Homeಕರ್ನಾಟಕರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಕೆಂಪಣ್ಣ ಅವರ ಸವಾಲು ಸ್ವೀಕರಿಸಲಿ:...

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಕೆಂಪಣ್ಣ ಅವರ ಸವಾಲು ಸ್ವೀಕರಿಸಲಿ: ಸಿದ್ದರಾಮಯ್ಯ

ಭ್ರಷ್ಟಾಚಾರದ ಕುರಿತು ಗುತ್ತಿಗೆದಾರರ ಸಂಘ ಮುಖಂಡ ಕೆಂಪಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ

- Advertisement -
- Advertisement -

‘ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಒಂದು ವೇಳೆ ನಮ್ಮಿಂದ ಸಾಬೀತು ಮಾಡಲು ಆಗಿಲ್ಲ ಎಂದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ’ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೂ ಈ ಸವಾಲನ್ನು ಸ್ವೀಕರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, “ಬಿಜೆಪಿಯವರು ತಾವು ಭ್ರಷ್ಟಾಚಾರವನ್ನೇ ಮಾಡಿಲ್ಲ, ತಮ್ಮಂತಹ ಪ್ರಾಮಾಣಿಕರು, ಸತ್ಯವಂತರು ಯಾರಿಲ್ಲ ಎನ್ನುತ್ತಿದ್ದಾರೆ. ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಒಂದು ವೇಳೆ ನಮ್ಮಿಂದ ಸಾಬೀತು ಮಾಡಲು ಆಗಿಲ್ಲ ಎಂದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ, ನಾವದನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದಾರೆ. ತಪ್ಪು ಮಾಡಿಲ್ಲ ಎಂದಾದರೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಇರುವ ಸಮಸ್ಯೆಯೇನು? ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೂ ಈ ಸವಾಲನ್ನು ಸ್ವೀಕರಿಸಲಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ವಿರೋಧ ಪಕ್ಷದ ನಾಯಕನಾದ ನಂತರ ಮೊದಲ ಬಾರಿಗೆ ಇಂದು ಕೆಂಪಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಅವರು ಪ್ರಧಾನಿಗಳಿಗೆ ಬರೆದ ಪತ್ರವನ್ನು ನೋಡಿದ್ದೆ, ಒಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ 20-25 ಜನ ಪದಾಧಿಕಾರಿಗಳು ಬಂದು ನನ್ನನ್ನು ಭೇಟಿಯಾಗಿ ಮನವಿ ಪತ್ರ ನೀಡಿದ್ದರು. ಅದಾದ ನಂತರ ಅರಣ್ಯ ಗುತ್ತಿಗೆದಾರರ ಸಂಘದವರು ಬಂದು ಮನವಿ ಪತ್ರ ನೀಡಿದ್ದರು. ಸರ್ಕಾರ ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಮ್ಮನ್ನು ಮಾತುಕತೆಗೆ ಕರೆದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದು ಬಿಟ್ಟರೆ ಯಾವ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯ ಮಾಡಬೇಕು ಎಂದು ನನಗೆ ಮನವಿ ಮಾಡಿದ್ದರು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

“ಟೆಂಡರ್‌ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷ ಆದರೂ ಅವರೂ ಯಾವ ಕ್ರಮ ಕೈಗೊಂಡಿಲ್ಲ. ನಾವು ನ್ಯಾಯಾಂಗ ತನಿಖೆ ನಡೆಸುವುದಾದರೆ ದಾಖಲಾತಿ ಕೊಡಲು ತಯಾರಾಗಿದ್ದೇವೆ, ಒಂದು ವೇಳೆ ನಮ್ಮಿಂದ ಇದನ್ನು ಸಾಬೀತು ಮಾಡಲು ಆಗದೆ ಹೋದರೆ ಯಾವುದೇ ರೀತಿಯ ಕಾನೂನು ಕ್ರಮ ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳಿದ್ದಾರೆ. ನಾನು ಕೂಡ ಹೈಕೋರ್ಟ್‌ ನ ಹಾಲಿ ನ್ಯಾಯಾಧೀಶ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೆ” ಎಂದು ಅವರು ತಿಳಿಸಿದ್ದಾರೆ.

