Homeಮುಖಪುಟಉತ್ತರ ಪ್ರದೇಶ: ಮಹಿಳೆಯ ಮೇಲೆ ಕೈ ಮಾಡಿ, ಅಶ್ಲೀಲ ಪದಗಳಲ್ಲಿ ನಿಂದಿಸಿದ ಬಿಜೆಪಿ ಮುಖಂಡ

ಉತ್ತರ ಪ್ರದೇಶ: ಮಹಿಳೆಯ ಮೇಲೆ ಕೈ ಮಾಡಿ, ಅಶ್ಲೀಲ ಪದಗಳಲ್ಲಿ ನಿಂದಿಸಿದ ಬಿಜೆಪಿ ಮುಖಂಡ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ ಎಂಬುವವರು ನೋಯ್ಡಾದ ಗ್ರ್ಯಾಂಡ್ ಒಮ್ಯಾಕ್ಸ್ ಸೊಸೈಟಿ ಸೆಕ್ಟರ್ 93B ಅಪಾರ್ಟ್‌ಮೆಂಟ್‌ನ ಮಹಿಳಾ ನಿವಾಸಿಯೊಬ್ಬರನ್ನು ಅಶ್ಲೀಲ ಪದಗಳಿಂದ ನಿಂದಿಸಿ, ಕೈ ಮಾಡಿರುವ ಘಟನೆ ವರದಿಯಾಗಿದೆ.

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಕುರಿತು ಅಪಾರ್ಟ್‌ಮೆಂಟ್ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಶ್ರೀಕಾಂತ್ ತ್ಯಾಗಿ ಬಳಿ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಟ್ಟ ಕೊಳಕು ಭಾಷೆಯಿಂದ ನಿಂದಿಸಿರುವ ಆತ ಮಹಿಳೆಯನ್ನು ತಳ್ಳಿ ಹಲ್ಲೆಗೆ ಮುಂದಾಗಿದ್ದಾರೆ.

ನಿನ್ನ ಪತಿಗೆ ಹೇಳು ಈ ಜಾಗದಲ್ಲಿ ಏನು ಮಾಡಬಾರದು ಎಂದು ಶ್ರೀಕಾಂತ್ ತ್ಯಾಗಿ ಕೆಟ್ಟದಾಗಿ ಬೈಯ್ದು ಹೇಳುತ್ತಾರೆ. ಆಗ ಈ ಜಾಗ ಯಾರದು ಎಂದು ಮಹಿಳೆ ಪ್ರಶ್ನಿಸುತ್ತಾರೆ. ನಾನು ಖರೀದಿಸಿದ್ದೇನೆ ಎಂದು ತ್ಯಾಗಿ ಹೇಳುತ್ತಾರೆ. ಆಗ ಅದಕ್ಕೆ ದಾಖಲೆ ತೋರಿಸಿ ಎಂದು ಮಹಿಳೆ ಕೇಳಿದಾಗ ಸಿಟ್ಟಿಗೆದ್ದ ಆತ ತಳ್ಳಿ ಕೆಟ್ಟ ಭಾಷೆಯಲ್ಲಿ ನಿಂದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಸದ್ಯ ಆ ವಿಡಿಯೋ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ಬಿಜೆಪಿ ಮುಖಂಡರು ಮಹಿಳೆಯರನ್ನು ನಡೆಸಿಕೊಳ್ಳುವ ಪರಿ ಇದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಹಿಳೆಯನ್ನು ನಿಂದಿಸಿದ, ಹಲ್ಲೆಗೆ ಮುಂದಾದ ಶ್ರೀಕಾಂತ್ ತ್ಯಾಗಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಶ್ರೀಕಾಂತ್ ತ್ಯಾಗಿ ಅಕ್ರಮ ಕಟ್ಟಡ ಕಟ್ಟುತ್ತಿರುವುದು ಕಳೆದ ಎರಡು ವರ್ಷಗಳಿಂದ ಅಲ್ಲಿ ವಿವಾದವಾಗಿ ಮಾರ್ಪಟ್ಟಿದೆ. ಈ ಹಿಂದೆಯೂ ನೋಯ್ಡಾ ಆಡಳಿತವು ಆತನಿಗೆ ಅಕ್ರಮ ಕಟ್ಟಡ ತೆರವುಗೊಳಿಸುವಂತೆ ನೋಟಿಸ್ ಜಾರಿಗೊಳಿಸಿತ್ತು. ಆದರೆ ಆತ ಅದನ್ನು ಇಂದಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಅದನ್ನು ಪ್ರಶ್ನಿಸಿ ಮಹಿಳಾ ನಿವಾಸಿಯ ಮೇಲೆ ಕೈಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಶ್ರೀಕಾಂತ್ ತ್ಯಾಗಿ ಎಂಬುವವರು ಶಾಸಕನಲ್ಲದಿದ್ದರೂ ತನ್ನ ಕಾರಿಗೆ MLA ಎಂಬ ಸ್ಟಿಕ್ಕರ್ ಅಂಟಿಸಿಕೊಂಡು ವಸೂಲಿಗಿಳಿದಿದ್ದಾರೆ ಎಂದು ಹಲವು ಟ್ವಿಟರ್ ಬಳಕೆದಾರರು ಆರೋಪಿಸಿದ್ದಾರೆ.

ಇದನ್ನೂ ಓದಿ; ಬೆಂಗಳೂರಿನಲ್ಲಿ ಭೀಕರ ಘಟನೆ: ತನ್ನ ಮಗಳನ್ನು ನಾಲ್ಕನೇ ಅಂತಸ್ತಿನಿಂದ ಎಸೆದು ಕೊಂದ ವೈದ್ಯೆಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....