Homeಮುಖಪುಟನ್ಯಾಯಾಲಯ ನಿರ್ಬಂಧ ಉಲ್ಲಂಘಿಸಿ ಕೋಮು ಪ್ರಚೋದಿತ ಹೇಳಿಕೆ: ಮತ್ತೊಮ್ಮೆ ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ

ನ್ಯಾಯಾಲಯ ನಿರ್ಬಂಧ ಉಲ್ಲಂಘಿಸಿ ಕೋಮು ಪ್ರಚೋದಿತ ಹೇಳಿಕೆ: ಮತ್ತೊಮ್ಮೆ ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ

- Advertisement -
- Advertisement -

ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್‌ರನ್ನು ಮತ್ತೊಮ್ಮೆ ಪೊಲೀಸರು ಬಂಧಿಸಿದ್ದಾರೆ. ಬಿಡುಗಡೆಗೊಂಡ ನಂತರ ನ್ಯಾಯಾಲಯದ ನಿರ್ಬಂಧದ ಹೊರತಾಗಿಯೂ ವಿಡಿಯೋ ಮೂಲಕ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದರಿಂದ ಅವರನ್ನು ಮತ್ತೆ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

“ತೆಲಂಗಾಣದ ಪೊಲೀಸರು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯ ಕೈಗೊಂಬೆಯಾಗಿದ್ದಾರೆ. ಅವರ ಬೆಂಬಲಿಗರಿಗೆ ದೇವಾಲಯಗಳ ಮೇಲೆ ಕಲ್ಲು ಎಸೆಯಲು ಮುಕ್ತ ಅವಕಾಶ ನೀಡಲಾಗಿದೆ. ಆದರೂ ಎಫ್‌ಐಆರ್ ಇಲ್ಲ, ಯಾರ ಬಂಧನವಿಲ್ಲ” ಎಂದು ರಾಜಾ ಸಿಂಗ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು.

ಸಿಎಂ ಕೆಸಿಆರ್ ಮಗ ಕೆಟಿಆರ್ ನಾಸ್ತಿಕರಾಗಿದ್ದಾರೆ. ಅವರು ಯಾವ ಧರ್ಮವನ್ನೂ ನಂಬುವುದಿಲ್ಲ. ಆದರೆ ಆತನ ಪಕ್ಷ ಮತಗಳಿಗಾಗಿ ಎಐಎಂಐಎಂ ಪಕ್ಷದ ಓವೈಸಿ ಜೊತೆ ಕೈಜೋಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಮಿಡಿಯನ್ ಮುನಾವರ್ ಫಾರೂಕಿಯ ಪ್ರದರ್ಶನವನ್ನು ನಾವು ರದ್ದುಗೊಳಿಸಿದ್ದೆವು. ಆತ ಟ್ವಿಟರ್‌ನಲ್ಲಿ ಕೆಟಿಆರ್‌ರನ್ನು ಸಂಪರ್ಕಿಸಿ ಮತ್ತೆ ಪ್ರದರ್ಶನ ಮಾಡಿದ್ದಾರೆ. ಅಲ್ಲಿ 5000 ಪೊಲೀಸರನ್ನು ನಿಯೋಜಿಸಲಾಗಿದೆ. ನಾಲ್ಕು ಐಎಎಸ್ ಅಧಿಕಾರಿಗಳನ್ನು ಹಾಕಿ ಪ್ರದರ್ಶನ ಯಶಸ್ವಿಗೊಳಿಸಲಾಗಿದೆ. ಮುನಾವರ್ ಫಾರೂಕಿಯನ್ನು ಕರೆಸಿ ನಮ್ಮ ದೇವರನ್ನು ಹಂಗಿಸಲಾಗುತ್ತಿದೆ. ಇದೇ ತೆಲಂಗಾಣದಲ್ಲಿ ಕೋಮು ವಾತವರಣ ಇರುವುದಕ್ಕೆ ಕಾರಣ ಎಂದು ರಾಜಾ ಸಿಂಗ್ ಹೇಳಿದ್ದಾರೆ.

ಬಿಜೆಪಿಯು ಅವರನ್ನು ಉಚ್ಛಾಟಿಸುವುದರ ಕುರಿತು ಪ್ರತಿಕ್ರಿಯಿಸಿದ್ದು, “ನಾನು ಯಾವುದೇ ಧರ್ಮದ ವಿರುದ್ಧವಿಲ್ಲ, ವ್ಯಕ್ತಿಗಳ ವಿರುದ್ಧವಿದ್ದೇನೆ ಎಂದು ಪಕ್ಷದ ಮುಖಂಡರಿಗೆ ಮನವರಿಕೆ ಮಾಡಿಕೊಡುತ್ತೇನೆ” ಎಂದು ಅವರು ಹೇಳಿದ್ದಾರೆ.

“ಕೋರ್ಟ್ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ನಿರ್ಭಂದ ವಿಧಿಸಿದೆ. ಆದರೂ ನಾನು ಮಾತನಾಡದೇ ಇರಲು ಸಾಧ್ಯವಿಲ್ಲ. ರಿಸ್ಕ್ ತೆಗೆದುಕೊಂಡು ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ. ಏಕೆಂದರೆ ರಾಷ್ಟ್ರೀಯ ಮಾಧ್ಯಮಗಳು ನನ್ನ ವಿರುದ್ಧ ಪಿತೂರಿ ನಡೆಸಿವೆ ಎಂದು ಆರೋಪಿಸಿದ್ದಾರೆ. ಸದ್ಯ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.

ಇದನ್ನೂ ಓದಿ; ತೆಲಂಗಾಣ: ಪ್ರವಾದಿ ಮುಹಮ್ಮದ್‌ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...