Homeಮುಖಪುಟಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಮ್ ಸಿಂಗ್ ಲೋಧಿ ಅವರು 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು.

- Advertisement -
- Advertisement -

ಗ್ವಾಲಿಯರ್-ಚಂಬಲ್ ಪ್ರದೇಶದ ಬಿಜೆಪಿ ನಾಯಕ ಪ್ರೀತಮ್ ಸಿಂಗ್ ಲೋಧಿ ಅವರು ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಬಿಜೆಪಿಯಿಂದ ಉಚ್ಛಾಟನೆಯಾಗಿದ್ದಾರೆ. ಇಂದು ಬೆಳಿಗ್ಗೆ ಅವರನ್ನು ಭೋಪಾಲ್‌ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಕರೆಸಿಕೊಂಡು ಪ್ರಾಥಮಿಕ ಸದಸ್ಯತ್ವವನ್ನೂ ರದ್ದು ಮಾಡಲಾಲಾಗಿದೆ.

ಯೋಧ ರಾಣಿ ಅವಂತಿಬಾಯಿ ಲೋಧಿ ಅವರ ಜನ್ಮದಿನದಂದು ಬುಧವಾರ ನಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರೀತಮ್ ಸಿಂಗ್ ಲೋಧಿ, ಬ್ರಾಹ್ಮಣರ ಕುರಿತು ಮಾತನಾಡಿದ್ದರು. “ಬ್ರಾಹ್ಮಣರು ಧರ್ಮದ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ಹೇಳಿಕೆ ವಿರುದ್ಧ ಬಿಜೆಪಿ ಯುವ ಘಟಕದ ನಾಯಕ ಪ್ರವೀಣ್ ಮಿಶ್ರಾ ದೂರು ದಾಖಲಿಸಲು ಮುಂದಾದರು. ಲೋಧಿ ಅವರು ಜನರ ನಡುವೆ ದ್ವೇಷವನ್ನು ಉಂಟುಮಾಡುತ್ತಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ.

62 ವರ್ಷದ ಲೋಧಿ ಅವರು ಈಗಾಗಲೇ 37 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ನಾಲ್ಕು ಕೊಲೆ ಯತ್ನ ಪ್ರಕರಣಗಳು ಮತ್ತು ಎರಡು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ದೂರಲಾಗಿದೆ.

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಮ್ ಸಿಂಗ್ ಲೋಧಿ ಅವರು 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಪಿಚೋರ್ (ಶಿವಪುರಿ) ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ನಿಂದ ಸೋತಿದ್ದರು. ಆದರೆ ಗ್ವಾಲಿಯರ್-ಚಂಬಲ್ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಲೋಧಿಯವರು ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ.

ಲೋಧಿ ಅವರು ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ, ಆರು ಭಾರಿ ಶಾಸಕರಾಗಿರುವ ಕೆ.ಪಿ.ಸಿಂಗ್ ‘ಕಕ್ಕಜು’ ವಿರುದ್ಧ ಪಿಚೋರ್ ವಿಧಾನಸಭಾ ಕ್ಷೇತ್ರದಲ್ಲಿ ಲೋಧಿ ಸ್ಪರ್ಧಿಸಿದ್ದರು. 2018ರ ಚುನಾವಣೆಯಲ್ಲಿ ಅವರು ಕೇವಲ 2500ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು.

ಶಿವಪುರಿಯ ಖರೈಹ್ ಗ್ರಾಮದಲ್ಲಿ ಬುಧವಾರ ನಡೆದ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, “ಬ್ರಾಹ್ಮಣರು ಆ ಕಾಲದ ಜನರ ಹಣ ಮತ್ತು ಸಂಪನ್ಮೂಲದಲ್ಲಿ ಏಳಿಗೆ ಹೊಂದುತ್ತಿದ್ದರು” ಎಂದು ಹೇಳಿದ್ದರು.

