Homeಮುಖಪುಟಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?: ನೆಹರೂ ಫೋಟೊ ಕೈಬಿಟ್ಟ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ

ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?: ನೆಹರೂ ಫೋಟೊ ಕೈಬಿಟ್ಟ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪಂಡಿತ್ ಜವಹರಲಾಲ್‌ ನೆಹರೂ ಅವರ ಫೋಟೊ ಮತ್ತು ಪರಿಚಯ ಕೈಬಿಟ್ಟಿರುವುದಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ಸನ್ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿಯವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ. ಆರ್ ಎಸ್ ಎಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ. ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ‘ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ.

ಸಂಸದರು ಮತ್ತು ಕಾಂಗ್ರೆಸ್ ಕಾರ್ಯದರ್ಶಿಗಳಾದ ಜೈರಾಂ ರಮೇಶ್ ಕೂಡ ಬೊಮ್ಮಾಯಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. “ಇಂತಹ ಸಣ್ಣತನಗಳ ಹೊರತಾಗಿಯೂ ನೆಹರು ನಮ್ಮೆಲ್ಲರ ಮನದಲ್ಲಿ ಉಳಿಯುತ್ತಾರೆ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಹತಾಶರಾಗಿರುವ ಸಿಎಂ ಬೊಮ್ಮಾಯಿಯವರು ಅವರ ತಂದೆ ಎಸ್.ಆರ್. ಬೊಮ್ಮಾಯಿ ಮತ್ತು ಅವರ ತಂದೆಯ ಮೊದಲನೆ ರಾಜಕೀಯ ಗುರು ಎಂ.ಎನ್. ರಾಯ್‌ರಿಗೆ ಅವಮಾನವೆಸಗಿದ್ದಾರೆ. ಏಕೆಂದರೆ ಆ ಇಬ್ಬರೂ ಮಹಾನ್ ನೆಹರೂ ಅಭಿಮಾನಿಗಳು, ನಂತರ ಸ್ನೇಹಿತರೂ ಆಗಿದ್ದರು. ಕರುಣಾಜನಕ ಸ್ಥಿತಿ ಇದು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬಾವುಟ ರಾಜಕೀಯ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರ ವಿಷಯದಲ್ಲಿ ಕೂಡಾ ತಾರತಮ್ಯ ಮಾಡುವ ಕುತ್ಸಿತ ಮಟ್ಟಕ್ಕೆ ಹೋಗಬಹುದು ಎಂಬ ಅನುಮಾನ ಇಂದಿನ ಪ್ರಜಾವಾಣಿ ಮುಖಪುಟ ನೋಡಿದಾಗ ನಿಜಾವಾಯ್ತು. ಇದು ಅತ್ಯಂತ ದುಃಖದ ಮತ್ತು ತಲೆ ತಗ್ಗಿಸುವ ಕ್ರಿಯೆ!

  2. 75 ne swatantrana sambramadalli ee BJP galu ee deshada modala pradaniyennu maretu rajakiya madiruvudakke deshada janara dikkara vide, avarige nachike aagabeku

  3. ಈ ರೀತಿಯ ಮನಸ್ಥಿತಿ ನಮ್ಮ ರಾಜಕೀಯ ನಾಯಕರ ವ್ಯಕ್ತಿತ್ವದ ಅಂಧ ಪತನಕ್ಕೆ ಸಾಕ್ಷಿಯಾಗಿದೆ.
    ಖುರ್ಚಿಯ ಆಸೆಗಾಗಿ ಬೊಮ್ಮಯಿಯವರು ತೋರುತ್ತಿರುವ ಭಂಗಿ ಅಚ್ಚರಿಯುತ್ತಿಸುತ್ತದೆ.
    ರಾಜಕೀಯ ಜೀವನದ ನಂತರದ ದಿನಗಳಲ್ಲಿ ಬೊ ಮ್ಮಾಯಿಯವರು ಪಶ್ಚಾತ್ತಾಪ ಪಡುವ ಅನಿವಾರ್ಯತೆ ಸೃಷ್ಟಿಯಾಗಿದೆ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...