Homeಕರ್ನಾಟಕಚಿಕ್ಕಬಳ್ಳಾಪುರದಲ್ಲಿ 15 ಮಂದಿಗೆ ಚಾಕುವಿನಿಂದ ಇರಿದ ವ್ಯಕ್ತಿಯ ಬಂಧನ: ಡ್ರಗ್ಸ್ ಸೇವನೆ ಶಂಕೆ

ಚಿಕ್ಕಬಳ್ಳಾಪುರದಲ್ಲಿ 15 ಮಂದಿಗೆ ಚಾಕುವಿನಿಂದ ಇರಿದ ವ್ಯಕ್ತಿಯ ಬಂಧನ: ಡ್ರಗ್ಸ್ ಸೇವನೆ ಶಂಕೆ

- Advertisement -
- Advertisement -

ಚಿಕ್ಕಬಳ್ಳಾಪುರದಲ್ಲಿ ರೌಡಿಶೀಟರ್ ಒಬ್ಬ ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದು ಸುಮಾರು 15 ಮಂದಿಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಭಾನುವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಅರ್ಜುನ್ ಎಂಬ ವ್ಯಕ್ತಿ ಚಿಕ್ಕಬಳ್ಳಾಪುರದ ಬಿಬಿ ರಸ್ತೆ, ಕಾರ್ಖಾನೆ ಪೇಟೆ ಮತ್ತು ನಗರಸಭೆಯ ಸುತ್ತಾ ಸಿಕ್ಕ ಸಿಕ್ಕವರಿಗೆಲ್ಲ ಚಾಕುವಿನಿಂದ ಇರಿದು ಪರಾರಿಯಾಗಿದ್ದನು. ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದವರಿಗೆ ಚಿಕ್ಕಬಳ್ಳಾಪುರದಲ್ಲಿಯೇ ಚಿಕತ್ಸೆ ನೀಡಲಾಗಿತ್ತು.

ಈ ಪ್ರಕರಣದಲ್ಲಿ ರೌಡಿ ಶೀಟರ್ ಆಗಿರುವ ಅರ್ಜುನ್ ಬಾಪೂಜಿನಗರದ ನಿವಾಸಿಯಾಗಿದ್ದು, ಗಾಂಜಾ ಸೇವಿಸಿದ್ದು, ತೀವ್ರ ಮತ್ತಿನಲ್ಲಿ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ. ಆತನನ್ನು ಮಧ್ಯರಾತ್ರಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಕಳವಾರ ದೇವಾಲಯದ ಬಳಿ ಬಂಧಿಸಲಾಗಿದೆ. ಆತನ ಬಳಿಯಿದ್ದ ಚಾಕು, ಲಾಂಗ್ ಮತ್ತು ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಈ ಕುರಿತು ಸುಧಾಕರ್ ಮಾಹಿತಿ ನೀಡಿದ್ದು, “ಚಿಕ್ಕಬಳ್ಳಾಪುರ ನಗರದಲ್ಲಿ ನೆನ್ನೆ ರಾತ್ರಿ ನಡೆದ ಹಲ್ಲೆ ಪ್ರಕರಣದಲ್ಲಿ ದುಷ್ಕರ್ಮಿಯನ್ನು ಸಾಕ್ಷಿ ಸಮೇತ ಪತ್ತೆಹಚ್ಚಲಾಗಿದ್ದು ತಡರಾತ್ರಿ 3ಗಂಟೆ ಹೊತ್ತಿಗೆ ಬಂಧಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡಿದ್ದ 6 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಒಬ್ಬರಿಗೆ ಬೆಂಗಳೂರಿನ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

6 ಜನ ಗಾಯಾಳುಗಳು ಜೀವಾಪಾಯದಿಂದ ಪಾರಾಗಿದ್ದು ಅವರ ಚಿಕಿತ್ಸಾ ಜವಾಬ್ದಾರಿಯನ್ನು ನಾನು ಸಂಪೂರ್ಣವಾಗಿ ವಹಿಸಲು ನಿರ್ಧರಿಸಿದ್ದೇನೆ. ದುಷ್ಕರ್ಮಿಯನ್ನು ಶೀಘ್ರವಾಗಿ ಪತ್ತೆಹಚ್ಚಿ ಬಂಧಿಸಲು ರಾತ್ರಿಯಿಡೀ ಶ್ರಮಿಸಿದ ಎಸ್ಪಿ ನಾಗೇಶ್, ಡಿವೈಎಸ್ಪಿ ವಾಸುದೇವ್, ಸರ್ಕಲ್ ಇನ್ಸ್ಪೆಕ್ಟರ್ ರಾಜು ಮತ್ತು ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನೆರೆರಾಜ್ಯಗಳಲ್ಲಿಯೂ ಹೈನುಗಾರಿಕೆ ಬಿಕ್ಕಟ್ಟಿನಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...