Homeಕರ್ನಾಟಕಹುಲಿಹೈದರ್‌‌ ಗ್ರಾಮದ ಜಾತಿ ಹಿಂಸಾಚಾರ ಖಂಡಿಸಿ ಸಿಪಿಐ(ಎಂಎಲ್‌) ಪ್ರತಿಭಟನೆ

ಹುಲಿಹೈದರ್‌‌ ಗ್ರಾಮದ ಜಾತಿ ಹಿಂಸಾಚಾರ ಖಂಡಿಸಿ ಸಿಪಿಐ(ಎಂಎಲ್‌) ಪ್ರತಿಭಟನೆ

ಸಿಪಿಐಎಂಎಲ್ ಲಿಬರೇಷನ್‌ನ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತಪ್ಪ ಅವರ ಬಿಡುಗಡೆಗೆ ಆಗ್ರಹಿಸಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ.

- Advertisement -
- Advertisement -

ಕೊಪ್ಪಳ ಜಿಲ್ಲೆ ಹುಲಿಹೈದರ್‌ನಲ್ಲಿ ನಡೆದ ಹಿಂಸಾಚಾರ, ಕೊಲೆ ಘಟನೆ ಖಂಡಿಸಿ ಹಾಗೂ ಹೋರಾಟಗಾರ ಸಣ್ಣ ಹನುಮಂತಪ್ಪ ಅವರನ್ನು ತಕ್ಷಣ ಬಿಡುಗಡೆಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಸಿಪಿಐ(ಎಂಎಲ್) ಲಿಬರೇಷನ್ ಪ್ರತಿಭಟನೆ ನಡೆಸಿದೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಆ.11ರಂದು ಹಿಂಸಾಚಾರ ನಡೆದು ಇಬ್ಬರು ಕೊಲೆಯಾಗಿದ್ದಾರೆ. ಯುವಕನೊಬ್ಬ ಜೀವನ್ಮರಣದ ಸ್ಥಿತಿಯಲ್ಲಿದ್ದು, ಈ ದುಷ್ಕೃತ್ಯಕ್ಕೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸಬೇಕು. ಪ್ರಕರಣವನ್ನು ಸಮಗ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ, ಸಿಪಿಐಎಂಎಲ್ ಲಿಬರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು, ಮೈಸೂರು, ಕೊಪ್ಪಳ ಜಿಲ್ಲೆ ಗಂಗಾವತಿ, ಕನಕಗಿರಿ, ವಿಜಯನಗರ ಜಿಲ್ಲೆ ಹರಪನಹಳ್ಳಿ, ಕೋಲಾರ, ರಾಯಚೂರು ಜಿಲ್ಲೆ ಸಿಂಧನೂರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ,‌ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಮನವಿಯನ್ನು ರವಾನಿಸಲಾಗಿದೆ.

ಸಿಪಿಐಎಂಎಲ್ ಲಿಬರೇಷನ್ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತಪ್ಪ ಮತ್ತು ಇತರರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣವನ್ನು ಹಿಂಪಡೆದು ತಕ್ಷಣವೇ ಬಿಡುಗಡೆಗೊಳಿಸಬೇಕು. ಇಡೀ ಗಲಭೆ ಪ್ರಕರಣಕ್ಕೆ ಕಾರಣಕರ್ತರಾದ ಹನುಮೇಶ್ ನಾಯಕ ಮತ್ತು ರಮೇಶ ನಾಯಕರನ್ನು ತಕ್ಷಣವೇ ಬಂಧಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.

ಹುಲಿಹೈದರ್ ಗ್ರಾಮದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಖಚಿತಪಡಿಸಲು ಶಾಂತಿ ಸಭೆಯನ್ನು ಕರೆಯಬೇಕು, ಗಲಭೆ ಪ್ರಕರಣದಲ್ಲಿ ಕೊಲೆಗೀಡಾದ ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡಬೇಕು. ಈ ಪ್ರಕರಣದ ತನಿಖೆಯನ್ನು ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಕರ್ತವ್ಯಲೋಪವೆಸಗಿದ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು.

