Homeಕರ್ನಾಟಕಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ದಾಳಿ ಮಾಡಿದವನು ನೋಡಲು ಟೆರರಿಸ್ಟ್‌ ಥರ ಇದ್ದ ಎಂದು ಹಲ್ಲೆಗೊಳಗಾದ ದಲಿತ ಮುಖಂಡ ಮಂಜುನಾಥ್‌ ವಿವರಿಸಿದ್ದಾರೆ

- Advertisement -
- Advertisement -

ತನ್ನ ಮನೆಗೆ ವಾಹನದಲ್ಲಿ ಕರುವನ್ನು ತೆಗೆದುಕೊಂಡು ಹೋಗುತ್ತಿದ್ದ ದಲಿತ ಯುವ ಮುಖಂಡನ ಮೇಲೆ ಬಜರಂಗದಳ ಕಾರ್ಯಕರ್ತರು ಸಕಲೇಶಪುರ ಪಟ್ಟಣದ ಹೊಸ ಬಸ್‌ ನಿಲ್ದಾಣ ಬಳಿ ಹಲ್ಲೆ ನಡೆಸಿದ್ದಾರೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ಕಾರ್ಯಕರ್ತ ದೀಪು ಹಾಗೂ ಇತರರು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿರುವುದಾಗಿ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಲ್ಲೆಗೆ ಒಳಗಾದ ಮಂಜುನಾಥ್‌ ಸಕಲೇಶಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಜರಂಗದಳದ ದುಷ್ಕರ್ಮಿಗಳು ಈತನ ಅಣ್ಣನ ಮಗ ಕಾವೇಶ್ ಮೇಲೆಯೂ ಹಲ್ಲೆಗೆ ಮುಂದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮಂಜುನಾಥ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ಹೊಸ ಬಸ್ ನಿಲ್ದಾಣದ ಬಳಿ ಒಬ್ಬ ಹುಡುಗ ಬಂದನು. ನಾನು ಬಜರಂಗದಳದವನು. ಲೆಟರ್‌ ಕೊಡು ಎಂದು ಕೇಳಿದನು. ಅದಕ್ಕೆ ನಾನು,- ಲೆಟರ್‌ ಕೇಳಲು ನೀನ್ಯಾರಪ್ಪ? ಪೊಲೀಸರು ಬಂದರೆ ಕೊಡುತ್ತೇನೆ. ನಿನಗೇನಾದರೂ ಸರ್ಕಾರ ಪರವಾನಗಿ ನೀಡಿದೆಯಾ? ಬೇರೆ ಏನಾದರೂ ಕೊಟ್ಟಿದೆಯಾ? ನೀನು ಎ.ಸಿ.ಯ, ಡಿ.ಸಿ.ಯ, ತಹಸೀಲ್ದಾರಾ? ಲೆಟರ್‌ ಕೇಳಲು ನೀನ್ಯಾರು? ಪೊಲೀಸರನ್ನು ಕರೆದುಕೊಂಡು ಬಾ- ಎಂದೆ. ನಾನು ನಿಮ್ಮ ಅಪ್ಪ ಎಂದು ಬೈದನು. ಬಾಯಿ ಬಂದಂತೆ ಹೀಯಾಳಿಸಿ, ನನಗೆ ಹೊಡೆದ” ಎಂದು ವಿವರಿಸಿದ್ದಾರೆ.

“ಆಟೋ ಹುಡುಗರೆಲ್ಲ ಬಂದರು. ಆ ಮೇಲೆ ನನ್ನನ್ನು ಬಿಟ್ಟು ಹೋಗಲಾಯಿತು. ನನ್ನ ಮನಸ್ಸಿಗೆ ತುಂಬಾ ಬೇಜಾರಾಗಿದೆ. ನಾನು ಮಾಜಿ ಗ್ರಾಪಂ ಅಧ್ಯಕ್ಷ. ನಾಲ್ಕೂರು ಜನರಿಗೆ ಅನುಕೂಲವಾಗುವಂತೆ ಕಾನೂನುಬದ್ಧವಾಗಿ ಕೆಲಸ ಮಾಡುತ್ತೇನೆ.  ಯಾರಿಗೂ ತೊಂದರೆ ಮಾಡಿಲ್ಲ. ನನಗೆ ತೊಂದರೆ ನೀಡಿದ ಈತನಿಗೆ ತಕ್ಕ ಶಿಕ್ಷೆಯಾಗಬೇಕು. ಈ ರೀತಿಯ ಕಿಡಿಗೇಡಿಗಳನ್ನು ಬಜರಂಗದಳದಲ್ಲಿ ಇಟ್ಟುಕೊಳ್ಳಬೇಡಿ” ಎಂದಿದ್ದಾರೆ.

