Homeಮುಖಪುಟ‘ಸತ್ತರೂ ನಾನು ಶರಣಾಗುವುದಿಲ್ಲ’: ಇ.ಡಿ. ದಾಳಿ ಬಳಿಕ ಶಿವಸೇನಾ ನಾಯಕ ಸಂಜಯ್‌ ರಾವತ್‌ ಪ್ರತಿಕ್ರಿಯೆ

‘ಸತ್ತರೂ ನಾನು ಶರಣಾಗುವುದಿಲ್ಲ’: ಇ.ಡಿ. ದಾಳಿ ಬಳಿಕ ಶಿವಸೇನಾ ನಾಯಕ ಸಂಜಯ್‌ ರಾವತ್‌ ಪ್ರತಿಕ್ರಿಯೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಸಂಜಯ್ ರಾವುತ್ ಅವರನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಇಂದು ಸಂಜಯ್ ರಾವುತ್ ಅವರ ನಿವಾಸವನ್ನು ತಲುಪಿದೆ. “ಕೇಂದ್ರೀಯ ಸಂಸ್ಥೆಯ ತನಿಖೆಯು ನಕಲಿ ಸಾಕ್ಷ್ಯ ಆಧರಿಸಿದೆ” ಎಂದು ಶಿವಸೇನೆ ನಾಯಕ ರಾವುತ್‌ ಟ್ವೀಟ್ ಮಾಡಿದ್ದಾರೆ.

ಸಂಜಯ್‌ ರಾವುತ್‌ ಅವರಿಗೆ ಜುಲೈ 20 ಮತ್ತು ಜುಲೈ 27 ರಂದು ಎರಡು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಇ.ಡಿ. ಮುಂದೆ ಹಾಜರಾಗದ ಕಾರಣ, ಇ.ಡಿ. ತನಿಖಾಧಿಕಾರಿಗಳು ಇಂದು ರಾವುತ್‌ ಮನೆಗೆ ತಲುಪಿದ್ದಾರೆ. ಮುಂಬೈನಲ್ಲಿ ಚಾಲ್‌ (ವಠಾರ) ಪುನರಾಭಿವೃದ್ಧಿಗೆ ಸಂಬಂಧಿಸಿದಂತೆ ಸಂಜಯ್‌ ಅವರನ್ನು ಪ್ರಶ್ನಿಸಲು ಅಧಿಕಾರಿಗಳು ಆಗಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಆಪ್ತರಾಗಿರುವ ರಾವುತ್ ಅವರು, ‘ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ದ್ವೇಷದಿಂದ ನನ್ನನ್ನು ಟಾರ್ಗೆಟ್ ಮಾಡಲಾಗಿದೆ’ ಎಂದು ಆರೋಪಿಸಿದ್ದಾರೆ.

“ನನಗೂ ಯಾವುದೇ ಹಗರಣಕ್ಕೂ ಸಂಬಂಧವಿಲ್ಲ. ಶಿವಸೇನೆ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆ ಅವರ ಮೇಲೆ ಪ್ರಾಮಾಣ ಮಾಡಿ ಇದನ್ನು ಹೇಳುತ್ತಿದ್ದೇನೆ. ಬಾಳಾಸಾಹೇಬರು ನಮಗೆ ಹೋರಾಡಲು ಕಲಿಸಿದರು. ನಾನು ಶಿವಸೇನೆಗಾಗಿ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಅವರು ಇಂದು ಬೆಳಿಗ್ಗೆ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ. “ನಕಲಿ ಕ್ರಮವಿದು. ಸುಳ್ಳು ಸಾಕ್ಷ್ಯಗಳಿವು. ನಾನು ಶಿವಸೇನೆಯನ್ನು ಬಿಡುವುದಿಲ್ಲ. ಸತ್ತರೂ ನಾನು ಶರಣಾಗುವುದಿಲ್ಲ. ಜೈ ಮಹಾರಾಷ್ಟ್ರ” ಎಂದು ರಾವುತ್‌ ತಿಳಿಸಿದ್ದಾರೆ.

