Homeಮುಖಪುಟಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು...

ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಜೆಡಿಯು ಪಕ್ಷದ ಎಲ್ಲಾ ಶಾಸಕರು ಮತ್ತು ಸಂಸದರ ಸಭೆಯನ್ನು ಕರೆದಿದ್ದು, ಮೈತ್ರಿ ಪಕ್ಷವಾದ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದಲ್ಲಿ ಬಿರುಕು ಮೂಡಿದ್ದು, ಅದಕ್ಕೆ ಕಾರಣವಾದ ಐದು ಅಂಶಗಳ ಕುರಿತು ರಾಜಕೀಯ ವಿಶ್ಲೇಷಕರು ಗಮನ ಹರಿಸಿದ್ದಾರೆ.

  1. ಸ್ಪೀಕರ್‌ ಹಸ್ತಕ್ಷೇಪ

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದಾರೆ. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದಾರೆ. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2. ಕೇಂದ್ರದಲ್ಲಿ ಸಿಗದ ಸ್ಥಾನಮಾನ

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದರು.

3. ಏಕಕಾಲದ ಚುನಾವಣೆ ಚಿಂತನೆಗೆ ಜೆಡಿಯು ವಿರೋಧ

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿಲ್ಲ.

4.  ಬಿಹಾರದ ಮೇಲೆ ಅಮಿತ್ ಶಾ ಹಿಡಿತ

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದಾರೆ. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದಾರೆ ಎಂಬ ಆರೋಪಗಳಿವೆ.

5. ನಿತೀಶ್‌ಕುಮಾರ್‌ ಮಾತು ಕೇಳದ ಆರ್‌ಸಿಪಿ ಸಿಂಗ್‌

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದಾರೆ.

ಪಥನವಾಗುತ್ತದೆಯೇ ಮೈತ್ರಿ ಸರ್ಕಾರ?

ಬಿಹಾರದಲ್ಲಿ ಆಡಳಿತರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳ ಮೈತ್ರಿ ನಡುವೆ ಕಾಣಿಸಿಕೊಂಡ ಬಿರುಕು ದೊಡ್ಡದಾಗತೊಡಗಿದೆ. ಜೆಡಿಯು ಶಾಸಕರ ಸಭೆ ಕರೆದಿರುವ ಸಿಎಂ ನಿತೇಶ್ ಕುಮಾರ್ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಬಿಹಾರದಲ್ಲಿ ಜೆಡಿಯು ಪಕ್ಷವನ್ನು ಇಬ್ಭಾಗ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಜೆಡಿಯು ರಾಷ್ಟ್ರಿಯ ಅಧ್ಯಕ್ಷ ರಾಜೀವ್ ರಂಜನ್ ಸೂಕ್ತ ಸಮಯದಲ್ಲಿ ಈ ಪಿತೂರಿಗಳನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಬಿಜೆಪಿ ನಾಯಕನ ಮನೆ ಉರುಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ: ಕಾರಣವೇನು?

ಇನ್ನೊಂದೆಡೆ ಜೆಡಿಯು ಸದಸ್ಯರು ಮಧ್ಯಂತರ ಚುನಾವಣೆ ಎದುರಿಸಲು ಸಿದ್ದರಿಲ್ಲದ ಕಾರಣ ಬಿಜೆಪಿ ಜೊತೆಗಿನ ಮೈತ್ರಿ ಕಳೆದುಕೊಂಡಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಬಿಹಾರ ಅಸೆಂಬ್ಲಿಯಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು ಸದ್ಯ ಎನ್‌ಡಿಎ ಮೈತ್ರಿ 127 ಸ್ಥಾನ ಹೊಂದುವ ಮೂಲಕ ಸರ್ಕಾರ ರಚಿಸಿದೆ. ಅದರಲ್ಲಿ ಬಿಜೆಪಿ 77, ಜೆಡಿಯು 45, ಹಿಂದೂಸ್ತಾನ್ ಅವಾಜ್ ಮೋರ್ಚಾ 04 ಮತ್ತು ಒಬ್ಬರು ಪಕ್ಷೇತರರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ವಿರೋಧ ಪಕ್ಷಗಳ ಪಾಳಯದಲ್ಲಿ ಮಹಾಘಟಬಂಧನ್ ಮೈತ್ರಿಯಲ್ಲಿ ಆರ್‌ಜೆಡಿ 80, ಸಿಪಿಐ-ಎಂಎಲ್ 12, ಸಿಪಿಐ(ಎಂ)-02, ಸಿಪಿಐ 02 ಸ್ಥಾನದೊಂದಿಗೆ ಒಟ್ಟು 96 ಸ್ಥಾನ ಹೊಂದಿವೆ. ಅಲ್ಲದೆ ಕಾಂಗ್ರೆಸ್ 19 ಮತ್ತು ಎಐಎಂಐಎಂ ಪಕ್ಷವು 01 ಸ್ಥಾನ ಹೊಂದಿದೆ. ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....