“ಅವನು ನೋಡಲು ಟೆರರಿಸ್ಟ್‌ ಥರ ಇದ್ದಾನೆ. ಅವನ ಮೂಲ ಯಾವುದೆಂದು ಕಂಡುಹಿಡಿಯಬೇಕು. ಅವನನ್ನು ಗಡಿಪಾರು ಮಾಡಬೇಕು. ನಾವು ನಮ್ಮ ತಾತ, ಮುತ್ತಾತನನ ಕಾಲದಿಂದಲೂ ಇಲ್ಲಿ ವಾಸವಿದ್ದೇವೆ. ನಮಗೆ ಬೆಲೆ ಇಲ್ಲ ಎಂದ ಮೇಲೆ ಈ ರೀತಿಯ ಟೆರರಿಸ್ಟ್‌ಗಳಿಗೆ ಬೆಲೆ ಕೊಡುವುದೇ? ಆತನನ್ನು ಗಡಿಪಾರು ಮಾಡಿ ನನಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಹೋರಾಟ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ವಾಹನದಲ್ಲಿ ಕಾನೂನಾತ್ಮಕವಾಗಿ ಕರು ಸಾಗಿಸುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸಕಲೇಶಪುರ ತಾಲೂಕಿನ ವಿವಿಧ ದಲಿತ ಸಂಘಟನೆ ಮುಖಂಡರು ಠಾಣೆ ಎದುರು ಜಮಾಯಿಸಿ, ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್‌ ಹಾಗೂ ದಲಿತ ಮುಖಂಡ ಬೈಕೆರೆ ದೇವರಾಜ್‌, “ಬಜರಂಗದಳದ ಕಾರ್ಯಕರ್ತರ ಅಟ್ಟಹಾಸ ತಾಲ್ಲೂಕಿನಲ್ಲಿ ದಿನೇದಿನೇ ಹೆಚ್ಚಾಗುತ್ತಿದೆ. ನಾವ್ಯಾರೂ ಹಿಂದೂಗಳಲ್ಲವಾ? ಅವರು ಮಾತ್ರ ಹಿಂದೂಗಳಾ” ಎಂದು ಪ್ರಶ್ನಿಸಿದ್ದಾರೆ.

“ದಲಿತರು ಮೌನವಾಗಿದ್ದಾರೆ ಎಲ್ಲವನ್ನೂ ಸಹಿಸಿಕೊಳ್ಳುತ್ತಾರೆ ಎಂದು ತಿಳಿದಿದ್ದರೆ ಅದು ತಪ್ಪು. ದಲಿತರು ಬೀದಿಗಿಳಿದರೆ ಇದರ ಪರಿಣಾಮ ಏನಾಗುತ್ತದೆ ಎಂಬುದನ್ನು ಈ ಬಜರಂಗದಳದ ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು. ನಿಮ್ಮ ಪುಂಡಾಟಿಕೆಯನ್ನು ದಲಿತರು ಇನ್ನು ಸಹಿಸಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ವಕೀಲರಾದ ವೇಣುಕುಮಾರ್ ಮಾತನಾಡಿ, “ತಾಲೂಕಿನ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಿದ್ದು ಬಜರಂಗದಳದ ಕೃತ್ಯಗಳನ್ನು ನಾವು ಖಂಡಿಸುತ್ತೇವೆ. ಮತೀಯ ಗೂಂಡಾಗಿರಿ ನಡೆಸಲು ಸರಕಾರ ಇವರಿಗೆ ಯಾವ ಹಕ್ಕು ನೀಡಿದೆ?” ಎಂದು ಪ್ರಶ್ನಿಸಿರುವ ಅವರು, “ಪೊಲೀಸರು ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಾವು ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು. ಶಾಂತಿಗೆ ಭಂಗ ತರುವುದಕ್ಕೆ ನಾವು ಇಷ್ಟಪಡುವುದಿಲ್ಲ. ಆದರೆ ಸ್ವಾಭಿಮಾನಕ್ಕೆ ಧಕ್ಕೆಯಾದರೆ ನಾವು ಸುಮ್ಮನಿರುವುದಿಲ್ಲ” ಎಂಬ ಸ್ಪಷ್ಟ ಸಂದೇಶವನ್ನು ಅವರು ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಹಲವು ದಲಿತ ಮುಖಂಡರು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಲ್ಲೆ ನಡೆಸಿದ ಬಜರಂಗಿ ದಳದ ಬೇವರ್ಸಿಗಳಿಗೆ ಅವರದೇ ಭಾಷೆಯಲ್ಲಿ ದಲಿತರು ಸಹ ತಿರುಗೇಟು ಮುಟ್ಟಿನೋಡಿಕೊಳ್ಳುವ ಹಾಗೆ ನೀಡಬೇಕು ,ಆಗ ಉಷಾರಾಗುತ್ತಾರೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...