39 ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ನದಿಗೆ ಉರುಳಿದ ಪರಿಣಾಮ ಆರು ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್‌ನಲ್ಲಿ ಮಂಗಳವಾರ ನಡೆದಿದೆ. ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದ್ದು ಕನಿಷ್ಠ 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು ಚಂದನ್ವಾರಿಯಿಂದ ಪಹಲ್ಗಾಮ್‌ಗೆ ತೆರಳುತ್ತಿದ್ದರು ಎಂದು ಎನ್‌ಡಿಟಿವಿ ವರದಿಯಾಗಿದೆ. ಬಸ್‌ನಲ್ಲಿ 37 ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಸಿಬ್ಬಂದಿ ಮತ್ತು ಇಬ್ಬರು ಜಮ್ಮು ಕಾಶ್ಮೀರ ಪೊಲೀಸ್ ಸಿಬ್ಬಂದಿ ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಎಲ್ಲರೂ ಅಮರನಾಥ ಯಾತ್ರೆಯ ಕರ್ತವ್ಯ ನಿರ್ವಹಿಸಿ ಬಸ್‌ನಲ್ಲಿ ಹಿಂತಿರುಗುತ್ತಿದ್ದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. “ನಾವು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ನಿರ್ವಹಣೆಯ ತಂಡಗಳನ್ನು ಸ್ಥಳಕ್ಕೆ ಧಾವಿಸುತ್ತಿವೆ” ಎಂದು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಐ ವರದಿ ಮಾಡಿದೆ.
ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ
ಜೂನ್ 29 ರಂದು ಜಮ್ಮುವಿನಿಂದ ಸೇನೆ ಮತ್ತು ಸ್ಥಳೀಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮಾಡಿದ ಬಿಗಿ ಭದ್ರತೆಯ ನಡುವೆ ಅಮರನಾಥ ಯಾತ್ರೆ ಪ್ರಾರಂಭವಾಗಿತ್ತು. ಹಿಮಾಲಯದ ಮೇಲ್ಭಾಗದಲ್ಲಿರುವ ಶಿವನ 3,880-ಮೀಟರ್ ಎತ್ತರದ ಗುಹಾ ದೇವಾಲಯಕ್ಕೆ ತೆರಳುವ ಅಮರನಾಥ ದೇವಾಲಯದ ತೀರ್ಥಯಾತ್ರೆಯು ಪಹಲ್ಗಾಮ್ ಮತ್ತು ಬಾಲ್ಟಾಲ್ ಅವಳಿ ಮಾರ್ಗಗಳಿಂದ ನಡೆಯುತ್ತದೆ.