“ಭ್ರಷ್ಟಾಚಾರ ಎಲ್ಲಾ ಕಾಲದಲ್ಲೂ ಆಮೆ ವೇಗದಲ್ಲಿ ಇತ್ತು, ಈಗ ಶರವೇಗದಲ್ಲಿ ಸಾಗುತ್ತಿದೆ ಎಂದು ಗುತ್ತಿಗೆದಾರರು ಈ ಸರ್ಕಾರದ ಭ್ರಷ್ಟಾಚಾರವನ್ನು ತೆರೆದಿಟ್ಟಿದ್ದಾರೆ. ಗುತ್ತಿಗೆದಾರರಿಗೆ ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಬಿಬಿಎಂಪಿ ಇಂದ ಸುಮಾರು 22,000 ಕೋಟಿಗೂ ಅಧಿಕ ಬಿಲ್ ಹಣ ಬಿಡುಗಡೆ ಆಗಬೇಕಿದೆಯಂತೆ. ಈ ಬೃಹತ್‌ ಬಾಕಿ ಮೊತ್ತವನ್ನು ಆದ್ಯತೆ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಇದರ ಜೊತೆಗೆ ಅನುದಾನ ಮೀಸಲಿಡದೆ ಟೆಂಡರ್‌ ಕರೆಯುತ್ತಾರೆ, ಇದರಿಂದ ಕಾಮಗಾರಿ ಹಣ ಬಿಡುಗಡೆ ಆಗುವುದು ಹೇಗೆ? ಎಂಬುದು ಅವರ ಪ್ರಶ್ನೆಯಾಗಿದೆ” ಎಂದು ಸಿದ್ದರಾಮಯ್ಯು ಹೇಳಿದ್ದಾರೆ.

“ಒಟ್ಟಾರೆ ಗುತ್ತಿಗೆದಾರರು ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಬೇಸರಗೊಂಡಿದ್ದಾರೆ. ಇಂಥಾ ಭ್ರಷ್ಟ ಸರ್ಕಾರ ಯಾವ ಕಾಲದಲ್ಲೂ ಇರಲಿಲ್ಲ ಎಂಬುದು ಅವರ ಅಳಲು. ನ್ಯಾಯಾಂಗ ತನಿಖೆಗೆ ನಡೆಸಿದರೆ ತನಿಖೆ ವೇಳೆ ಸೂಕ್ತ ದಾಖಲೆ ನೀಡುವುದಾಗಿ ಹೇಳಿದ್ದಾರೆ. ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆ ಏನಿರಬಹುದು ಎಂದು ಕಾದು ನೋಡಬೇಕು” ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ:  ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

“ನಾವು ಸರ್ಕಾರದ ಮೇಲೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಆಗ್ರಹಕ್ಕೆ ಬೆಲೆ ಕೊಡದೆ ಹೋದರೆ ಈ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ” ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ತಮ್ಮ ಸ್ಥಾನಕ್ಕಿರುವ ಘನತೆ, ಗೌರವ ಮರೆತು ‘ಸಿದ್ದರಾಮಯ್ಯ ಅವರ ಸರ್ಕಾರ 10% ಕಮಿಷನ್‌ ಸರ್ಕಾರ’ ಎಂದು ಆಧಾರ ರಹಿತ ಆರೋಪ ಮಾಡಿದಾಗ ಎಲ್ಲರೂ ಅದಕ್ಕೆ ಪ್ರಚಾರ ನೀಡಿದರು, ಯಾರು ಅವರ ಬಳಿ ದಾಖಲೆ ಕೇಳಿಲ್ಲ. ಈಗ ಗುತ್ತಿಗೆದಾರರ ಸಂಘದವರು ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡಲು ಸಿದ್ಧರಿದ್ದಾರೆ. ಹೀಗಿದ್ದಾಗ ನ್ಯಾಯಯುತ ತನಿಖೆ ಆಗಬೇಕೋ ಬೇಡವೋ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...