನು ಮುಚ್ಚಿಸುತ್ತಿರುವ ಪೊಲೀಸರು ಗುಂಪು ಸೇರಿದ್ದ ಕಾರ್ಯಕರ್ತರನ್ನು ಲಾಠಿ ಬೀಸಿ ಚೆದುರಿಸುತ್ತಿದ್ದಾರೆ. ಘಟನೆಯಲ್ಲಿ ಕೆಲವು ಕಾರ್ಯಕರ್ತರಿಗೆ ಪೆಟ್ಟುಬಿದ್ದಿದ್ದು ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಪೊಲೀಸರ ವಿರುದ್ಧ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿಲಾಗಿದೆ. ನಿಷೇಧಾಜ್ಞೆ ಜಾರಿ ಬಗ್ಗೆ ಪೊಲೀಸರು ಘೋಷಣೆ ಮಾಡುತ್ತಿದ್ದರೂ ಕಾರ್ಯಕರ್ತರು ಹೊರಬಂದಿದ್ದಾರೆ. ಹೀಗಾಗಿ ಕರಾವಳಿ ಕೆಲವು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...