Homeಮುಖಪುಟ‘ಹರಿತವಲ್ಲ ಬಲವಾದ ಹಲವು ಗಾಯವಿದೆ’: ಬಿಜೆಪಿ ನಾಯಕಿ ಸೋನಾಲಿ ಫೋಗಟ್‌ ಶವಪರೀಕ್ಷೆ ವರದಿ

‘ಹರಿತವಲ್ಲ ಬಲವಾದ ಹಲವು ಗಾಯವಿದೆ’: ಬಿಜೆಪಿ ನಾಯಕಿ ಸೋನಾಲಿ ಫೋಗಟ್‌ ಶವಪರೀಕ್ಷೆ ವರದಿ

ಟಿಕ್‌ಟಾಕ್ ವೀಡಿಯೊ ಮೂಲಕ ಖ್ಯಾತಿ ಪಡೆದಿದ್ದ ಸೋನಾಲಿ ಫೋಗಟ್‌ 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು

- Advertisement -
- Advertisement -

ಗೋವಾದಲ್ಲಿ ಮೃತಪಟ್ಟ ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ದೇಹದಲ್ಲಿ ‘ಹಲವು ಹರಿತವಲ್ಲದ ಬಲವಾದ ಗಾಯಗಳು(multiple blunt force injurie)’ ಕಂಡು ಬಂದಿದೆ ಎಂದು ಶವಪರೀಕ್ಷೆ ವರದಿ ಗುರುವಾರ ಬಹಿರಂಗಪಡಿಸಿದೆ. ಸೋನಾಲಿ ಅವರ ಇಬ್ಬರು ಸಹಚರರ ಮೇಲೆ ಅವರ ಕೊಲೆ ಆರೋಪ ಹೊರಿಸಿದ ಕೆಲವೇ ಗಂಟೆಗಳಲ್ಲಿ ಈ ವರದಿ ಬಂದಿದೆ.

“ದೇಹದ ಮೇಲೆ ಅನೇಕ ಹರಿತವಲ್ಲದ ಬಲವಾದ ಗಾಯಗಳಿವೆ. ಅವುಗಳನ್ನು ಗಮನಿಸಿದರೆ ಸಾವಿನ ವಿಧಾನವನ್ನು ತನಿಖಾಧಿಕಾರಿಯೇ ಖಚಿತಪಡಿಸಿಕೊಳ್ಳಬೇಕು” ಎಂದು ಪೋಸ್ಟ್ ಮಾರ್ಟಂ ವರದಿ ಹೇಳಿದೆ. ಆದರೆ, ಸೋನಾಲಿ ಫೋಗಟ್ ಅವರ ದೇಹದ ದೈಹಿಕ ಪರೀಕ್ಷೆಯನ್ನು ನಡೆಸಿದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ದೇಹದ ಮೇಲೆ ಯಾವುದೇ ಹರಿತವಾದ(ಚೂಪಾದ) ಗಾಯಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋನಾಲಿ ಫೋಗಟ್ ಅವರ ಕೊಲೆ ಮಾಡಿದ್ದಾರೆ ಎಂದು ಸೋಮವಾರ ಅವರು ಗೋವಾಕ್ಕೆ ಆಗಮಿಸಿದಾಗ ಅವರ ಜೊತೆಗಿದ್ದ ಅವರ ಆಪ್ತ ಸಹಾಯಕ ಸುಧೀರ್ ಸಾಂಗ್ವಾನ್ ಮತ್ತು ಅವರ ಸ್ನೇಹಿತ ಸುಖ್ವಿಂದರ್ ವಾಸಿ ವಿರುದ್ಧ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ‘ಹರಿಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌‌ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ’: ದೂರು ದಾಖಲಿಸಿದ ಸಹೋದರ

43 ವರ್ಷದ ಸೋನಾಲಿ ಫೋಗಟ್ ಮಂಗಳವಾರ ಬೆಳಗ್ಗೆ ಉತ್ತರ ಗೋವಾದ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಅವರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ವರದಿಗಳನ್ನು ಅವರ ಕುಟುಂಬಿಕರು ಪ್ರಶ್ನಿಸಿದ್ದರು.

ಸೋನಾಲಿ ಫೋಗಟ್ ಅವರ ಶವಪರೀಕ್ಷೆ ವರದಿ

ಕುಟುಂಬಿಕರು ಮೃತದೇಹವನ್ನು ದೆಹಲಿಯ ಏಮ್ಸ್‌ನಲ್ಲಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಬಯಸಿದ್ದರು. ಆದರೆ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ ನಂತರ ಗೋವಾದಲ್ಲೆ ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪಿಕೊಂಡಿದ್ದರು.

