Homeಕರ್ನಾಟಕಕೊಪ್ಪಳದಲ್ಲಿ ಜಾತಿ ಘರ್ಷಣೆ: ಹುಲಿಹೈದರ್‌ನಲ್ಲಿ ಇಬ್ಬರ ಕೊಲೆಗೆ ನೈಜ ಕಾರಣವಿದು

ಕೊಪ್ಪಳದಲ್ಲಿ ಜಾತಿ ಘರ್ಷಣೆ: ಹುಲಿಹೈದರ್‌ನಲ್ಲಿ ಇಬ್ಬರ ಕೊಲೆಗೆ ನೈಜ ಕಾರಣವಿದು

- Advertisement -
- Advertisement -

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಜಾತಿ ಘರ್ಷಣೆ ನಡೆದಿದ್ದು, ಎರಡು ಗುಂಪುಗಳ ನಡುವಿನ ಮಾರಾಮಾರಿಗೆ ಇಬ್ಬರು ಮೃತಪಟ್ಟಿರುವ, ಅನೇಕರು ಗಾಯಗೊಂಡಿದ್ದಾರೆ.

ಗ್ರಾಮದಲ್ಲಿ ಗ್ರಾಮಪಂಚಾಯ್ತಿ ಪಕ್ಕದ ಜಾಗದಲ್ಲಿ ವಾಲ್ಮೀಕಿ ಪ್ರತಿಮೆ ಇಟ್ಟು ಬೋರ್ಡ್ ಹಾಕಲು ನಾಯಕ (ಎಸ್‌ಟಿ) ಸಮುದಾಯದವರು ಮುಂದಾಗಿದ್ದಾರೆ. ಆದರೆ ಇದಕ್ಕೆ ಅದೇ ಗ್ರಾಮದ ದಲಿತ ಮುಖಂಡ ಸಣ್ಣ ಹನುಮಂತರವರು ವಿರೋಧ ವ್ಯಕ್ತಪಡಿಸಿದ್ದರು. ಗ್ರಾಮದಲ್ಲಿ ಜಾತಿಗೊಂದು ಪ್ರತಿಮೆ ಮಾಡಲು ಬದಲು ಬುದ್ಧ, ಬಸವ ಮತ್ತು ಅಂಬೇಡ್ಕರ್‌ರವರ ಪ್ರತಿಮೆ ಇಟ್ಟು ವಿಶ್ವ ಮಾನವ ಸಂದೇಶ ಸಾರೋಣ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಅಲ್ಲಿನ ಮುಸ್ಲಿಂ ಸಮುದಾಯದವರು ಸಹ ಬೆಂಬಲಿಸಿದ್ದರು.

ಇದು ಅಲ್ಲಿನ ನಾಯಕ ಸಮುದಾಯಕ್ಕೆ ಸಿಟ್ಟು ತಂದಿತ್ತು. ಅವರು ದಲಿತ ಮುಖಂಡ ಸಿಪಿಐ -ಎಂಎಲ್‌ ಲಿಬರೇಷನ್ ಪಕ್ಷದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಹನುಮಂತ ಮೇಲೆ ಸಿಡಿಮಿಡಿಗೊಂಡಿದ್ದರು ಎನ್ನಲಾಗಿದೆ. ಅದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಗ್ರಾಮ ತೊರೆದಿದ್ದರು. ಈ ವಿಚಾರದಲ್ಲಿ ನಾಯಕ ಸಮುದಾಯದವರು ಮುಸ್ಲಿಮರ ಮೇಲೆ ಕೋಪಗೊಂಡಿದ್ದರು ಎನ್ನಲಾಗಿದೆ.

