Homeಮುಖಪುಟಮಂಕಿಪಾಕ್ಸ್: ಲಸಿಕೆ ಮತ್ತು ರೋಗನಿರ್ಣಯ ಕಿಟ್‌‌ ಅಭಿವೃದ್ಧಿಗೆ ಬಿಡ್‌ ಆಹ್ವಾನಿಸಿದ ICMR

ಮಂಕಿಪಾಕ್ಸ್: ಲಸಿಕೆ ಮತ್ತು ರೋಗನಿರ್ಣಯ ಕಿಟ್‌‌ ಅಭಿವೃದ್ಧಿಗೆ ಬಿಡ್‌ ಆಹ್ವಾನಿಸಿದ ICMR

ಸೋಂಕಿನ ವಿರುದ್ಧ ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ

- Advertisement -
- Advertisement -

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್‌) ಬುಧವಾರ ಮಂಕಿಪಾಕ್ಸ್ ಲಸಿಕೆ ತಯಾರಿಸಲು ಮತ್ತು ರೋಗವನ್ನು ಪತ್ತೆಹಚ್ಚುವ ಕಿಟ್‌ಗಳನ್ನು ಅಭಿವೃದ್ಧಿಪಡಿಸಲು ಬಿಡ್‌ಗಳನ್ನು ಆಹ್ವಾನಿಸಿದೆ. ಈ ಘೋಷಣೆಯ ನಂತರ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯು ಮಂಕಿಪಾಕ್ಸ್ ವೈರಸ್‌ನ ತಳಿಯನ್ನು ಯಶಸ್ವಿಯಾಗಿ ಪ್ರತ್ಯೇಕಿಸಿರುವುದಾಗಿ ಹೇಳಿದೆ.

ಭಾರತದಲ್ಲಿ ಇದುವರೆಗೆ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಮೂರು ಕೇರಳದಲ್ಲಿ ವರದಿಯಾಗಿದ್ದು, ಒಂದು ಪ್ರಕರಣ ನವದೆಹಲಿಯಲ್ಲಿ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಗ್ಲೇಂಡ್‌ನ ರಾಷ್ಟ್ರೀಯ ಆರೋಗ್ಯ ಸೇವೆಯ ಪ್ರಕಾರ, ಮಂಕಿಪಾಕ್ಸ್ ಅಪರೂಪದ ಸೋಂಕಾಗಿದ್ದು, ಇದು ಪಶ್ಚಿಮ ಅಥವಾ ಮಧ್ಯ ಆಫ್ರಿಕಾದ ಕೆಲವು ಭಾಗಗಳಲ್ಲಿ ದಂಶಕಗಳು (ಇಲಿ, ಅಳಿಲು, ಮುಳ್ಳುಹಂದಿ, ಮೊಲದ ರೀತಿಯ ಪ್ರಬೇಧಗಳು-Rodents) ಮತ್ತು ಸಸ್ತನಿಗಳಂತಹ ಕಾಡು ಪ್ರಾಣಿಗಳ ಮೂಲಕ ಹರಡುತ್ತದೆ.

