ಕೇರಳದಲ್ಲಿ ಅಧಿಕಾರದಲ್ಲಿರುವ ಸಿಪಿಐ(ಎಂ) ನೇತೃತ್ವದ ಎಡಪಕ್ಷಗಳ ಆಡಳಿತವನ್ನು ದುರ್ಬಲಗೊಳಿಸಲು ಒಕ್ಕೂಟ ಸರ್ಕಾರವು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಳಸಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರು ಶುಕ್ರವಾರ ಹೇಳಿದ್ದಾರೆ.
ತಿರಿವನಂತಪುರಂನಲ್ಲಿ ಮೂರು ದಿನಗಳ ಕಾಲ ನಡೆದ ಸಿಪಿಐಎಂ ಪಕ್ಷದ ಸಮಾವೇಶ ಮುಗಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಆರೋಪ ಮಾಡಿದ್ದಾರೆ. “ಬೇರೆ ರಾಜ್ಯಗಳಲ್ಲಿ ನಡೆದ ಘಟನೆಯ ಪುನರಾರ್ತನೆ ಇಲ್ಲಿ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿಲ್ಲ. ಇದು ಪ್ರಜಾಪ್ರಭುತ್ವದ ತತ್ವಗಳಿಗೆ ಹೊಂದಿಕೆಯಾಗದ ವಿಷಯ. ಈ ವಿಷಯದಲ್ಲಿ ಅವರು ಮಧ್ಯಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ, ಇದು ಅನ್ಯಾಯವಾಗಿದೆ” ಎಂದು ಬಾಲಕೃಷ್ಣನ್ ಹೇಳಿದ್ದಾರೆ.
“ರಾಜ್ಯದ ಅಭಿವೃದ್ಧಿಗೆ ಒಕ್ಕೂಟ ಸರ್ಕಾರ ತೊಂದರೆ ನೀಡುತ್ತಿದೆ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸಹ ಪ್ರಗತಿಯನ್ನು ಹಳಿತಪ್ಪಿಸಲು ಎಲ್ಲವನ್ನೂ ಮಾಡುತ್ತಿವೆ. ಎರಡು ಬಾರಿ ಮಾಜಿ ಹಣಕಾಸು ಸಚಿವರಾಗಿರುವ ಥಾಮಸ್ ಐಸಾಕ್ ಅವರಿಗೆ ಜಾರಿ ನಿರ್ದೇಶನಾಲಯ ತೊಂದರೆ ನೀಡುತ್ತಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ. ಭವಿಷ್ಯದಲ್ಲಿ ಇಂತಹ ಯಾವುದೇ ಘಟನೆಯನ್ನು ತಡೆಯಲು ನಮ್ಮ ಎಲ್ಲಾ ಶಕ್ತಿಯನ್ನು ವ್ಯಯಿಸುತ್ತೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ: ಮಹಿಳೆ ಪ್ರಚೋದನಕಾರಿ ಉಡುಗೆ ತೊಟ್ಟರೆ ಪುರುಷರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ: ಕೇರಳ ಕೋರ್ಟ್
ಮೂರು ದಿನಗಳ ಪಕ್ಷದ ಸಭೆಯಲ್ಲಿ ತಮ್ಮ ಮಂತ್ರಿಗಳ ಕಾರ್ಯಕ್ಷಮತೆಯನ್ನು ಕೂಡಾ ಮೌಲ್ಯಮಾಪನ ಮಾಡಲಾಗಿದೆ ಎಂದು ‘ಮಾಧ್ಯಮಂ.ಕಾಂ’ ವರದಿ ಮಾಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗೃಹ ಸಚಿವಾಲಯವನ್ನು ನಿಭಾಯಿಸುತ್ತಿದ್ದು ಅವರು ಕಚೇರಿಯಲ್ಲಿ ಕೂರದೇ ರಾಜ್ಯಾದ್ಯಂತ ಸಂಚರಿಸುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಿಣರಾಯಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಕೀಳುಮಟ್ಟದಲ್ಲಿ ಪ್ರದರ್ಶಿಸುತ್ತಿರುವ ಮಾಧ್ಯಮಗಳ ವಿರುದ್ಧವೂ ಸಭೆಯಲ್ಲಿ ಟೀಕೆ ನಡೆಸಲಾಗಿದೆ. ಸಂಬಂಧಪಟ್ಟವರು ಮಾಧ್ಯಮಗಳೊಂದಿಗೆ ಸಮಯೋಚಿತವಾಗಿ ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ ಎಂದು ತಿಳಿದು ಬಂದಿದೆ.


