ಬಿಜೆಪಿ ನಾಯಕರೇ ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಬಿಜೆಪಿ ನಾಯಕರಿಗೆ ಶನಿವಾರ ಕರೆ ನೀಡಿದ್ದಾರೆ. ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂತದ್ದಲ್ಲ ಎಂದು ಅವರು ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಹಿಂದಿ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದರು. ಇದರ ನಂತರ ಎಚ್ಚೆತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅದನ್ನು ಡಿಲೀಟ್ ಮಾಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, “ನಾನು ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಅನಗತ್ಯವಾಗಿ ತುರುಕಿದ್ದ ಹಿಂದಿಯನ್ನು ಕಿತ್ತೊಗೆದಿದೆ. ಕರ್ನಾಟಕದ ಬಿಜೆಪಿ ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂತದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ” ಎಂದು ಕರೆ ನೀಡಿದ್ದಾರೆ.
ನಾನು ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಅನಗತ್ಯವಾಗಿ ತುರುಕಿದ್ದ ಹಿಂದಿಯನ್ನು ಕಿತ್ತೊಗೆದಿದೆ.@BJP4Karnataka ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂತದ್ದಲ್ಲ.
ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ. pic.twitter.com/FxWd2lTO3e
— Siddaramaiah (@siddaramaiah) August 6, 2022
ಶುಕ್ರವಾರ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ ಅವರು, “ರಾಜ್ಯದ ಬೊಮ್ಮಾಹಿ ನೇತೃತ್ವದ ಸರ್ಕಾರ ಕೇಂದ್ರದ ಬಿಜೆಪಿ ಸರ್ಕಾರದ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ” ಎಂದು ಹೇಳಿದ್ದರು. ಅವರು ಈ ಟ್ವೀಟ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಹಾಕಿದ್ದ ಹಿಂದಿ ಪೋಸ್ಟರ್‌ನ ಚಿತ್ರವನ್ನು ಹಾಕಿದ್ದರು.
ಇದನ್ನೂ ಓದಿ: ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ
“ಒಕ್ಕೂಟ ಸರ್ಕಾರದ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು. ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ” ಎಂದು ಆಗ್ರಹಿಸಿದ್ದರು.
ರಾಜ್ಯದ @BJP4Karnataka ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ.
ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ.
3/6#ಹಿಂದಿಹೇರಿಕೆ pic.twitter.com/226YNXQ6DK— Siddaramaiah (@siddaramaiah) August 5, 2022
“ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್ ಸ್ಪಷ್ಟಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು?” ಎಂದು ಅವರು ಪ್ರಶ್ನಿಸಿದ್ದರು.
ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ
“ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರಿಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು..!!” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.



ಕರ್ನಾಟಕ ರಾಜ್ಯದ ಜನತೆ ಈಗಲೇ ಎಚ್ಚೆತ್ತುಕೊಂಡರೆ ಒಳ್ಳೆಯದು ಇಲ್ಲವಾದರೆ ಮುಂದೊಂದು ದಿನ ಬಿಜೆಪಿಗರೆಲ್ಲ ಕಾರು ಏರಿ ಕರ್ನಾಟಕವನ್ನ ನಾಗಪುರ್ ಮಾಡಿ ಎಲ್ಲಾ ಪ್ರಜೆಗಳ ಕೈಯಲ್ಲಿ ಕತ್ತಿ ತಲವಾರು ಗಳನ್ನು ಕೊಟ್ಟು ಕರ್ನಾಟಕದ ಗಾಂಧಿ ಹರ್ಡೇಕರ್ ರಲ್ಲ ಗೋಲ್ವಾಲ್ಕರ್ ರಂಥ ಇತಿಹಾಸವನ್ನೇ ಸೃಷ್ಟಿ ಮಾಡುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ ನಿಜವಾಗಿಯೂ ನಮ್ಮ ಕರ್ನಾಟಕ ಯಾವಾಗಲೂ ನಮ್ಮ ದೇಶ ಉಳಿಯಬೇಕಾದರೆ ಪಿ ಆರ್ ಎಸ್ ಎಸ್ ಹಾಗೂ ಬಿಜೆಪಿಯನ್ನು ಈ ದೇಶದಿಂದಲೇ ಓಡಿಸಬೇಕು