ಬಿಜೆಪಿ ಶಾಸಕ ರಾಮ್ ಕದಂ ಅವರು, “ಶಿವಸೇನಾ ನಾಯಕ ಏಕೆ ಸಮನ್ಸ್‌ಗೆ ಉತ್ತರ ನೀಡಿಲ್ಲ? ರಾವುತ್‌ ಅವರು ಅಮಾಯಕರಾಗಿದ್ದರೆ ಜಾರಿ ನಿರ್ದೇಶನಾಲಯಕ್ಕೆ ಏಕೆ ಹೆದರುತ್ತಾರೆ? ಅವರು ಪತ್ರಿಕಾಗೋಷ್ಠಿಗಳನ್ನು ನಡೆಸಲು ಸಮಯ ಹೊಂದಿದ್ದಾರೆ. ಆದರೆ ವಿಚಾರಣೆಗಾಗಿ ತನಿಖಾ ಸಂಸ್ಥೆಯ ಕಚೇರಿಗೆ ಭೇಟಿ ನೀಡಲು ಸಮಯ ಹೊಂದಿಲ್ಲ” ಎಂದು ಟೀಕಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 1 ರಂದು ರಾವುತ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಜುಲೈ 20 ರಂದು ಮತ್ತೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಯಿತು. ಆದರೆ ಸಂಸತ್‌ ಅಧಿವೇಶನದ ಕಾರಣ ಹಾಜರಾಗಲು ಸಾಧ್ಯವಿಲ್ಲ ಎಂದಿದ್ದರು. ಜುಲೈ 27 ರಂದು ಹಾಜರಾಗುವಂತೆ ತಿಳಿಸಲಾಯಿತು. ಆದರೆ ಅವರು ಹಾಜರಾಗಿರಲಿಲ್ಲ.

ಇದನ್ನೂ ಓದಿರಿ: ಕೇಶವಕೃಪಾದಲ್ಲಿ ಸಿದ್ಧವಾಯಿತೇ ಬಿಬಿಎಂಪಿ ವಾರ್ಡ್ ವಿಂಗಡಣೆಯ ವರದಿ?

ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿ, ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸಿದ ಏಕನಾಥ್ ಶಿಂಧೆಯವರ ಬಂಡಾಯದ ನಂತರ ಶಿವಸೇನೆಯ ಬಿಕ್ಕಟ್ಟನ್ನು ಶಮನ ಮಾಡುವಲ್ಲಿ ಸಂಜಯ್‌ ನಿರತರಾಗಿದ್ದಾರೆ. ಉದ್ಧವ್ ಠಾಕ್ರೆಯವರ ಬೆಂಬಲಕ್ಕೆ ರಾವುತ್ ನಿಂತಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ರಾಜಕೀಯ ನಾಟಕದ ನಡುವೆಯೇ ಜೂನ್ 28ರಂದು ಅವರಿಗೆ ಸಮನ್ಸ್ ನೀಡಿದಾಗ, “ಇಡಿ ನನ್ನನ್ನು ಕರೆಸಿದೆ ಎಂದು ನನಗೆ ಈಗಷ್ಟೇ ತಿಳಿದು ಬಂದಿದೆ. ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಬಾಳಾಸಾಹೇಬರ ಶಿವಸೈನಿಕರು ದೊಡ್ಡ ಕದನವನ್ನೇ ನಡೆಸುತ್ತಿದ್ದಾರೆ. ಇದು ನನ್ನನ್ನು ತಡೆಯುವ ಸಂಚು. ನೀವು ನನ್ನ ತಲೆ ಕಡಿದರೂ, ನಾನು ಗುವಾಹಟಿ ಮಾರ್ಗವನ್ನು ಹಿಡಿಯುವುದಿಲ್ಲ. ನನ್ನನ್ನು ಬಂಧಿಸಿ! ಜೈ ಹಿಂದ್!” ಎಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...