Homeಕರ್ನಾಟಕಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

- Advertisement -
- Advertisement -

‘ಜೈ ಹಿಂದೂ ರಾಷ್ಟ್ರ’ ಎಂದು ಬರೆದಿರುವ, ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಚಿತ್ರದೊಂದಿಗೆ ಬ್ರಿಟಿಷರಲ್ಲಿ ಹಲವು ಬಾರಿ ಕ್ಷಮೆ ಕೇಳಿ ಖ್ಯಾತರಾದ ವಿ.ಡಿ.ಸಾವರ್ಕರ್‌ ಅವರ ಫೋಟೋವನ್ನೂ ಬಳಸಿರುವ ಪ್ಲೆಕ್ಸ್‌ಅನ್ನು ಉಡುಪಿಯ ಪ್ರಮುಖ ಸ್ಥಳದಲ್ಲಿ ಹಾಕಲಾಗಿದ್ದು, ಉಡುಪಿ ಪೊಲೀಸರು ಇದಕ್ಕೆ ರಕ್ಷಣೆ ನೀಡಿದ್ದಾರೆ.

ಬ್ಯಾನರ್‌ನ ಒಂದು ಬದಿಯಲ್ಲಿ “ಜೈ ಹಿಂದೂ ರಾಷ್ಟ್ರ” ಎಂಬ ಹೇಳಿಕೆ ಮತ್ತು ಇನ್ನೊಂದು ಬದಿಯಲ್ಲಿ “ಸ್ವಾತಂತ್ರ್ಯವು ಬ್ರಿಟಿಷರು ಅಹಿಂಸೆಗೆ ನೀಡಿದ ಭಿಕ್ಷೆಯಲ್ಲ” ಎಂಬ ಹೇಳಿಕೆಯನ್ನು ಹಾಕಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬ್ಯಾನರ್‌ನಲ್ಲಿ, “ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಿಷರನ್ನು ಸೋಲಿಸಿ ಅವರ ದುರಾಡಳಿತದಿಂದ ದೇಶವನ್ನು ಮುಕ್ತಗೊಳಿಸಿದ ಕ್ರಾಂತಿಕಾರಿ ನಾಯಕರಾದ ವೀರ್ ಸಾವರ್ಕರ್ ಮತ್ತು ಸುಭಾಷ್ ಚಂದ್ರ ಬೋಸ್ ಅವರನ್ನು ಈ 75 ನೇ ಸ್ವಾತಂತ್ರ್ಯ ದಿನದಂದು ಸ್ಮರಿಸೋಣ” ಎಂದು ಬರೆಯಲಾಗಿದೆ. ಮಹಾನ್ ಚೇತನ ಸುಭಾಷ್ ಚಂದ್ರ ಬೋಸ್‌ ಅವರ ಫೋಟೋಕ್ಕಿಂತ, ಹಿಂದುತ್ವವಾದಿ ಸಾವರ್ಕರ್‌ ಫೋಟೋವನ್ನು ದೊಡ್ಡದಾಗಿ ಬಳಸಿರುವುದನ್ನು ಪ್ಲೆಕ್ಸ್‌ನಲ್ಲಿ ಕಾಣಬಹುದು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನೀಡಿದ ದೂರಿನ ಬಳಿಕ ಬ್ಯಾನರ್ ಇರುವ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲು ಉಡುಪಿ ಪಟ್ಟಣ ಪುರಸಭೆ ಸೋಮವಾರ ನಿರ್ಧರಿಸಿದೆ. ಮುಂದಿನ 15 ದಿನಗಳ ಕಾಲ ನಗರಸಭೆಯ ಮನವಿಯಂತೆ ಬ್ಯಾನರ್ ಇರುವ ಸ್ಥಳದಲ್ಲಿ ಪೊಲೀಸರು ಹಾಜರಿರುತ್ತಾರೆ ಎಂದು ಉಡುಪಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ದಿ ನ್ಯೂಸ್ ಮಿನಿಟ್‌’ ಜಾಲತಾಣ, “ಬ್ಯಾನರ್‌ನ ಸ್ಥಳಕ್ಕೆ ಭೇಟಿ ನೀಡಿದಾಗ ಬ್ರಹ್ಮಗಿರಿ ವೃತ್ತದಲ್ಲಿ ಎಂಟು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಸ್ವಾತಂತ್ರ್ಯೋತ್ಸವದ ನಿಮಿತ್ತ ಬ್ರಹ್ಮಗಿರಿ ವೃತ್ತದಲ್ಲಿ ಬ್ಯಾನರ್ ಅಳವಡಿಸಲಾಗಿದ್ದು, ಇದನ್ನು ಪ್ರಮೋದ್ ಉಚ್ಚಿಲ, ಶೈಲೇಶ್ ದೇವಾಡಿಗ ಮತ್ತು ಯೋಗೀಶ್ ಕುತ್ಪಾಡಿ ಅವರು ಅಳವಡಿಸಿದ್ದಾರೆ. ಪ್ರಮೋದ್, ಉಡುಪಿಯ ಬಲಪಂಥೀಯ ಸಂಘಟನೆ ಹಿಂದೂ ಮಹಾಸಭಾಕ್ಕೆ ಸೇರಿದವರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ” ಎಂದು ವಿವರಿಸಿದೆ.

