Homeಮುಖಪುಟಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

ಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಎತ್ತಿದ್ದ ಆಕ್ಷೇಪಣೆಗಳನ್ನು ತಿರಸ್ಕರಿಸಿರುದ ಸುಪ್ರೀಂ ಕೋರ್ಟ್ ಬುಧವಾರ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಕ್ರಾಂತಿಕಾರಿ ಕವಿ ವರವರ ರಾವ್‌ಗೆ ವೈದ್ಯಕೀಯ ಕಾರಣಗಳಿಗಾಗಿ ನಿಯಮಿತ ಜಾಮೀನು ನೀಡಿದೆ.

“ಮೇಲ್ಮನವಿದಾರರ ವೈದ್ಯಕೀಯ ಸ್ಥಿತಿಯು ಸ್ವಲ್ಪ ಸಮಯದವರೆಗೆ ಸುಧಾರಿಸಿಲ್ಲ, ಈ ಹಿಂದೆ (ಬಾಂಬೆ ಹೈಕೋರ್ಟ್) ನೀಡಿದ್ದ ಜಾಮೀನಿನ ಸೌಲಭ್ಯವನ್ನು ಹಿಂತೆಗೆದುಕೊಳ್ಳಲಾಗಿದೆ. ಒಟ್ಟಾರೆ ಸನ್ನಿವೇಶಗಳನ್ನು ಪರಿಗಣಿಸಿ, ಮೇಲ್ಮನವಿದಾರರು ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆಯಲು ಅರ್ಹರಾಗಿದ್ದಾರೆ” ಎಂದು ನ್ಯಾಯಮೂರ್ತಿಗಳಾದ ಯು.ಯು. ಲಲಿತ್, ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಆದೇಶಿಸಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಪಟ್ಟಿ ಸಲ್ಲಿಸಲಾಗಿದ್ದರೂ ಆರೋಪಗಳ ರಚನೆಗೆ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಿಲ್ಲ ಎಂದು ನ್ಯಾಯಾಲಯವು ಹೇಳಿದೆ. ಈ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಎರಡೂವರೆ ವರ್ಷ ಜೈಲು ವಾಸ ಅನುಭವಿಸಿದ್ದನ್ನು ಕೂಡ ನ್ಯಾಯಾಲಯ ಗಣನೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: ವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

ಫೆಬ್ರವರಿ 2021 ರಲ್ಲಿ, ಹೈಕೋರ್ಟ್ ಅವರಿಗೆ ಆರು ತಿಂಗಳ ಕಾಲ ವೈದ್ಯಕೀಯ ಜಾಮೀನು ನೀಡಿತ್ತು. ಇದನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿದ್ದರೂ, ಈ ವರ್ಷದ ಏಪ್ರಿಲ್‌ನಲ್ಲಿ ಹೈಕೋರ್ಟ್ ಶಾಶ್ವತ ಜಾಮೀನಿಗಾಗಿ ಸಲ್ಲಿಸಿದ್ದ ಅವರ ಮನವಿಯನ್ನು ತಿರಸ್ಕರಿಸಿತ್ತು. ಅಲ್ಲದೆ ಮೂರು ತಿಂಗಳೊಳಗೆ ಶರಣಾಗುವಂತೆ ಕೇಳಿತ್ತು. ಆದರೆ ಇದೀಗ ಸುಪ್ರೀಂಕೋರ್ಟ್‌ ಅವರ ಶರಣಾಗುವ ಷರತ್ತನ್ನು ತೆಗೆದುಹಾಕಿದ್ದು, ಎನ್‌ಐಎ ವಿಶೇಷ ನ್ಯಾಯಾಲಯದ ಒಪ್ಪಿಗೆಯಿಲ್ಲದೆ ಮುಂಬೈ ತೊರೆಯಬಾರದು ಎಂದು ನಿರ್ದೇಶಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಜಾಮೀನು ನೀಡಲಾಗಿದ್ದು ಅದನ್ನು ಪ್ರಕರಣದ ಅರ್ಹತೆಯ ಪ್ರತಿಬಿಂಬವಾಗಿ ನೋಡಬಾರದು ಎಂದು ಅದು ಸ್ಪಷ್ಟಪಡಿಸಿದೆ. ಈ ಆದೇಶವು ಇತರ ಆರೋಪಿಗಳ ಪ್ರಕರಣಗಳಿಗೆ ಪೂರ್ವನಿದರ್ಶನವಾಗುವುದಿಲ್ಲ ಎಂದು ಪೀಠ ಹೇಳಿದೆ.

ವರವರ ರಾವ್ ಪರ ವಾದ ಮಂಡಿಸಿದ ಹಿರಿಯ ವಕೀಲ ಆನಂದ್ ಗ್ರೋವರ್, “ವಿಚಾರಣೆಗೆ ಕನಿಷ್ಠ 10 ವರ್ಷಗಳು ಬೇಕು. ವರವರ ಅವರು ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದು ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳನ್ನು ಹೊಂದಿದ್ದಾರೆ”ಎಂದು ನ್ಯಾಯಾಲಯದಲ್ಲಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಎನ್‌ಐಎ ಪರ ವಕೀಲರಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು,“ಪ್ರಕರಣ ಕೇವಲ ಒಂದೂವರೆ ವರ್ಷ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ಎಸ್‌ಸಿ ಆದೇಶಕ್ಕೆ ಪ್ರತಿಕ್ರಿಯಿಸಿದ ವರವರ ರಾವ್ ಅವರ ಸೋದರಳಿಯ ಎನ್. ವೇಣುಗೋಪಾಲ್, “ನಮ್ಮ ಆತಂಕ ಈಗ ಕಡಿಮೆಯಾಗಿದೆ. ಆದರೆ ಅವರು ಮುಂಬೈನಲ್ಲಿ ವಾಸಿಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ಅವರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗುತ್ತದೆ, ಅದನ್ನು ಅವರು ತೆಲಂಗಾಣದಲ್ಲಿ ಪಿಂಚಣಿ ಯೋಜನೆಯ ಮೂಲಕ ಅದನ್ನು ಪಡೆಯಬಹುದು” ಎಂದು ಹೇಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...