Homeಮುಖಪುಟಮುಂಬೈ: 1,400 ಕೋಟಿ ರೂ. ಮೌಲ್ಯದ ಡ್ರಗ್ ವಶ; ರಸಾಯನಶಾಸ್ತ್ರ ಪದವೀಧರ ಅರೆಸ್ಟ್

ಮುಂಬೈ: 1,400 ಕೋಟಿ ರೂ. ಮೌಲ್ಯದ ಡ್ರಗ್ ವಶ; ರಸಾಯನಶಾಸ್ತ್ರ ಪದವೀಧರ ಅರೆಸ್ಟ್

- Advertisement -
- Advertisement -

ಮುಂಬೈ ಪೊಲೀಸರು ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ ಔಷಧ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 1,400 ಕೋಟಿ ರೂ. ಮೌಲ್ಯದ 703 ಕಿಲೋಗ್ರಾಂಗಳಷ್ಟು ಮೆಫೆಡ್ರೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಸಾವಯವ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರ ಸೇರಿದಂತೆ ಐವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಮುಂಬೈ ಅಪರಾಧ ವಿಭಾಗದ ಆಂಟಿ ನಾರ್ಕೋಟಿಕ್ ಸೆಲ್ (ಎಎನ್‌ಸಿ) ಔಷಧ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದೆ ಎಂದು ಅವರು ಹೇಳಿದ್ದಾರೆ. “ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಎಎನ್‌ಸಿ ತಂಡವು ಆವರಣದ ಮೇಲೆ ದಾಳಿ ನಡೆಸಿದೆ. ಈ ಸಮಯದಲ್ಲಿ ನಿಷೇಧಿತ ಔಷಧವಾದ ಮೆಫೆಡ್ರೋನ್ ಅನ್ನು ತಯಾರಿಸಲಾಗುತ್ತಿದೆ ಎಂದು ಕಂಡುಬಂದಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಲ್ವರು ಆರೋಪಿಗಳನ್ನು ಮುಂಬೈನಲ್ಲಿ ಬಂಧಿಸಿದ್ದರೆ, ಒಬ್ಬ ವ್ಯಕ್ತಿಯನ್ನು ನಲಸೋಪಾರಾದಲ್ಲಿ ಬಂಧಿಸಲಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಲಸೋಪಾರದಿಂದ ಬಂಧಿತ ಆರೋಪಿ ಸಾವಯವ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರನಾಗಿದ್ದು, ತನ್ನ ಕೌಶಲ್ಯವನ್ನು ಬಳಸಿಕೊಂಡು ಡ್ರಗ್ಸ್ ತಯಾರಿಸುತ್ತಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಮುಂಬೈ ಪೊಲೀಸರು ನಡೆಸಿದ ಅತಿ ದೊಡ್ಡ ಡ್ರಗ್ಸ್ ಸಾಗಾಟ ಇದಾಗಿದೆ ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು; ತಜ್ಞರ ಸಾಕ್ಷಿ

ಮೆಫೆಡ್ರೋನ್ ಅನ್ನು ‘ಮಿಯಾಂವ್ ಮಿಯಾವ್’ ಅಥವಾ MD ಎಂದೂ ಕರೆಯುತ್ತಾರೆ. ಇದು ಸಿಂಥೆಟಿಕ್ ಮಾದಕ ವಸ್ತವಾಗಿದ್ದು, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ (NDPS) ಕಾಯಿದೆಯಡಿಯಲ್ಲಿ ನಿಷೇಧಿಸಲಾದ ಸೈಕೋಟ್ರೋಪಿಕ್ ವಸ್ತುವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ...

0
ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ...