Homeಮುಖಪುಟಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ...

ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಕಿಡಿ

- Advertisement -
- Advertisement -

ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಮತ್ತೆ ತಮ್ಮ ಪಕ್ಷದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ‘ಉಚಿತ ಕೊಡುಗೆ’ ಹೇಳಿಕೆಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ.ವರೆಗಿನ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜನರಿಗೆ ಉಚಿತ ಪಡಿತರವನ್ನು ಒದಗಿಸಿದ್ದಕ್ಕಾಗಿ ಸರ್ಕಾರವನ್ನು ಅಭಿನಂದಿಸಬೇಕು ಎಂದು ಬಿಜೆಪಿ ಸಂಸದರೊಬ್ಬರು ಸಂಸತ್ತಿನಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು ತಮ್ಮ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಐದು ವರ್ಷಗಳಲ್ಲಿ ಮನ್ನಾ ಮಾಡಿದ ಬೃಹತ್ ಮೊತ್ತದ ಸಾಲಗಳೊಂದಿಗೆ ಇದನ್ನು ಹೋಲಿಸಿದ ವರುಣ್‌ ಗಾಂಧಿ, “ಬಡವರಿಗೆ 5 ಕೆಜಿ ಪಡಿತರವನ್ನು ಒದಗಿಸಿದ್ದಕ್ಕಾಗಿ ‘ಧನ್ಯವಾದ’ ನಿರೀಕ್ಷಿಸುವ ಸದನವು, 5 ವರ್ಷಗಳಲ್ಲಿ 10 ಲಕ್ಷ ಕೋಟಿವರೆಗಿನ ಭ್ರಷ್ಟ ಹಣದ ಪ್ರಾಣಿಗಳ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಹೇಳುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

“ಮೆಹುಲ್ ಚೋಕ್ಸಿ ಮತ್ತು ರಿಷಿ ಅಗರ್ವಾಲ್ ಅವರ ಹೆಸರುಗಳು ‘ಉಚಿತ ಕೊಡುಗೆ’ ಪಟ್ಟಿಯ ಅಗ್ರಸ್ಥಾನದಲ್ಲಿವೆ. ಸರ್ಕಾರದ ನಿಧಿಯಲ್ಲಿ ಮೊದಲ ಹಕ್ಕು ಯಾರಿಗಿದೆ?” ಎಂದು ಅವರು ಪ್ರಶ್ನಿಸಿದ್ದಾರೆ. ಇಷ್ಟೆ ಅಲ್ಲದೆ, ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕೆ ಕರದ್ ಅವರು ಮಂಡಿಸಿದ್ದ ಅಂಕಿ ಅಂಶಗಳನ್ನೂ ವರುಣ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

ಇದನ್ನೂ ಓದಿ: ಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಇತ್ತೀಚೆಗೆ ಲೋಕಸಭೆಯಲ್ಲಿ 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸಿದ ನರೇಂದ್ರ ಮೋದಿ ಸರ್ಕಾರವನ್ನು ಅಭಿನಂದಿಸಬೇಕು ಎಂದು ಹೇಳಿದ್ದರು.

ಪ್ರಧಾನಿ ಮೋದಿ ಅವರು ಕಳೆದ ತಿಂಗಳು “ಉಚಿತ ಕೊಡುಗೆ ಸಂಸ್ಕೃತಿ” ವಿರುದ್ಧ ಮಾತನಾಡಿದ್ದರು. ಜನರಿಗೆ ಉಚಿತ ಕೊಡುಗೆಗಳ ಭರವಸೆ ನೀಡುವ ಮೂಲಕ ಮತಗಳನ್ನು ಕೇಳಲಾಗುತ್ತದೆ ಎಂದು ಹೇಳಿದ್ದರು.

ಉತ್ತರ ಪ್ರದೇಶದಲ್ಲಿ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಉಚಿತ ಭರವಸೆಗಳ ಮೇಲೆ ಮತ ಕೇಳುವ ಪ್ರವೃತ್ತಿ ದೇಶಕ್ಕೆ ಅಪಾಯಕಾರಿ ಎಂದು ಹೇಳಿದ್ದರು.

ಬಿಜೆಪಿ ಸಂಸದರಾಗಿರುವ ವರುಣ್ ಗಾಂಧಿ ಅವರು ಕಳೆದ ಕೆಲವು ಸಮಯದಿಂದ ತಮ್ಮ ಪಕ್ಷದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಇತ್ತೀಚೆಗೆ, ಅವರು ಸರ್ಕಾರಿ ನೌಕರರ ನೇಮಕಾತಿ ಪ್ರಕ್ರಿಯೆಯ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ಉತ್ತರ ಪ್ರದೇಶದ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದರು.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

ಇಷ್ಟೆ ಅಲ್ಲದೆ ವಯೋವೃದ್ಧರಿಗೆ ರೈಲ್ವೆ ರಿಯಾಯಿತಿಯನ್ನು ರದ್ದುಪಡಿಸುವ ಸರ್ಕಾರದ ಕ್ರಮ, ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರಿಕೆ ಮತ್ತು ಸಶಸ್ತ್ರ ಪಡೆಗಳಿಗೆ ಕೇಂದ್ರದ ಹೊಸ ನೇಮಕಾತಿ ಯೋಜನೆ ‘ಅಗ್ನಿಪಥ್’ ಅನ್ನು ಅವರು ಟೀಕಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...