Homeಸಿನಿಮಾಕ್ರೀಡೆವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಎರಡನೇ ಪದಕ: ಕಂಚು ಗೆದ್ದ ಕುಂದಾಪುರದ ಗುರುರಾಜ್‌

ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಎರಡನೇ ಪದಕ: ಕಂಚು ಗೆದ್ದ ಕುಂದಾಪುರದ ಗುರುರಾಜ್‌

- Advertisement -
- Advertisement -

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ಎರಡನೇ ದಿನವಾದ ಇಂದು ಭಾರತಕ್ಕೆ ಎರಡನೇ ಪದಕ ಲಭಿಸಿದೆ. 61 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಕುಂದಾಪುರದ ಗುರುರಾಜ್‌ ಪೂಜಾರಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಸ್ನಾಚ್ ವಿಭಾಗದಲ್ಲಿ 118 ಕೆಜಿ ಭಾರ ಎತ್ತಿದ ಅವರು, ಕ್ಲೀನ್ ಅಂಡ್ ಜರ್ಕ್‌ ವಿಭಾಗದಲ್ಲಿ 151 ಕೆಜಿ ಭಾರ ಎತ್ತುವ ಮೂಲಕ ಒಟ್ಟು 269 ಕೆಜಿ ಭಾರ ಎತ್ತಿ ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಇನ್ನು 55 ಕೆಜಿ ವಿಭಾಗದಲ್ಲಿ 113 ಕೆಜಿ ಭಾರ ಎತ್ತಿರುವ ಭಾರತದ ಸ್ಪರ್ಧೆಯಲ್ಲಿ ಸಂಕೇತ್ ಸರ್ಗರ್ ಕ್ಲೀನ್ ಅಂಡ್ ಜರ್ಕ್‌ನಲ್ಲಿ ಒಟ್ಟು 135 ಕೆಜಿ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಭಾಜನರಾದರು.

ಮಲೇಷ್ಯಾದ ಮೊಹಮ್ಮದ್ ಅನಿಕ್ ಕ್ಲೀನ್ ಮತ್ತು ಜರ್ಕ್‌ನಲ್ಲಿ 142 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಸಂಕೇತ್ ಸರ್ಗರ್ 139 ಕೆಜಿ ಭಾರ ಎತ್ತುವಾಗ ಸತತವಾಗಿ ಎರಡು ಬಾರಿ ಪೌಲ್ ಆದರು ಮತ್ತು ಗಾಯಕ್ಕೊಳಗಾಗಿದ್ದರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

22 ವರ್ಷದ ಸಂಕೇತ್ ಸರ್ಗರ್ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯವರು. ಬಹುಶಿಸ್ತೀನಿ ಸ್ಪರ್ಧೆಯಲ್ಲಿ ಇದು ಅವರ ಮೊದಲ ಪದಕವಾಗಿದೆ.

ಇಂದು ಸ್ಟಾರ್ ವೇಟ್ ಲಿಫ್ಟರ್ ಮೀರಾಭಾಯಿ ಚಾನು ರವರು ಭಾರತದ ಪರವಾಗಿ ಕಣಕ್ಕಿಳಿದಿದ್ದಾರೆ. ಟೋಕಿಯೋ ಒಲಂಪಿಕ್ಸ್ ನ ಬೆಳ್ಳಿ ವಿಜೇತೆ ಆಗಿರುವ ಚಾನು ಕಾಮನ್ ವೆಲ್ತ್ ನ ಪದಕವನ್ನು ಗೆಲ್ಲುವ ಫೆವರೀಟ್‌ಗಳಲ್ಲಿ ಒಬ್ಬರಾಗಿದ್ದಾರೆ.

ಭಾರತದ ಶ್ರೀ ಹರಿ ನಟರಾಜ್ ಪುರುಷರ ವಿಭಾಗದ 100 ಮೀ ಬ್ಯಾಕ್ ಸ್ಟ್ರೋಕ್ ಈಜು ಸ್ಪರ್ಧೆಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು ಪದಕದ ಭರವಸೆ ಮೂಡಿಸಿದ್ದಾರೆ. ಶುಕ್ರವಾರದ ಪಂದ್ಯದಲ್ಲಿ 54.68. ಸೆ.ಗಳೊಂದಿಗೆ 3 ನೇ ಸ್ಥಾನ ಹಾಗೂ ಪಂದ್ಯದಲ್ಲಿ ಒಟ್ಟಾರೆ 5 ನೇ ಸ್ಥಾನ ಪಡೆದು ಸೆಮಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ಮಹಿಳಾ ಬಾಕ್ಸರ್ ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚು ಮತ್ತು 2018 ಮತ್ತು 2019 ರ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕ ಪಡೆದಿರುವ ಲವ್ಲೀನಾ ಬೊರ್ಗೊಹೈನ್ ಕಾಮನ್ ವೆಲ್ತ್ ಗೇಮ್ಸ್ ನ ಬಾಕ್ಸಿಂಗ್ ತಂಡದ ನೇತೃತ್ವ ವಹಿಸಿಕೊಂಡಿದ್ದು ಸ್ವರ್ಣ ಪದಕ ಗೆದ್ದುಕೊಡಬಲ್ಲ ನಿರೀಕ್ಷೆ ಹುಟ್ಟಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಬಂತು ಮೊದಲ ಪದಕ: ವೇಟ್ ಲಿಫ್ಟಿಂಗ್‌ನಲ್ಲಿ ಸಂಕೇತ್ ಸರ್ಗರ್‌ಗೆ ಬೆಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...