Homeಮುಖಪುಟನಮಗೂ ಸ್ವಲ್ಪ ವಿರಾಮ ನೀಡಿ, ಜಡ್ಜ್‌ಗಳನ್ನು ಟಾರ್ಗೆಟ್ ಮಾಡಲೂ ಒಂದು ಮಿತಿ ಇದೆ: ಜಸ್ಟೀಸ್ ಚಂದ್ರಚೂಡ್‌

ನಮಗೂ ಸ್ವಲ್ಪ ವಿರಾಮ ನೀಡಿ, ಜಡ್ಜ್‌ಗಳನ್ನು ಟಾರ್ಗೆಟ್ ಮಾಡಲೂ ಒಂದು ಮಿತಿ ಇದೆ: ಜಸ್ಟೀಸ್ ಚಂದ್ರಚೂಡ್‌

- Advertisement -
- Advertisement -

ನ್ಯಾಯಮೂರ್ತಿಗಳ ವಿರುದ್ಧ ವೈಯಕ್ತಿಕ ದಾಳಿ ನಡೆಸುವ ಪ್ರವೃತ್ತಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಗುರುವಾರ ಕಟುವಾಗಿ ಟೀಕಿಸಿದ್ದಾರೆ.

ಕ್ರಿಶ್ಚಿಯನ್ ಸಮುದಾಯದ ವಿರುದ್ಧದ ಹಿಂಸಾಚಾರದ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಅರ್ಜಿಯನ್ನು ಗುರುವಾರ ವಕೀಲರೊಬ್ಬರು ಪ್ರಸ್ತಾಪಿಸಿದರು. ಪ್ರಕರಣವನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ಕೋರಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನು ಆಲಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು, “ಸುಪ್ರೀಂ ಕೋರ್ಟ್ ಈ ವಿಷಯದ ವಿಚಾರಣೆಯನ್ನು ವಿಳಂಬ ಮಾಡುತ್ತಿದೆ ಎಂದು ಕೆಲವು ಜಾಲತಾಣಗಳು ವರದಿ ಮಾಡಿರುವುದನ್ನು ನೋಡಿದೆ” ಎಂದು ಉಲ್ಲೇಖಿಸಿದರು.

“ನಾನು ಕೋವಿಡ್‌ನಿಂದ ಬಳಲುತ್ತಿದ್ದೆ, ಆದ್ದರಿಂದ ವಿಷಯವನ್ನು ಕೈಗೆತ್ತಿಕೊಳ್ಳಲಾಗಲಿಲ್ಲ. ಆದರೆ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸುತ್ತಿದೆ ಎಂಬ ಸುದ್ದಿ ಲೇಖನವನ್ನು ನಾನು ಇತ್ತೀಚೆಗೆ ಓದಿದ್ದೇನೆ. ನಮಗೆ ವಿಶ್ರಾಂತಿ ನೀಡಿ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ನ್ಯಾಯಾಧೀಶರಲ್ಲಿ ಒಬ್ಬರು ಕೋವಿಡ್‌ನಿಂದ ಬಳಲುತ್ತಿದ್ದಾರೆ. ಅದಕ್ಕಾಗಿಯೇ ನಾವು ಪ್ರಕರಣ ಕೈಗೆತ್ತಿಕೊಳ್ಳಲು ಸಾಧ್ಯವಾಗಲಿಲ್ಲ. ನೀವು ನ್ಯಾಯಾಧೀಶರನ್ನು ಎಷ್ಟು ಗುರಿಯಾಗಿಸಬಹುದು? ಅದಕ್ಕೂ ಮಿತಿಯಿದೆ…. ಅಂತಹ ಸುದ್ದಿಗಳನ್ನು ಯಾರು ಪ್ರಕಟಿಸುತ್ತಿದ್ದಾರೆ?…” ಎಂದು ಕೇಳಿದ್ದಾರೆ.

ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಿದ ನಂತರ ಕೆಲವು ನ್ಯೂಸ್‌ ಪೋರ್ಟಲ್‌ಗಳು ಜುಲೈ 19ರಂದು ಸುದ್ದಿ ಪ್ರಕಟಿಸಿ, “ಭಾರತದ ಉನ್ನತ ನ್ಯಾಯಾಲಯವು ಕ್ರಿಶ್ಚಿಯನ್ ವಿರೋಧಿ ಹಿಂಸಾಚಾರದ ಅರ್ಜಿಯ ವಿಚಾರಣೆಯಲ್ಲಿ ವಿಳಂಬ ಮಾಡುತ್ತಿದೆ” ಎಂದು ವರದಿ ಮಾಡಿದ್ದವು. ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ವಿಚಾರಣೆ ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿತು.

ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ವಿರುದ್ಧ ನಡೆದಿರುವ ಹಿಂಸಾಚಾರ ಮತ್ತು ಗುಂಪು ದಾಳಿಗಳನ್ನು ನಿಲ್ಲಿಸಲು ನಿರ್ದೇಶನಗಳನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಏಪ್ರಿಲ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿರಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಬೆಂಗಳೂರು ಡಯಾಸಿಸ್‌ನ ಆರ್ಚ್‌ಬಿಷಪ್ ಡಾ. ಪೀಟರ್ ಮಚಾಡೊ ಅವರು ನ್ಯಾಷನ್‌ ಸೊಲಿಡಾರಿಟಿ ಫೋರಮ್‌‌, ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾದೊಂದಿಗೆ ಅರ್ಜಿ ಸಲ್ಲಿಸಿದ್ದಾರೆ.

ಜುಲೈ 11 ರಂದು, ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಎಎಸ್ ಬೋಪಣ್ಣ ಅವರ ಪೀಠವು ಜುಲೈ 15ಕ್ಕೆ ವಿಚಾರಣೆಯನ್ನು ಮುಂದೂಡಿತು. ಆದರೆ, ನ್ಯಾಯಮೂರ್ತಿ ಚಂದ್ರಚೂಡ್ ಅವರು ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕಾರಣ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಲಿಲ್ಲ.

“ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಧೀಶರ ವಿರುದ್ಧ ವೈಯಕ್ತಿಕ ದಾಳಿ ನಡೆಯುತ್ತಿದೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರು ವಿಷಾದ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...