Homeಮುಖಪುಟರಾಜಸ್ಥಾನ: ಬಿಜೆಪಿ ಶಾಸಕನ ಕಿರುಕುಳಕ್ಕೆ ಬೇಸತ್ತು ಸಂತ ಆತ್ಮಹತ್ಯೆ- ಆರೋಪ

ರಾಜಸ್ಥಾನ: ಬಿಜೆಪಿ ಶಾಸಕನ ಕಿರುಕುಳಕ್ಕೆ ಬೇಸತ್ತು ಸಂತ ಆತ್ಮಹತ್ಯೆ- ಆರೋಪ

- Advertisement -
- Advertisement -

ರೆಸಾರ್ಟ್ ನಿರ್ಮಿಸುವುದಕ್ಕಾಗಿ ದಾರಿ ಬೇಕಿದ್ದು, ಅದಕ್ಕಾಗಿ ಆಶ್ರಮದ ಭೂಮಿಯನ್ನು ಬಿಟ್ಟುಕೊಡುವಂತೆ ಬಿಜೆಪಿ ಶಾಸಕ ಒತ್ತಡ ಹೇರಿದ ಕಾರಣದಿಂದ ಸಂತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಜಲೋರ್‌ನಲ್ಲಿ ಘಟನೆ ನಡೆದಿದೆ.

ಸ್ಥಳದಲ್ಲಿದ್ದ ಡೆತ್‌ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಡೆತ್‌ನೋಟ್‌ನಲ್ಲಿ ಏನಿದೆ ಎಂಬ ವಿಷಯವನ್ನು ಬಹಿರಂಗಪಡಿಸಿಲ್ಲ.

ರವಿನಾಥ್ (60) ಅವರ ದೇಹವು ಗುರುವಾರ ರಾತ್ರಿ ಜಾಲೋರ್‌ನ ರಾಜಾಪುರ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನಂತರ, ಆಶ್ರಮದಲ್ಲಿದ್ದ ಭಕ್ತರು ಶವವನ್ನು ಕೆಳಗಿಳಿಸಲು ಪೊಲೀಸರಿಗೆ ಅವಕಾಶ ನೀಡಲಿಲ್ಲ. ಅದಕ್ಕೂ ಮೊದಲು ಡೆತ್‌ನೋಟ್‌ನಲ್ಲಿರುವ ವಿಷಯವನ್ನು ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ನಡುವೆ ತನ್ನ ಮೇಲೆ ಬಂದಿರುವ ಆರೋಪಗಳನ್ನು ಭಿನ್ಮಾಲ್ ಶಾಸಕ ಪೂರರಾಮ್ ಚೌಧರಿ ನಿರಾಕರಿಸಿದ್ದಾರೆ. ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಆಶ್ರಮದ ಸಂತರು ನೀಡಿದ ದೂರಿನ ಮೇರೆಗೆ ಪೂರರಾಮ್‌ ಚೌದರಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

“ಅವರು ಇನ್ನೂ ಶವವನ್ನು ಹೊರತೆಗೆದಿಲ್ಲ. ನಾವು ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವಂತೆ ಅವರಲ್ಲಿ ಕೋರಿದ್ದೇವೆ” ಎಂದು ಅಗರ್‌ವಾಲಾ ಹೇಳಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

ಡೆತ್‌ನೋಟ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಒಪ್ಪಿಕೊಂಡಿದ್ದರೂ ಅದರಲ್ಲಿನ ವಿಷಯವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಬಹಿರಂಗಪಡಿಸಿದರೆ ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದಿದ್ದಾರೆ.

ರಾಜಾಪುರದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಬಗ್ಗೆ ಶುಕ್ರವಾರ ಬೆಳಿಗ್ಗೆ ಮಾಹಿತಿ ಸಿಕ್ಕಿತು ಎಂದು ಎಸ್ಪಿ ತಿಳಿಸಿದ್ದಾರೆ.

ಆತ್ಮಹತ್ಯೆಗೆ ಭಿನ್ಮಲ್ ಶಾಸಕರೇ ಕಾರಣ ಎಂದು ಅಲ್ಲಿನ ಸಂತರು ಆರೋಪಿಸಿದ್ದಾರೆ. ಶಾಸಕರು ಕಳೆದ ಕೆಲವು ದಿನಗಳಿಂದ ಕಿರುಕುಳ ನೀಡುತ್ತಿದ್ದರು ಎಂಬುದು ತಿಳಿದುಬಂದಿದೆ. ಚೌಧರಿ ಅವರು ಆಶ್ರಮದ ಪಕ್ಕದಲ್ಲಿ ಒಂದು ತುಂಡು ಭೂಮಿಯನ್ನು ಹೊಂದಿದ್ದು ಅಲ್ಲಿ ರೆಸಾರ್ಟ್ ನಿರ್ಮಿಸಲು ಬಯಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸ್ಪಾ ಮ್ಯಾನೇಜರ್‌‌ ಮತ್ತು ಗ್ರಾಹಕನಿಂದ ಉದ್ಯೋಗಿಯ ಮೇಲೆ ಸಾಮೂಹಿಕ ಅತ್ಯಾಚಾರ

“ಆದರೆ ಚೌದರಿಯವರ ಜಾಗಕ್ಕೆ ತಲುಪಬೇಕಾದರೆ ಆಶ್ರಮದ ಮೂಲಕ ಸಾಗಬೇಕಿತ್ತು. ಇದಕ್ಕಾಗಿ ಚೌಧರಿಯವರು ಆಶ್ರಮದ ಭೂಮಿಯನ್ನು ನೀಡುವಂತೆ ರವಿನಾಥ್ ಅವರಲ್ಲಿ ಒತ್ತಾಯಿಸುತ್ತಿದ್ದರು” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆರೋಪಗಳನ್ನು ಶಾಸಕ ಚೌದರಿ ತಳ್ಳಿಹಾಕಿದ್ದಾರೆ. ರವಿನಾಥ್ ಅವರ ಆಶ್ರಮಕ್ಕೆ ನಾನೇ ಭೂಮಿಯನ್ನು ನೀಡಿದ್ದೇನೆ ಎಂದಿದ್ದಾರೆ.

“ಆರೋಪಗಳು ಸುಳ್ಳು. ನಾನು ನನ್ನ ಭೂಮಿಯನ್ನು ಆಶ್ರಮಕ್ಕೆ ನೀಡಿದ್ದೇನೆ. ಈ ವಿಷಯದ ಬಗ್ಗೆ ನ್ಯಾಯಯುತ ತನಿಖೆ ನಡೆಯಲೆಂದು ಆಗ್ರಹಿಸುತ್ತೇನೆ. ರವಿನಾಥ್ ಸಂತರನ್ನು ಯಾರೋ ಕೊಲೆ ಮಾಡಿರುವಂತೆ ಕಾಣುತ್ತಿದೆ. ಅವರ ಸಾವಿಗೆ ನ್ಯಾಯ ಸಿಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...