Homeಕರ್ನಾಟಕಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

ರಾಷ್ಟ್ರಧ್ವಜಕ್ಕಾಗಿ ರೂಪಿಸಲಾಗಿರುವ ಧ್ವಜಸಂಹಿತೆ, ‘ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು’ ಎಂದು ಹೇಳುತ್ತದೆ.

- Advertisement -
- Advertisement -

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಹ ಸಂಘಟನೆ ಎಬಿವಿಪಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನಿಸಿರುವ ಘಟನೆ ಬುಧವಾರ ನಡೆದಿದೆ. ಮೆರವಣಿಗೆಯ ಉದ್ದಕ್ಕೂ ಎಬಿವಿಪಿಯ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಾಡಿಸಲಾಗಿದ್ದು ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಂಗವಾಗಿ ತಿಪಟೂರು ನಗರದಲ್ಲಿ ಎಬಿವಿಪಿ ಆಯೋಜಿಸಲಾಗಿದ್ದ ‘ತಿರಂಗ ಯಾತ್ರೆ’ಯಲ್ಲಿ ಸಚಿವ ನಾಗೇಶ್ ಭಾಗವಹಿಸಿದ್ದರು. ಭಾಗಶಃ ವಿದ್ಯಾರ್ಥಿನಿಯರೇ ಭಾಗವಹಿಸಿದ್ದ ಈ ಮೆರವಣಿಗೆಯಲ್ಲಿ ಅವರು ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಹೆಜ್ಜೆ ಹಾಕಿದ್ದರು. ಅಲ್ಲದೆ ಮೆರವಣಿಗೆಯಲ್ಲಿ ಭಾಗವಹಿಸಿರುವುದರ ಬಗ್ಗೆ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಾಕಿದ್ದಾರೆ.

ರಾಷ್ಟ್ರಧ್ವಜಕ್ಕಾಗಿ ರೂಪಿಸಲಾಗಿರುವ ಧ್ವಜಸಂಹಿತೆ, “ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು” ಎಂದು ಹೇಳುತ್ತದೆ. ಆದರೆ ಸಚಿವ ನಾಗೇಶ್‌ ಅವರು ಭಾಗವಹಿಸಿದ್ದ ಮೆರವಣಿಗೆಯು ಧ್ವಜ ಸಂಹಿತೆಯ ಈ ನಿಯಮವನ್ನು ಉಲ್ಲಂಘಿಸಲಾಗಿದೆ.

ಧ್ವಜ ಸಂಹಿತೆಯ ನಿಯಮ ( ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ರಾಷ್ಟ್ರಧ್ವಜದ ‘ಧ್ವಜ ಸಂಹಿತೆ’ ಹೇಳುವುದು ಏನು?

  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು.
  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜದ ಮೇಲೆ ಇಡಬಾರದು.
  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕೆ ಸರಿಸಮಾನವಾಗಿ ಇಡಬಾರದು.

ಸಾಂವಿಧಾನಿಕ ಹುದ್ದೆಯಲ್ಲಿ ಇರುವ ಜನಪ್ರತಿನಿಧಿಯೊಬ್ಬ ಕಾನೂನು ಉಲ್ಲಂಘಿಸಿದ್ದು ರಾಜ್ಯದಾದ್ಯಂತ ಆಕ್ರೊಶ ಹುಟ್ಟು ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಜಿಎನ್ ನಾಗರಾಜ್, “ಹರ್ ಘರ್ ಮೇ ತಿರಂಗಾ ಎಂದು ಒದರುತ್ತಿರುವವರಿಗೆ‌ ದೇಶಪ್ರಜ್ಞೆ ಇದ್ದರೆ ಸಂಪುಟದಿಂದ‌ ವಜಾ ಮಾಡಿ. ತಕ್ಷಣ ಈ ಅಪರಾಧ ಮಾಡಿದವರಿಗೆ ತಕ್ಕ ಕಾನೂನಿನ ಶಿಕ್ಷೆ ನೀಡಿ” ಎಂದು ಕಿಡಿ ಕಾರಿದ್ದಾರೆ.

ವಿಧಾನ ಪರಿಷತ್‌‌ನಲ್ಲಿ ವಿಪಕ್ಷದ ನಾಯಕರಾಗಿರುವ ಹರಿಪ್ರಸಾದ್‌ ಅವರು, ತ್ರಿವರ್ಣ ಧ್ವಜದ ಮೇಲೆ ಯಾವ ಧ್ವಜವನ್ನೇ ಹಾರಿಸುವುದು ಧ್ವಜ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. “ಶಿಕ್ಷಣ ಸಚಿವರಿಗೆ ಕನಿಷ್ಟ ಕಾನೂನಿನ ತಿಳುವಳಿಕೆ ಇಲ್ಲದೆ, ಭಾಗವಧ್ವಜವನ್ನ ತ್ರಿವರ್ಣ ಧ್ವಜಕ್ಕಿಂತ ಎತ್ತರವಾಗಿ ಹಿಡಿದುಕೊಂಡು ಅಪರಾಧ ಮಾಡಿದ್ದಲ್ಲದೇ RSS ಮನಸ್ಥಿತಿಯನ್ನ ತೋರಿಸಿದ್ದಾರೆ. ಕೂಡಲೇ ಬಿಸಿ ನಾಗೇಶ್‌ ಮೇಲೆ ದ್ವಜಸಂಹಿತೆಯಡಿ ಕೇಸ್ ಹಾಕಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಉಹ್…ಹೂ .. ತುಂಬಾ ದುಃಖ.. ಅದರಿಂದಾಗಿ ಆಕಾಶ ಕುಸಿಯುತ್ತಿದೆ 😥😜
    ನಿಖರವಾಗಿ ಎಷ್ಟು ಮಿಲಿಮೀಟರ್ಗಳಷ್ಟು ಎತ್ತರಕ್ಕೆ ಹಾರಿತು?

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....