ಹಾಸನ ಜಿಲ್ಲೆಯಲ್ಲಿ ಇಂದು ವಿದ್ಯಾರ್ಥಿನಿಯೊಬ್ಬರು ರೈಲು ಹಳಿ ಮೇಲೆ ಜಾರಿಬಿದ್ದು ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ರೈಲ್ವೇ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಪ್ರೀತಿ ಪುಟ್ಟಸ್ವಾಮಿ ಎಂಬ 22 ವರ್ಷದ ವಿದ್ಯಾರ್ಥಿನಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಪ್ರೀತಿಯವರ ತಂದೆ ಪುಟ್ಟಸ್ವಾಮಿ ಅವರು ಪ್ರೀತಿಯವರನ್ನು ಆಟೋದಲ್ಲಿ ಡ್ರಾಪ್ ಮಾಡಿದ ಬಳಿಕ ಈ ದುರ್ಘಟನೆ ನಡೆದಿದೆ. ಹಳಿಗಳ ಇನ್ನೊಂದು ಬದಿಗೆ ದಾಟಲು ಪ್ರಯತ್ನಿಸುತ್ತಿದ್ದಾಗ, ಪ್ರೀತಿ ಜಾರಿ ಬಿದ್ದಿದ್ದಾರೆ. ಮುಂದೆ ಬರುತ್ತಿದ್ದ ರೈಲು ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ.
ಫುಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಸನ-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಟೈರ್‌ಗಳನ್ನು ಸುಟ್ಟು ತಮ್ಮ ಆಕ್ರೋಶವನ್ನು ಹೊರಹಾಕಿದರು.
ಫುಟ್‌ಓವರ್ ಬ್ರಿಡ್ಜ್ ಇಲ್ಲದ ಕಾರಣ ಹಳಿಯನ್ನು ದಾಳಿ ಸ್ಥಳೀಯ ನಿವಾಸಿಗಳು ಮಾರುಕಟ್ಟೆ ಹಾಗೂ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಬೇಕಾಗಿದೆ.
ಹಾಸನ ಜಿಲ್ಲೆಯ ಅಂಕಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.
ಸೂಚನೆಗಳ ಹೊರತಾಗಿಯೂ ಹಳಿಗಳನ್ನು ದಾಟಲಾಗುತ್ತಿದೆ. ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಎಚ್ಚರಿಕೆ ಫಲಕಗಳನ್ನು ಹಾಕಲಾಗಿದೆ. ಆದರೆ ಕಾಲೇಜು ಮತ್ತು ಮಾರುಕಟ್ಟೆ ಸಮೀಪವಿರುವ ಕಾರಣ ಹಳಿಗಳನ್ನು ದಾಟಿ ಹೋಗುತ್ತಾರೆ ಎಂದು ಆರೋಪಿಸಲಾಗಿದೆ.


