Homeಕರ್ನಾಟಕತುಮಕೂರು: ಬಲವಂತದ ಭೂ ಸ್ವಾಧೀನಕ್ಕೆ ರೈತ ಬಲಿ; ಆರೋಪ

ತುಮಕೂರು: ಬಲವಂತದ ಭೂ ಸ್ವಾಧೀನಕ್ಕೆ ರೈತ ಬಲಿ; ಆರೋಪ

- Advertisement -
- Advertisement -

ಪರಿಹಾರ ನೀಡದೆ ಭೂಮಿ ಕಿತ್ತುಕೊಂಡಿದ್ದರಿಂದಾಗಿ ಮನ ನೊಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲು ಕಟ್ಟೆ ಗ್ರಾಮದ ರೈತ ರಂಗಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆದ್ದಾರಿ ಕಾಮಗಾರಿ ವೇಗಕ್ಕೆ ಪಡೆದಿರುವ ಬಲಿ ಇದೆಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕೆ.ಬಿ.ಕ್ರಾಸ್‌ನಿಂದ ಹುಳಿಯಾರ್‌ವರೆಗೂ ರಸ್ತೆ ಕಾಮಗಾರಿ ನಡೆಸುವ ಉದ್ದೇಶಕ್ಕೆ ರಂಗಣ್ಣರವರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಪರಿಹಾರ ನೀಡಿರಲಿಲ್ಲ. ಪರಿಹಾರ ನೀಡದೆ ಭೂಮಿ ಬಿಡುವುದಿಲ್ಲ ಎಂದು ರಂಗಣ್ಣ ನ್ಯಾಯಯುತವಾಗಿ ಒತ್ತಾಯಿಸುತ್ತಿದ್ದರು. ಆದರೆ ರೈತನ ನ್ಯಾಯಬದ್ದವಾದ ಹಕ್ಕನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಲವಂತವಾಗಿ ಭೂಮಿ ಕಿತ್ತುಕೊಂಡಿದ್ದರು. ಇದರಿಂದ ಮನನೊಂದು ರೈತ ರಂಗಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರವೇ ಹೊಣೆ ಎಂದು ಸಮಿತಿ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ರಾಜ್ಯ ಸರ್ಕಾರವು 2019ರಲ್ಲಿ ಕರ್ನಾಟಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ತಂದಿತು. 10(ಎ) ಎನ್ನುವ ಹೊಸ ಪರಿಚ್ಛೇದವನ್ನು ಸೇರಿಸಿತು. ಆ ಮೂಲಕ ಭೂ ಸ್ವಾಧೀನಕ್ಕೆ ಬಾಧಿತ ರೈತ ಸಮುದಾಯದ ಒಪ್ಪಿಗೆ ಕಡ್ಡಾಯ ಎನ್ನುವ 2013ರ ಕಾಯ್ದೆಯ ಷರತ್ತನ್ನು ತೆಗೆದು ಹಾಕಿದೆ. ಪರಿಹಾರ ನೀಡದೇ ವಶಕ್ಕೆ ತೆಗೆದುಕೊಂಡ ಸಂದರ್ಭದಲ್ಲಿ ಕೋರ್ಟ್‌‌ನ ತಡೆಯಾಜ್ಞೆಯೂ ಯಾವುದೇ ಪರಿಣಾಮ ಬೀರದಂತೆ ಪರಿಚ್ಛೇದ 24(ಎ) ಗೆ ತಿದ್ದುಪಡಿ ತರಲಾಗಿದೆ. ಹೀಗೆ ಯಾವುದೇ ಸಾಮಾಜಿಕ ಪರಿಶೋಧನೆ ಇಲ್ಲದೇ, ರೈತ ಸಮುದಾಯದ ಒಪ್ಪಿಗೆ ಇಲ್ಲದೆ, ಯಾವುದೇ ಪರಿಹಾರ ನೀಡದೆ ರೈತರ ಭೂಮಿಯನ್ನು ಕಿತ್ತುಕೊಳ್ಳಲು ಸರ್ಕಾರಿ ಹಾಗೂ ಖಾಸಗಿ ಎಜೆನ್ಸಿಗಳಿಗೆ ಪರಮಾಧಿಕಾರ ನೀಡಿರುವ ಕರ್ನಾಟಕ ರಾಜ್ಯ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ 2019 ಅನ್ನು ರದ್ದುಪಡಿಸಬೇಕು ಕೆಪಿಆರ್‌ಎಸ್‌ ಒತ್ತಾಯಿಸಿದೆ.

