Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ

ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ

ರಾಜಸ್ಥಾನದ ಘಟನೆ ಮಾಸುವ ಮುನ್ನವೆ ಯುಪಿಯಲ್ಲಿ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ

- Advertisement -
- Advertisement -

ರಾಜಸ್ತಾನದಲ್ಲಿ ಕೊಡವನ್ನು ಮುಟ್ಟಿ ನೀರು ಕುಡಿದ ಕಾರಣಕ್ಕೆ ಸವರ್ಣೀಯ ಶಿಕ್ಷಕನೊಬ್ಬ ದಲಿತ ಬಾಲಕನನ್ನು ಥಳಿಸಿ ಕೊಂದಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ ಜಾತಿ ದೌರ್ಜನ್ಯವೊಂದು ಉತ್ತರ ಪ್ರದೇಶದಲ್ಲಿ ತಡವಾಗಿ ವರದಿಯಾಗಿದೆ. ರಾಜ್ಯದ ಔರೈಯಾದ ಬಿದುನಾ ತಾಲೂಕಿನ ಪಿಪ್ರೌಲಿ ಶಿವ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಆಗಸ್ಟ್‌‌ 5 ರಂದು ದಲಿತ ವಿದ್ಯಾರ್ಥಿಯೊಬ್ಬರನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿ ಹಾಕಿ ಅಮಾನವಿಯವಾಗಿ ನಡೆಸಿಕೊಳ್ಳಲಾಗಿದೆ. ಮರುದಿನ ಶಾಲೆಗೆ ಬಂದ ಶಿಕ್ಷಕರು ಶೌಚಾಲಯದ ಬೀಗ ತೆಗೆದಾಗ ಬಾಲಕ ಹೊರಗೆ ಬಂದಿದ್ದಾರೆ. ಇದರ ನಂತರ ಮನೆಗೆ ತೆರಳಿರುವ ವಿದ್ಯಾರ್ಥಿಯು ಕುಟುಂಬಸ್ಥರ ಬಳಿ ಘಟನೆಯನ್ನು ವಿವರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂರ್ವ ದೂಜೆ ಗ್ರಾಮದ 11 ವರ್ಷದ ವಿದ್ಯಾರ್ಥಿಯು ಆಗಸ್ಟ್ 5ರಂದು ಶಾಲೆಗೆ ಹೋಗಿದ್ದರು. ಆದರೆ ಅಂದು ಅವರು ಶಾಲೆ ಬಿಟ್ಟರೂ ಮನೆಗೆ ಹಿಂದಿರುಗಲಿಲ್ಲ ಎಂದು ವಿದ್ಯಾರ್ಥಿಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾತ್ರಿಯಿಡಿ ಊರಿನಲ್ಲಿ ಮತ್ತು ಸಂಬಂಧಿಕರು, ಸ್ನೇಹಿತರನ್ನು ವಿಚಾರಿಸಿರೂ ಮಗನ ಬಗ್ಗೆ ಯಾವುದೇ ವಿಷಯ ತಿಳಿಯಲಿಲ್ಲ.

ಇದನ್ನೂ ಓದಿ: ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

ಆಗಸ್ಟ್ 6 ರಂದು ಬೆಳಗ್ಗೆ 8 ಗಂಟೆಗೆ ಶಾಲೆಯ ಬಾಗಿಲು ತೆರೆಯಲು ಶಿಕ್ಷಕರು ಬಂದಾಗ ಕೊಠಡಿಗಳ ಜತೆಗೆ ಶೌಚಾಲಯದ ಬೀಗವನ್ನೂ ತೆರೆಯಲಾಗಿತ್ತು. ಈ ವೇಳೆ, ತಮ್ಮ ಮಗ ಶೌಚಾಲಯದಿಂದ ಹೊರಗೆ ಬಂದಿದ್ದಾರೆ ಎಂದು ಸಂತ್ರಸ್ತ ಬಾಲಕನ ತಂದೆ ಹೇಳಿದ್ದಾರೆ.

“ಶಾಲೆಗೆ ರಜೆ ಇದ್ದ ಕಾರಣ ನಾನು ಮನೆಗೆ ಬರುತ್ತಿದ್ದೆ. ಆಗ ಶಿಕ್ಷಕ ವಿಜಯ್ ಕುಶ್ವಾಹ ಅವರು ನನ್ನನ್ನು ತಡೆದು ಮಧ್ಯಾಹ್ನ 2 ಗಂಟೆಗೆ ಶೌಚಾಲಯಕ್ಕೆ ತಳ್ಳಿದರು ಮತ್ತು ಹೊರಗಿನಿಂದ ಬಾಗಿಲು ಮುಚ್ಚಿದರು. ಆ ಬಳಿಕ ಶೌಚಾಲಯಕ್ಕೂ ಬೀಗ ಹಾಕಲಾಗಿತ್ತು. ಎಲ್ಲರೂ ಹೊರಟು ಹೋಗಿದ್ದರು. ನಾನು ರಾತ್ರಿ ಸಹಾಯಕ್ಕಾಗಿ ಕಿರುಚುತ್ತಿದ್ದೆ” ಎಂದು ತಮ್ಮ ಮಗ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

“ಶಾಲೆಯ ಬಳಿ ಯಾವುದೇ ಮನೆ ಇಲ್ಲ. ಹೀಗಾಗಿ ಮಗನ ಧ್ವನಿ ಯಾರಿಗೂ ಕೇಳಿಸದೇ 18 ಗಂಟೆಗಳ ಕಾಲ ಶೌಚಗೃಹದಲ್ಲೇ ಉಳಿದಿಕೊಂಡಿದ್ದ” ಎಂದು ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ದಲಿತ ಮಕ್ಕಳೊಂದಿಗೆ ಶಿಕ್ಷಕರ ವರ್ತನೆ ಸರಿಯಿಲ್ಲ. ಶಾಲೆಯ ಎಲ್ಲಾ ದಲಿತ ಮಕ್ಕಳೊಂದಿಗೆ ಅವರು ಅನುಚಿತವಾಗಿ ವರ್ತಿಸುತ್ತಾರೆ. ಊಟದಲ್ಲಿ ಪಲ್ಯ ಬಡಿಸುವಂತೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ” ಎಂದು ಸಂತ್ರಸ್ತ ಬಾಲಕ ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ದಲಿತ ಬಾಲಕನ ಸಾವಿನ ಹೊಣೆಹೊತ್ತು ಕಾಂಗ್ರೆಸ್ ಶಾಸಕನ ರಾಜೀನಾಮೆ

ಈ ಘಟನೆ ಬೆಳಕಿಗೆ ಬಂದ ನಂತರ ಗ್ರಾಮದ ಜನರೊಂದಿಗೆ ಆಗಮಿಸಿದ ಸಂಬಂಧಿಕರು ಶಾಲೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತ ಕುಟುಂಬದ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸಿಒ ಮಹೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಶಿಕ್ಷಕನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...