ಮೊಹರಂ ಹಬ್ಬದ ಮೂರನೇ ದಿನದಂದು ಹೂ ತರಲು ಹೋಗಿದ್ದ ಭಾಷಾ ಸಾಬ್ ಎಂಬ ಮುಸ್ಲಿಂ ಯುವಕನೊಂದಿಗೆ ಜಗಳವಾಗಿ ಹೊಡೆದಾಟವಾಗಿತ್ತು. ವಾಲ್ಮೀಕಿ ಸಮುದಾಯದವರು ಹಲವು ಮುಸ್ಲಿಂ ಯುವಕರಿಗೆ ಹಲ್ಲೆ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಮುಸ್ಲಿಮರು ದಲಿತರ ಜೊತೆಗೂಡಿ ಹೊಡೆದಾಟಕ್ಕೆ ಧುಮುಕಿದರು. ಇದರಿಂದಾಗಿ ಭಾಷಾ ಸಾಬ್ (27) ಮತ್ತು ನಾಯಕ ಸಮುದಾಯದ ಯಂಕಪ್ಪ ತಳವಾರ (60) ಹತ್ಯೆಯಾಗಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ದಲಿತ ಸಮುದಾಯದ ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ. ಗ್ರಾಮದಲ್ಲಿ ಬಿಗುವಿನ ವಾತಾವಾರಣ ಸೃಷ್ಟಿಯಾಗಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಗ್ರಾಮದಲ್ಲಿ ಪೊಲೀಸ್ ಪಹರೆ ನಿಂತಿದ್ದು ಆಗಸ್ಟ್ 20ರ ವರೆಗೂ ಸೆಕ್ಷನ್ 144 ಅನ್ವಯ ನಿಷೇದಾಜ್ಞೆ ಹೇರಲಾಗಿದೆ ಎಂದು ಕೊಪ್ಪಳ ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲ್ಲಶೆಟ್ಟಿ ತಿಳಿಸಿದ್ದಾರೆ.

ಯಲ್ಲಾಲಿಂಗ ಕೊಲೆ ಪ್ರಕರಣ

ಯಲ್ಲಾಲಿಂಗ ಎಂಬ ಕುರುಬ ಸಮುದಾಯಕ್ಕೆ ಸೇರಿದ್ದ ವಿದ್ಯಾರ್ಥಿ ಖಾಸಗಿ ಸುದ್ದಿವಾಹಿನಿಗೆ ತಮ್ಮ ಗ್ರಾಮದ ಸಮಸ್ಯೆಗಳನ್ನು ಹೇಳಿದ್ದಕ್ಕೆ ಆತನನ್ನು 2015ರ ಜನವರಿ 11 ರಂದು ಕೊಲೆಗೈಯ್ಯಲಾಗಿತ್ತು. ಆತನ ಶವ ಕೊಪ್ಪಳದ ರೈಲು ನಿಲ್ದಾಣದಲ್ಲಿ ಪತ್ತೆಯಾದ ನಂತರ ಅನುಮಾನ ಬಂದಿದ್ದರಿಂದ ಹೆಚ್ಚಿನ ತನಿಖೆಯ ನಂತರ ಕೊಲೆ ಎಂದು ತಿಳಿದುಬಂದಿತ್ತು. ಈ ಪ್ರಕರಣ ರಾಜ್ಯದಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೇ ಬೃಹತ್ ‘ಹುಲಿಹೈದರ್ ಚಲೋ’ ಹೋರಾಟ ಸಹ ನಡೆದಿತ್ತು. ಈ ಕೊಲೆ ಆರೋಪದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿಯವರ ಆಪ್ತರು ಎನ್ನಲಾದ ಹನುಮೇಶ್ ನಾಯಕ್ ಮತ್ತು ಮಹಾಂತೇಶ ನಾಯಕ್ ಸೇರಿ 9 ಜನರನ್ನು ಬಂಧಿಸಲಾಗಿತ್ತು.

ಆ ಹೋರಾಟದಲ್ಲಿ ದಲಿತ ಮುಖಂಡ ಸಣ್ಣ ಹನುಮಂತರವರು ಹೋರಾಟದ ನೇತೃತ್ವ ವಹಿಸಿದ್ದರು. ಇದು ಆರೋಪಿ ಹನುಮೇಶ್ ನಾಯಕ್‌ಗೆ ಸೇಡು ಮೂಡುವಂತೆ ಮಾಡಿತ್ತು. ಹಾಗಾಗಿ ಆತ ತನ್ನ ಸಮುದಾಯದವರನ್ನು ಎತ್ತುಕಟ್ಟಿ ಸಣ್ಣ ಹನುಮಂತ ಮೇಲೆ ಹಲ್ಲೆಗೆ ಪ್ರಚೋದನೆ ನೀಡುತ್ತಿದ್ದ. ಅದರ ಭಾಗವಾಗಿ ಈ ಗಲಾಟೆ ನಡೆದಿದೆ. ಆದರೆ ಸಣ್ಣ ಹನುಮಂತುರವರು ತಪ್ಪಿಸಿಕೊಂಡಿದ್ದು, ಇಬ್ಬರು ಬಲಿಯಾಗಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...