ಈ ವೈರಸ್ ಸೌಮ್ಯವಾದ ಅನಾರೋಗ್ಯವನ್ನು ಉಂಟುಮಾಡುತ್ತದೆ ಮತ್ತು ಜ್ವರ, ತಲೆನೋವು, ಬೆನ್ನುನೋವು ಮತ್ತು ಚಿಕನ್‌‌ ಫಾಕ್ಸ್‌ ತರಹದ ಗುಳ್ಳೆಗಳಂತಹ ರೋಗಲಕ್ಷಣಗಳನ್ನು ಉಂಟುಮಾಡಬಹುದಾಗಿದೆ. ಸೋಂಕಿತ ವ್ಯಕ್ತಿಯ ಮಂಕಿಪಾಕ್ಸ್ ಚರ್ಮದ ಗುಳ್ಳೆಗಳನ್ನು ಮುಟ್ಟಿದರೆ ಅಥವಾ ರೋಗದಿಂದ ಬಳಲುತ್ತಿರುವವರ ಬಟ್ಟೆ, ಬೆಡ್ ಶೀಟ್ ಅಥವಾ ಟವೆಲ್ ಅನ್ನು ಬಳಸಿದರೆ ಸೋಂಕು ಹರಡಬಹುದು.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು, ಅಂತಿಮ ಉತ್ಪನ್ನದ ನಿವ್ವಳ ಮಾರಾಟದಲ್ಲಿ 5% ಕ್ಕಿಂತ ಕಡಿಮೆಯಿಲ್ಲದ ರಾಯಧನದ ಆಧಾರದ ಮೇಲೆ ಅನುಭವಿ ಲಸಿಕೆ ಮತ್ತು ರೋಗ ಪತ್ತೆ ಹಚ್ಚುವ ತಯಾರಕರೊಂದಿಗೆ ತಾವು ಸಹಕರಿಸಲು ಸಿದ್ಧವಾಗಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ರೋಗನಿರ್ಣಯ ಕಿಟ್‌‌ ಅಭಿವೃದ್ಧಿಪಡಿಸಲು ಮತ್ತು ಮೌಲ್ಯೀಕರಿಸಲು ತಯಾರಕರಿಗೆ ಇದು ಸಹಾಯ ಮಾಡುತ್ತದೆ ಎಂದು ಸಂಶೋಧನಾ ಸಂಸ್ಥೆ ಹೇಳಿದೆ.

ಸಾಮೂಹಿಕ ವ್ಯಾಕ್ಸಿನೇಷನ್ ಅಗತ್ಯವಿಲ್ಲ: WHO

ಮಂಕಿಪಾಕ್ಸ್ ವಿರುದ್ಧ ದೇಶಗಳು ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ರೋಗ ಪತ್ತೆ ಮತ್ತು ತಡೆಗಟ್ಟುವಿಕೆಗೆ ಸರ್ಕಾರಗಳು ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

“ಸಿಡುಬು ವಿರುದ್ಧ ಲಭ್ಯವಿರುವ ಲಸಿಕೆಯು ಮಂಗನ ಕಾಯಿಲೆಯ ವಿರುದ್ಧ ಕಾರ್ಯನಿರ್ವಹಿಸುತ್ತದೆಯೇ ಎಂಬ ಸಂಪೂರ್ಣ ಪರಿಣಾಮಕಾರಿತ್ವದ ಮಾಹಿತಿಯನ್ನು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಸೌಮ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, ಪುರುಷರೊಂದಿಗೆ ಲೈಂಗಿಕ ಸಂಬಂಧ ಇರಿಸಿಕೊಂಡಿರುವ ಪುರುಷರು ವೈರಸ್‌ನಿಂದ ಹೆಚ್ಚು ಪ್ರಭಾವಿತರಾಗುತ್ತಾರೆ ಎಂದು ಅವರು ಹೇಳಿದ್ದಾರೆ. ಇಂತಹ ಪುರುಷರು ತಮ್ಮ ಲೈಂಗಿಕ ಸಂಗಾತಿಗಳನ್ನು ಮಿತಿಗೊಳಿಸಲು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ರಾಜ್ಯ ಸರ್ಕಾರ

“ಪುರುಷರೊಂದಿಗೆ ಲೈಂಗಿಕ ಸಂಬಂಧ ಇಟ್ಟುಕೊಳ್ಳುವ ಪುರುಷರು ಈ ಕ್ಷಣದಲ್ಲಿ ನಿಮ್ಮ ಲೈಂಗಿಕ ಸಂಗಾತಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು, ಹೊಸ ಪುರುಷ ಸಂಗಾತಿಗಳೊಂದಿಗೆ ಲೈಂಗಿಕ ಸಂಪರ್ಕ ಏರ್ಪಡುವ ಮುನ್ನ ಮರುಪರಿಶೀಲಿಸಬೇಕು” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...