“ಒಳ್ಳೆಯ ಕುಟುಂಬದ ಸುಂದರ ಮಹಿಳೆಯರನ್ನು ನೋಡುವ ಅವರು (ಬ್ರಾಹ್ಮಣರು) ಆ ಮಹಿಳೆಯರ ಮನೆಯಲ್ಲಿ ಊಟ ಮಾಡಲು ಬಯಸುತ್ತಾರೆ. ಯುವತಿಯರನ್ನು ಮುಂದಿನ ಸಾಲಿನಲ್ಲಿ ಕೂರಿಸಬೇಕು ಹಾಗೂ ವಯಸ್ಸಾದ ಮಹಿಳೆಯರನ್ನು ಹಿಂದಿನ ಸಾಲಿನಲ್ಲಿ ಕೂರಿಸಬೇಕು ಎಂದು ಅವರು (ಬ್ರಾಹ್ಮಣರು) ಬಯಸುತ್ತಾರೆ” ಎಂದು ಭಾಷಣ ಮಾಡಿದ್ದರು.

ಇದನ್ನೂ ಓದಿರಿ: ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ಉತ್ತರಪ್ರದೇಶದಲ್ಲಿ ಬ್ರಾಹ್ಮಣರ ವಿಶ್ವಾಸವನ್ನು ಕಳೆದುಕೊಂಡ ಬಳಿಕ, ಅವರನ್ನು ಪಕ್ಷದತ್ತ ಸೆಳೆಯಲು ಬಯಸುತ್ತಿರುವ ಬಿಜೆಪಿಗೆ ಇದು ಆಘಾತ ನೀಡಿದೆ ಎಂದು ಎನ್‌.ಡಿ.ಟಿ.ವಿ. ವರದಿ ಮಾಡಿದೆ.

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಗವಾನದಾಸ್ ಸಬನಾನಿ ಪ್ರತಿಕ್ರಿಯಿಸಿ, “ಬಿಜೆಪಿ ನಾಯಕ ಪ್ರೀತಮ್ ಲೋಧಿ ಅವರು ಪಕ್ಷದ ದೃಷ್ಟಿಕೋನಕ್ಕೆ ವಿರುದ್ಧವಾದ ಹಾಗೂ ನಿರ್ದಿಷ್ಟ ಸಮುದಾಯದ ವಿರುದ್ಧ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಅವರ ಅಭಿಪ್ರಾಯಗಳನ್ನು ಬಿಜೆಪಿ ಎಂದಿಗೂ ಒಪ್ಪುವುದಿಲ್ಲ. ಲೋಧಿ ಅವರನ್ನು ಕರೆದು ನೋಟೀಸ್ ನೀಡಲಾಯಿತು. ಅವರು ಲಿಖಿತ ಕ್ಷಮಾಪಣೆಯನ್ನೂ ಸಲ್ಲಿಸಿದರು. ಆದರೆ ಇದು ತೃಪ್ತಿದಾಯಕವಾಗಿರದ ಕಾರಣ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಬ್ರಾಹ್ಮಣರು ಮತ್ತು ಸಾಮಾನ್ಯ ವರ್ಗದ ಜನರ ನಡುವೆ ಬಿಜೆಪಿ ಬಿತ್ತುತ್ತಿರುವ ಯೋಜಿತ ಪಿತೂರಿಯ ಭಾಗವಾಗಿ  ಬಿಜೆಪಿ ನಾಯಕನ ಹೇಳಿಕೆ ಹೊರಬಿದ್ದಿದೆ” ಎಂದು ಕಾಂಗ್ರೆಸ್ ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ವಿಷಯವನ್ನ ತುಂಬಾ ಗಂಭೀರವಾಗಿ ಪರಿಗಣಿಸಿ ರುವುದನ್ನು ನೊಡಿದರೆ BJP ಮತ್ತು ಸರಕಾರ ಕೇವಲ ಬ್ರಾಹ್ಮಣ ರಿಂದಲೇ ಎಂಬುದು ಸಾಬೀತಾಗಿದೆ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...