ಮೂರು ವರ್ಷಗಳ ಹಿಂದೆ ತಮ್ಮ ಸಹೋದರಿಯನ್ನು ಸುಧೀರ್ ಸಂಗ್ವಾನ್ ಮತ್ತು ಸುಖ್ವಿಂದರ್ ಅತ್ಯಾಚಾರವೆಸಗಿದ್ದರು. ಇದೀಗ ಅವರ ಕೊಲೆ ಮಾಡಿದ್ದಾರೆ ಎಂದು ಸೋನಾಲಿ ಸಹೋದರ ರಿಂಕು ಧಾಕಾ ದೂರು ದಾಖಲಿಸಿದ್ದಾರೆ. ಸೋನಾಲಿ ಅವರ ವಿಡಿಯೋ ಮೂಲಕ ಅವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಟಿಕ್‌ಟಾಕ್‌ ಸ್ಟಾರ್‌ ಸೋನಾಲಿಗೆ ಸೋಲು: ಮತದಾರರ ಮನ ಗೆದ್ದ ಕುಲ್ದೀಪ್‌

“ಸೋನಾಲಿ ಅವರ ಆಹಾರದಲ್ಲಿ ಏನನ್ನೋ ಬೆರೆಸಲಾಗಿದೆ ಎಂದು ಅವರು ನಮಗೆ ಹೇಳಿದ್ದರು. ನಾವು ಅನುಮಾನಿಸುತ್ತಿರುವವರನ್ನು ಬಂಧಿಸಿ” ಎಂದು ಅವರ ಸಹೋದರ NDTV ಜೊತೆಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಸೋನಾಲಿ ಫೋಗಟ್ ಸಾಯುವ ಕೆಲವು ಗಂಟೆಗಳ ಮೊದಲು ತನ್ನ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು ಎಂದು ರಿಂಕು ಹೇಳಿದ್ದಾರೆ. ಈ ವೇಳೆ ಅವರು ವಿಚಲಿತಳಾಗಿದ್ದು, ತನ್ನ ಸಹಾಯಕರ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದರು ಜೊತೆಗೆ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ನಿರ್ಧರಿಸಿದ್ದಾರು ಎಂದು ರಿಂಕು ಹೇಳಿದ್ದಾರೆ.

ಸುಧೀರ್ ಸಂಗ್ವಾನ್ ತನ್ನ ಸಹೋದರಿಯ ರಾಜಕೀಯ ಮತ್ತು ನಟನಾ ವೃತ್ತಿಯನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಸೋನಾಲಿಯ ಫೋನ್‌ಗಳು, ಆಸ್ತಿ ದಾಖಲೆಗಳು, ಎಟಿಎಂ ಕಾರ್ಡ್‌ಗಳು ಮತ್ತು ಮನೆಯ ಕೀಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ರಿಂಕು ಧಾಕಾ ಆರೋಪಿಸಿದ್ದಾರೆ. ಅವರ ಸಾವಿನ ನಂತರ ಹರಿಯಾಣದಲ್ಲಿರುವ ಅವರ ಫಾರ್ಮ್‌ಹೌಸ್‌ನಿಂದ ಸಿಸಿಟಿವಿ ಕ್ಯಾಮೆರಾಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಗ್ಯಾಜೆಟ್‌ಗಳು ಕಾಣೆಯಾಗಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾಮರಾ ಎದುರಲ್ಲೇ ಅಧಿಕಾರಿಗೆ ಚಪ್ಪಲಿಯಲ್ಲಿ ಹೊಡೆದ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌

ತನ್ನ ಟಿಕ್‌ಟಾಕ್ ವೀಡಿಯೊ ಮೂಲಕ ಖ್ಯಾತಿ ಪಡೆದಿದ್ದ ಸೋನಾಲಿ ಫೋಗಟ್‌ 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಆಗಿನ ಕಾಂಗ್ರೆಸ್ ನಾಯಕ ಕುಲದೀಪ್ ಬಿಷ್ಣೋಯ್ ವಿರುದ್ಧ ಸೋತಿದ್ದರು (ಅವರು ನಂತರ ಬಿಜೆಪಿಗೆ ಸೇರಿದ್ದಾರೆ). 2020 ರಲ್ಲಿ ಸೋನಾಲಿ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದರು.

ಸೋನಾಲಿ ಅವರ 15 ವರ್ಷದ ಮಗಳು ಯಶೋಧರ ಕೂಡ ತನ್ನ ತಾಯಿಗೆ ನ್ಯಾಯ ದೊರಕಿಸಿಕೊಡುವಂತೆ ಕೇಳಿಕೊಂಡಿದ್ದಾರೆ. ಸೋನಾಲಿ ಫೋಗಟ್ ಅವರ ಪತಿ 2016 ರಲ್ಲಿ ನಿಧನರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...