Homeಕರ್ನಾಟಕಇಡಿ ವಿಚಾರಣೆಯಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ: ಡಿ.ಕೆ. ಶಿವಕುಮಾರ್‌ ಆರೋಪ

ಇಡಿ ವಿಚಾರಣೆಯಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ: ಡಿ.ಕೆ. ಶಿವಕುಮಾರ್‌ ಆರೋಪ

- Advertisement -
- Advertisement -

ಜುಲೈ 30 ರಂದು ಇಡಿ ವಿಚಾರಣೆ ಇದ್ದು, ನಾನು ನಾಳೆ ದೆಹಲಿಗೆ ತೆರಳುತ್ತಿದ್ದೇನೆ. ಆದರೆ ನನ್ನನ್ನು ಸಿಲುಕಿಸಲು ಹಲವರು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗುರುವಾರ ಚನ್ನಪಟ್ಟಣದಲ್ಲಿ ಆರೋಪಿಸಿದ್ದಾರೆ. ಅವರು ಗೌಡಗೆರೆಯ ಚಾಮುಂಡೇಶ್ವರಿ ದೇವಿಯ ಮಹಾಮಸ್ತಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

“ನಾನು ತಪ್ಪು ಮಾಡಿಲ್ಲ ಎಂದರೆ ಈ ತಾಯಿ ನನ್ನನ್ನು ರಕ್ಷಿಸುತ್ತಾಳೆ. ಕೆಲವರು ಏನೇನೋ ಆಸೆ ಪಡುತ್ತಿದ್ದಾರೆ. ನನ್ನನ್ನು ಸಿಲುಕಿಸಲು ಏನೇನೋ ಸಂಚು ಮಾಡುತ್ತಿದ್ದಾರೆ. ಆ ಬಗ್ಗೆ ನಿಧಾನವಾಗಿ ಮಾತನಾಡುತ್ತೇನೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನೇ ಬಿಡುತ್ತಿಲ್ಲ. ಇನ್ನು ನನ್ನನ್ನು ಬಿಡುತ್ತಾರೆಯೇ?” ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಿಯಲ್ಲಿ ಏನು ಕೇಳಿಕೊಂಡಿರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಕೆಲವರು ನನಗೆ ಮಾಡುತ್ತಿರುವ ತೊಂದರೆ ದೂರ ಮಾಡು. ಎಲ್ಲರ ದುಃಖ ದೂರ ಮಾಡು, ಈ ಭಾಗದ ಜನರಿಗೆ ನೆಮ್ಮದಿ ಶಾಂತಿ ಸಿಗಲಿ. ಒಳ್ಳೆಯ ಮಳೆ, ಬೆಳೆ ಹಾಗೂ ಜ್ಞಾನ ಸಿಗಲಿ. ಯಾರಿಗೂ ಅನ್ಯಾಯ ಆಗಬಾರದು, ನ್ಯಾಯ ದೊರಕಿಸಿ ಕೊಡು ಎಂದು ಪ್ರಾರ್ಥಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸರಕಾರ ಜನೋತ್ಸವ ಕಾರ್ಯಕ್ರಮ ರದ್ದು ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು,“ಅವರು ಜನೋತ್ಸವ ಮಾಡುವ ಅಗತ್ಯ ಇಲ್ಲ ಎಂದು ಮೊದಲೇ ಹೇಳಿದ್ದೆ. ರದ್ದು ಮಾಡಿರುವುದಕ್ಕೆ ಅಭಿನಂದಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ಯಾವುದೇ ಪಕ್ಷದ ಯುವಕ ಆದರೂ ಈ ರೀತಿ ಕಗ್ಗೊಲೆ ಆಗಬಾರದು. ಕಾರ್ಯಕರ್ತರ ನೋವಿನ ಬಗ್ಗೆ ನಮಗೆ ಅರಿವಿದೆ. ಈ ಪ್ರಕರಣ ಖಂಡಿಸುತ್ತೇನೆ. ಮುಖ್ಯಮಂತ್ರಿಗಳು ಎಲ್ಲಾ ಕಾನೂನು ಬಳಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವಂತ್ರ ನೋಡಿಕೊಳ್ಳಬೇಕು. ಕಾರ್ಯಕರ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಯಾವುದೇ ಪಕ್ಷ, ಧರ್ಮದವರಾದರೂ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ” ಎಂದು ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...