ಏನಿದು ಘಟನೆ?

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಜಾತಿ ಘರ್ಷಣೆ ನಡೆದಿತ್ತು. ಎರಡು ಗುಂಪುಗಳ ನಡುವಿನ ಮಾರಾಮಾರಿಗೆ ಇಬ್ಬರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.

ಗ್ರಾಮದಲ್ಲಿ ಗ್ರಾಮಪಂಚಾಯ್ತಿ ಪಕ್ಕದ ಜಾಗದಲ್ಲಿ ವಾಲ್ಮೀಕಿ ಪ್ರತಿಮೆ ಇಟ್ಟು ಬೋರ್ಡ್ ಹಾಕಲು ನಾಯಕ (ಎಸ್‌ಟಿ) ಸಮುದಾಯದವರು ಮುಂದಾಗಿದ್ದರು. ಆದರೆ ಇದಕ್ಕೆ ಅದೇ ಗ್ರಾಮದ ದಲಿತ ಮುಖಂಡ ಸಣ್ಣ ಹನುಮಂತರವರು ವಿರೋಧ ವ್ಯಕ್ತಪಡಿಸಿದ್ದರು. ಗ್ರಾಮದಲ್ಲಿ ಜಾತಿಗೊಂದು ಪ್ರತಿಮೆ ಮಾಡಲು ಬದಲು ಬುದ್ಧ, ಬಸವ ಮತ್ತು ಅಂಬೇಡ್ಕರ್‌ರವರ ಪ್ರತಿಮೆ ಇಟ್ಟು ವಿಶ್ವ ಮಾನವ ಸಂದೇಶ ಸಾರೋಣ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಅಲ್ಲಿನ ಮುಸ್ಲಿಂ ಸಮುದಾಯದವರು ಸಹ ಬೆಂಬಲಿಸಿದ್ದರು.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಇದು ಅಲ್ಲಿನ ನಾಯಕ ಸಮುದಾಯಕ್ಕೆ ಸಿಟ್ಟು ತಂದಿತ್ತು. ಅವರು ದಲಿತ ಮುಖಂಡ ಸಿಪಿಐ -ಎಂಎಲ್‌ ಲಿಬರೇಷನ್ ಪಕ್ಷದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಹನುಮಂತ ಮೇಲೆ ಸಿಡಿಮಿಡಿಗೊಂಡಿದ್ದರು ಎನ್ನಲಾಗಿದೆ. ಅದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಗ್ರಾಮ ತೊರೆದಿದ್ದರು. ಈ ವಿಚಾರದಲ್ಲಿ ನಾಯಕ ಸಮುದಾಯದವರು ಮುಸ್ಲಿಮರ ಮೇಲೆ ಕೋಪಗೊಂಡಿದ್ದರು ಎನ್ನಲಾಗಿದೆ.

ಮೊಹರಂ ಹಬ್ಬದ ಮೂರನೇ ದಿನದಂದು ಹೂ ತರಲು ಹೋಗಿದ್ದ ಭಾಷಾ ಸಾಬ್ ಎಂಬ ಮುಸ್ಲಿಂ ಯುವಕನೊಂದಿಗೆ ಜಗಳವಾಗಿ ಹೊಡೆದಾಟವಾಗಿತ್ತು. ವಾಲ್ಮೀಕಿ ಸಮುದಾಯದವರು ಹಲವು ಮುಸ್ಲಿಂ ಯುವಕರಿಗೆ ಹಲ್ಲೆ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಮುಸ್ಲಿಮರು ದಲಿತರ ಜೊತೆಗೂಡಿ ಹೊಡೆದಾಟಕ್ಕೆ ಧುಮುಕಿದರು. ಇದರಿಂದಾಗಿ ಭಾಷಾ ಸಾಬ್ (27) ಮತ್ತು ನಾಯಕ ಸಮುದಾಯದ ಯಂಕಪ್ಪ ತಳವಾರ (60) ಹತ್ಯೆಯಾದರು. 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ದಲಿತ ಸಮುದಾಯದ ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...