ಬ್ಯಾನರ್ ವಿರುದ್ಧ ಎಸ್‌ಡಿಪಿಐ ದೂರು ನೀಡಿದ್ದರೂ, ಪಟ್ಟಣದ ಪುರಸಭೆಯು ಬ್ರಹ್ಮಗಿರಿ ವೃತ್ತದಲ್ಲಿ ಬ್ಯಾನರ್ ಇರಿಸಲು ಮತ್ತು ಹೆಚ್ಚಿನ ರಕ್ಷಣೆ ನೀಡಲು ನಿರ್ಧರಿಸಿದೆ.

ಪಾಲಿಕೆ ಆಯುಕ್ತ ಉದಯಕುಮಾರ್ ಶೆಟ್ಟಿ ಮಾತನಾಡಿ, ‘ಬ್ಯಾನರ್ ಹಾಕಲು ಯಾವುದೇ ನಿರ್ಬಂಧವಿಲ್ಲ ಮತ್ತು ಅರ್ಜಿದಾರರು ಮೂರು ದಿನ ಮುಂಚಿತವಾಗಿ ಹಾಕಲು ಅನುಮತಿ ಕೋರಿದ್ದಾರೆ’ ಎಂದು ಹೇಳಿದ್ದಾರೆ.

ವಿವಾದಾತ್ಮಕ ಪ್ಲೆಕ್ಸ್‌ಗಳನ್ನು ಹಾಕಿದ ಕಾರಣ ಶಿವಮೊಗ್ಗ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿದೆ. ಆಗಸ್ಟ್ 15ರಂದು ಶಿವಮೊಗ್ಗ ಜಿಲ್ಲೆಯ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಅವರ ಪೋಸ್ಟರ್ ಹಾಕಿದ್ದರಿಂದ ಉದ್ವಿಗ್ನತೆ ಉಂಟಾಗಿತ್ತು.

ಪೋಸ್ಟರ್‌ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಪ್ರೇಮ್ ಸಿಂಗ್ ಎಂಬ ವ್ಯಕ್ತಿಗೆ ಚಾಕುವಿನಿಂದ ಇರಿದ ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ, ಸಾವರ್ಕರ್ ಅವರ ಪೋಸ್ಟರ್‌ಗಳನ್ನು ಪ್ರದರ್ಶಿಸಿದ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದಕ್ಕಾಗಿ ಎಸ್‌ಡಿಪಿಐ ಸದಸ್ಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿದ ಜಾಹೀರಾತಿನಲ್ಲೂ ಸಾವರ್ಕರ್‌ ಫೋಟೋವನ್ನು ಹಾಕಲಾಗಿತ್ತು. ದೇಶಕ್ಕಾಗಿ ಸೇವೆ ಸಲ್ಲಿಸಿದ, ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಫೋಟೋವನ್ನು ಕಡೆಗಣಿಸಿದ್ದು, ಭಾರೀ ಟೀಕೆಗೆ ಒಳಗಾಗಿತ್ತು.

ಟೀಕೆಗಳ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, “ಆರ್ ಎಸ್ ಎಸ್ ಆದರ್ಶಗಳಿಗೆ ತಲೆಬಾಗುತ್ತೇನೆ” ಎಂದಿದ್ದಾರೆ.

ದೇಶ ವಿಭಜನೆಯಲ್ಲೂ ಸಾವರ್ಕರ್ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ನಿರಂತರ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆಯುವ ಮೂಲಕ ಸಾವರ್ಕರ್‌ ಇತಿಹಾಸದಲ್ಲಿ ದಾಖಲಾಗಿದ್ದಾರೆ. ಆದರೆ ಕರ್ನಾಟಕ ರಾಜ್ಯ ಸರ್ಕಾರ ಇತಿಹಾಸವನ್ನು ತಿರುಚುವ ಕೆಲಸಕ್ಕೆ ಕೈಹಾಕಿದೆ ಎಂಬ ಆರೋಪಗಳು ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನೇತಾಜಿ ಸುಭಾಷ್ ಚಂದ್ರ ಬೋಸ್ ಎಂದಿಗೂ ಹಿಂದೂ ರಾಷ್ಟ್ರದ ಪ್ರತಿಪಾದಕ ಆಗಿರಲಿಲ್ಲ. ಈಗ ಅವರ ಫೋಟೊ ಜೊತೆಗೆ ಸಾವರ್ಕರ್ ಫೋಟೊ ಹಾಕುವ ಮೂಲಕ ಮನುವಾದಿಗಳು ನೇತಾಜಿಯವರಿಗೆ ಅವಮಾನ ಮಾಡಿದ್ದಾರೆ. ಇದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...