Homeಮುಖಪುಟಭಾರತಕ್ಕೆ ಬಂತು ಮೊದಲ ಪದಕ: ವೇಟ್ ಲಿಫ್ಟಿಂಗ್‌ನಲ್ಲಿ ಸಂಕೇತ್ ಸರ್ಗರ್‌ಗೆ ಬೆಳ್ಳಿ

ಭಾರತಕ್ಕೆ ಬಂತು ಮೊದಲ ಪದಕ: ವೇಟ್ ಲಿಫ್ಟಿಂಗ್‌ನಲ್ಲಿ ಸಂಕೇತ್ ಸರ್ಗರ್‌ಗೆ ಬೆಳ್ಳಿ

- Advertisement -
- Advertisement -

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ಎರಡನೇ ದಿನವಾದ ಇಂದು ಭಾರತ ಪದಕದ ಖಾತೆ ತೆರೆದಿದೆ. 55 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ 113 ಕೆಜಿ ಭಾರ ಎತ್ತಿರುವ ಭಾರತದ ಸ್ಪರ್ಧೆಯಲ್ಲಿ ಸಂಕೇತ್ ಸರ್ಗರ್ ಕ್ಲೀನ್ ಅಂಡ್ ಜರ್ಕ್‌ನಲ್ಲಿ ಒಟ್ಟು 135 ಕೆಜಿ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಭಾಜನರಾದರು.

ಮಲೇಷ್ಯಾದ ಮೊಹಮ್ಮದ್ ಅನಿಕ್ ಕ್ಲೀನ್ ಮತ್ತು ಜರ್ಕ್‌ನಲ್ಲಿ 142 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಸಂಕೇತ್ ಸರ್ಗರ್ 139 ಕೆಜಿ ಭಾರ ಎತ್ತುವಾಗ ಸತತವಾಗಿ ಎರಡು ಬಾರಿ ಪೌಲ್ ಆದರು ಮತ್ತು ಗಾಯಕ್ಕೊಳಗಾಗಿದ್ದರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

22 ವರ್ಷದ ಸಂಕೇತ್ ಸರ್ಗರ್ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯವರು. ಬಹುಶಿಸ್ತೀನಿ ಸ್ಪರ್ಧೆಯಲ್ಲಿ ಇದು ಅವರ ಮೊದಲ ಪದಕವಾಗಿದೆ.

ಇಂದು ಸ್ಟಾರ್ ವೇಟ್ ಲಿಫ್ಟರ್ ಮೀರಾಭಾಯಿ ಚಾನು ರವರು ಭಾರತದ ಪರವಾಗಿ ಕಣಕ್ಕಿಳಿದಿದ್ದಾರೆ. ಟೋಕಿಯೋ ಒಲಂಪಿಕ್ಸ್ ನ ಬೆಳ್ಳಿ ವಿಜೇತೆ ಆಗಿರುವ ಚಾನು ಕಾಮನ್ ವೆಲ್ತ್ ನ ಪದಕವನ್ನು ಗೆಲ್ಲುವ ಫೆವರೀಟ್‌ಗಳಲ್ಲಿ ಒಬ್ಬರಾಗಿದ್ದಾರೆ.

ಭಾರತದ ಶ್ರೀ ಹರಿ ನಟರಾಜ್ ಪುರುಷರ ವಿಭಾಗದ 100 ಮೀ ಬ್ಯಾಕ್ ಸ್ಟ್ರೋಕ್ ಈಜು ಸ್ಪರ್ಧೆಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು ಪದಕದ ಭರವಸೆ ಮೂಡಿಸಿದ್ದಾರೆ. ಶುಕ್ರವಾರದ ಪಂದ್ಯದಲ್ಲಿ 54.68. ಸೆ.ಗಳೊಂದಿಗೆ 3 ನೇ ಸ್ಥಾನ ಹಾಗೂ ಪಂದ್ಯದಲ್ಲಿ ಒಟ್ಟಾರೆ 5 ನೇ ಸ್ಥಾನ ಪಡೆದು ಸೆಮಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ಮಹಿಳಾ ಬಾಕ್ಸರ್ ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚು ಮತ್ತು 2018 ಮತ್ತು 2019 ರ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕ ಪಡೆದಿರುವ ಲವ್ಲೀನಾ ಬೊರ್ಗೊಹೈನ್ ಕಾಮನ್ ವೆಲ್ತ್ ಗೇಮ್ಸ್ ನ ಬಾಕ್ಸಿಂಗ್ ತಂಡದ ನೇತೃತ್ವ ವಹಿಸಿಕೊಂಡಿದ್ದು ಸ್ವರ್ಣ ಪದಕ ಗೆದ್ದುಕೊಡಬಲ್ಲ ನಿರೀಕ್ಷೆ ಹುಟ್ಟಿಸಿದ್ದಾರೆ.

ಇದನ್ನೂ ಓದಿ: ಟಿ20ಯಲ್ಲಿ ದಾಖಲೆ ಬರೆದ ನಾಯಕ ರೋಹಿತ್ ಶರ್ಮಾ: ವೆಸ್ಟ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...