ರೈತರನ್ನು ದಿವಾಳಿ ಮಾಡಿ ಅಭಿವೃದ್ಧಿ ಸಾಧಿಸುವ ಬಂಡವಾಳಶಾಹಿ ಅಭಿವೃದ್ಧಿ ಕಣ್ಣೋಟವನ್ನು ಕೈ ಬಿಟ್ಟು ಅಭಿವೃದ್ಧಿಯಲ್ಲಿ ರೈತ ಸಮುದಾಯದ ಉನ್ನತಿಯನ್ನು ಪ್ರಧಾನವಾಗಿ ಒಳಗೊಳ್ಳುವ ಸಂವಿಧಾನದ ಕಲ್ಯಾಣ ರಾಜ್ಯ ಕಣ್ಣೋಟವನ್ನು ಅಳವಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರ ಗಮನಕ್ಕೆ ತರದೇ, ರೈತರ ಒಪ್ಪಿಗೆ ಪಡೆಯದೇ, ರೈತರಿಗೆ ಪರಿಹಾರ ನೀಡದೇ ಭೂಮಿ ವಶಕ್ಕೆ ಪಡೆಯಬಾರದು ಎಂದು ಸಂಘಟನೆಯ ಅಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಯು.ಬಸವರಾಜು ಆಗ್ರಹಿಸಿದ್ದಾರೆ.

ಈಗಾಗಲೇ ಬೇಸಾಯ ನಷ್ಟ, ಸಾಲ ಬಾಧೆ ಕಾರಣಗಳಿಂದ ನಡೆಯುತ್ತಿರುವ ರೈತರ ಆತ್ಮಹತ್ಯೆ ಪಟ್ಟಿಗೆ ಸ್ವಾಧೀನದ ವಂಚನೆಯೂ ಸೇರ್ಪಡೆ ಆಗಿರುವುದು ಸರ್ಕಾರದ ಕ್ರೂರ ಮುಖವನ್ನು ಬಯಲುಗೊಳಿಸುತ್ತದೆ ಎಂದು ವಿಷಾದಿಸಿದ್ದಾರೆ.

ಬಲವಂತವಾಗಿ, ಯಾವುದೇ ಪರಿಹಾರ ನೀಡದೆ ಭೂ ಸ್ವಾಧೀನಕ್ಕೆ ಅವಕಾಶ ನೀಡಿರುವ ಕರ್ನಾಟಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ 2019 ರದ್ದಾಗಬೇಕು. ಈ ಕೂಡಲೇ ಹೆದ್ದಾರಿ ಕಾಮಗಾರಿಗೆ ಭೂಮಿ ಕಳೆದುಕೊಂಡಿರುವ ರೈತ ರಂಗಣ್ಣ ಕುಟುಂಬಕ್ಕೆ ಭೂ ಸ್ವಾಧೀನ ಪರಿಹಾರ ಹಣವನ್ನು 2013ರ ಕಾಯ್ದೆ ಪ್ರಕಾರ ಮಾರುಕಟ್ಟೆ ದರದ ನಾಲ್ಕು ಪಟ್ಟು ಪಾವತಿಸಬೇಕು. ಹೆದ್ದಾರಿ ಪ್ರಾಧಿಕಾರದ ಹಾಗೂ ರಾಜ್ಯ ಸರ್ಕಾರದ ಕಿರುಕುಳದಿಂದ ಪ್ರಾಣ ಕಳೆದುಕೊಂಡ ರಂಗಣ್ಣರವರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಯಂ ಉದ್ಯೋಗ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...