Homeಮುಖಪುಟಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಥರದ ಸಂಘಟನೆಗಳನ್ನು ನಿಷೇಧಿಸಬೇಕೆಂಬ ನಿರ್ಣಯವನ್ನು ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಸೇರಿದಂತೆ ಧಾರ್ಮಿಕ ಮುಖಂಡರು ತಾಳಿದ್ದಾರೆ.

“ಪಿಎಫ್‌ಐ ಥರದ ಸಂಘಟನೆಗಳು ವಿಭಜಕ ಅಜೆಂಡಾ ಹೊಂದಿವೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ” ಎಂಬ ಅಭಿಪ್ರಾಯ ನವದೆಹಲಿಯಲ್ಲಿ ಶನಿವಾರ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ, ವಿಭಜಕ ಕಾರ್ಯಸೂಚಿಯನ್ನು ಅನುಸರಿಸುವ, ನಮ್ಮ ನಾಗರಿಕರ ನಡುವೆ ವೈಷಮ್ಯವನ್ನು ಸೃಷ್ಟಿಸುವ ಪಿಎಫ್‌ಐ ಮತ್ತು ಅಂತಹ ಯಾವುದೇ ಸಂಘಟನೆಗಳನ್ನು ನಿಷೇಧಿಸಬೇಕು. ದೇಶದ ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಎಐಎಸ್‌ಎಸ್‌ಸಿ ಅಭಿಪ್ರಾಯ ತಾಳಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಯಾವುದಾದರೂ ಚರ್ಚೆಯ ವೇಳೆ ಯಾರಾದರೂ ಯಾವುದೇ ದೇವರುಗಳನ್ನು, ಪ್ರವಾದಿಗಳನ್ನು ಟಾರ್ಗೆಟ್ ಮಾಡಿ ಮಾತನಾಡಿದರೆ ಜನರು ಆ ಹೇಳಿಕೆಗಳನ್ನು ಖಂಡಿಸಬೇಕು ಎಂದು ಸೂಫಿಗಳು ಒತ್ತಾಯಿಸಿದ್ದಾರೆ.

ಎಐಎಸ್‌ಎಸ್‌ಸಿ ಮುಖ್ಯಸ್ಥ ಸೈಯದ್ ನಾಸಿರುದ್ದೀನ್ ಚಿಶ್ತಿ ಮಾತನಾಡಿ, “ಭಾರತದ ಜವಾಬ್ದಾರಿಯುತ ನಾಗರಿಕರಾಗಲು ತಮ್ಮ ಸಮುದಾಯವನ್ನು, ವಿಶೇಷವಾಗಿ ಯುವಜನರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಎಲ್ಲಾ ಧಾರ್ಮಿಕ ಮುಖಂಡರು ಹೊಂದಿದ್ದಾರೆ ಎಂಬ ಸಂದೇಶವನ್ನು ನಾವು ನೀಡಲು ಬಯಸುತ್ತೇವೆ” ಎಂದಿದ್ದಾರೆ. (ಇಂಡಿಯಾ ಟುಡೇ ವರದಿ)

“ಧರ್ಮಗಳು ಮತ್ತು ಅವುಗಳ ಅನುಯಾಯಿಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ ಎಂಬುದನ್ನು ಗಮನಿಸಿದ್ದೇವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಂಡು ಅಹಿತಕರ ಘಟನೆಗಳ ತಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. “ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುವ, ಅಂತರರಾಷ್ಟ್ರೀಯ ಪರಿಣಾಮಗಳನ್ನು ಉಂಟು ಮಾಡುವ, ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ತೀವ್ರಗಾಮಿ ಶಕ್ತಿಗಳನ್ನು ಎದುರಿಸಲು ವಿವಿಧ ಧರ್ಮಗಳ ನಾಯಕರು ಕ್ರಮ ವಹಿಸಬೇಕು” ಎಂದು ಆಶಿಸಿದರು.

“ಕೆಲವರು ಧರ್ಮದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಅದು ಇಡೀ ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿರಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

“ಈ ಘಟನೆಗಳನ್ನು ನೋಡಿ ನಾವು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ. ಧಾರ್ಮಿಕ ದ್ವೇಷವನ್ನು ಎದುರಿಸಲು, ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಯೊಂದು ಧಾರ್ಮಿಕ ಸಂಸ್ಥೆಯನ್ನು ಭಾರತದ ಭಾಗವಾಗಿ ಭಾವಿಸಬೇಕು. ಇದರಲ್ಲಿ ನಾವು ಒಟ್ಟಿಗೆ ಸಾಗಬೇಕು” ಎಂದು ದೋವಲ್ ಹೇಳಿದ್ದಾರೆ. ಭಾರತದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಹೇಳಿಕೆ ಹೊರಬಿದ್ದಿದೆ.

ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆಗೆ ಸಂಬಂಧಿಸಿದಂತೆ ಗಂಭೀರವಾದ ಚರ್ಚೆಯನ್ನು ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳ ನಡುವೆ ನಡೆಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ಸಂಘಟಕರು ಪಿಟಿಐಗೆ ಪ್ರತಿಕ್ರಿಯಿಸಿದ್ದಾರೆ.

ಶಾಂತಿ, ಸೌಹಾರ್ದತೆಯ ಸಂದೇಶವನ್ನು ಸಾರಲು, ಮೂಲಭೂತವಾದಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲಾ ಧರ್ಮಗಳನ್ನು ಒಳಗೊಂಡಂತೆ ಹೊಸ ಸಂಸ್ಥೆಯನ್ನು ರಚಿಸುವ ನಿರ್ಣಯವನ್ನು ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...