Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಬಕ್ರೀದ್‌, ರಂಜಾನ್‌ ಪ್ರಾರ್ಥನೆಗೆ ಮಾತ್ರ ಅವಕಾಶ; ಹೈಕೋರ್ಟ್ ಮಧ್ಯಂತರ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಬಕ್ರೀದ್‌, ರಂಜಾನ್‌ ಪ್ರಾರ್ಥನೆಗೆ ಮಾತ್ರ ಅವಕಾಶ; ಹೈಕೋರ್ಟ್ ಮಧ್ಯಂತರ ಆದೇಶ

- Advertisement -
- Advertisement -

ಹಿಂದೂ- ಮುಸ್ಲಿಂ ಕೋಮು ದಳ್ಳುರಿ ಎಬ್ಬಿಸಲು ಕೆಲವು ಮತೀಯ ಸಂಘಟನೆಗಳು ಬಯಸುತ್ತಿರುವ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಬೇಕು ಎಂದು ಆದೇಶ ಹೊರಡಿಸಿದೆ.

ಇಲ್ಲಿನ 2 ಎಕರೆಗೂ ಹೆಚ್ಚು ಜಾಗವನ್ನು ಆಟದ ಮೈದಾನವಾಗಿಯೂ ಹಾಗೂ ಮುಸ್ಲಿಂ ಸಮುದಾಯದವರು ಬಕ್ರೀದ್ ಮತ್ತು ರಂಜಾನ್ ಸಮಯದಲ್ಲಿ ಪ್ರಾರ್ಥನೆಗಾಗಿ ಮಾತ್ರವೇ ಬಳಸಬಹುದು ಎಂದು ಮಧ್ಯಂತರ ಆದೇಶದಲ್ಲಿ ಹೇಳಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಂಟಿ ಆಯುಕ್ತ (ಪಶ್ಚಿಮ) ಆಗಸ್ಟ್ 7ರಂದು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ರಾಜ್ಯ ವಕ್ಫ್‌ ಮತ್ತು ಬೆಂಗಳೂರು ಜಿಲ್ಲಾ ವಕ್ಫ್ ಅಧಿಕಾರಿಗಳು ಪ್ರಶ್ನಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಮೀನಿನ ಮಾಲೀಕತ್ವವನ್ನು ಪರಿಶೀಲಿಸುವಂತೆ ಜಂಟಿ ಆಯುಕ್ತರಿಗೆ (ಪಶ್ಚಿಮ) ಬಿಬಿಎಂಪಿ ಮುಖ್ಯ ಆಯುಕ್ತರು ಸೂಚಿಸಿದ್ದರು. ನಂತರ ಅಧಿಕಾರಿಯು ಆಗಸ್ಟ್ 7ರಂದು ಜಮೀನು ಕಂದಾಯ ಇಲಾಖೆಗೆ ಸೇರಿದ್ದು ಎಂದು ಪ್ರತಿಕ್ರಿಯೆ ನೀಡಿದ್ದರು.

ಈ ಆಸ್ತಿ ವಿವಾದವು 1955ರಷ್ಟು ಹಿಂದಿನದು. ಸುಪ್ರೀಂ ಕೋರ್ಟ್ 1965ರಲ್ಲಿ ವಕ್ಫ್ ಪರವಾಗಿ ತೀರ್ಪು ನೀಡಿತ್ತು.

ಈದ್ಗಾ ಮೈದಾನದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡಬೇಕು ಎಂದು ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯನ್ನು ಕೋರಿದ್ದವು.

ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್ 1965ರ ಗೆಜೆಟ್ ಅನ್ನು ಪ್ರಸ್ತುತಪಡಿಸಿ ಈ ಮೈದಾನವು ವಕ್ಫ್ ಆಸ್ತಿ ಎಂದು ತಿಳಿಸಿತು. 1974ರ ಸಿಟಿ ಸರ್ವೆ ದಾಖಲೆಗಳು ಈ ಜಾಗವನ್ನು ಆಟದ ಮೈದಾನವೆಂದು ಸೂಚಿಸಿರುವುದಾಗಿ ಹೇಳಲಾಗುತ್ತಿದೆ.

ಬಿಬಿಎಂಪಿ ಆದೇಶದ ನಂತರ ಹಿಂದುತ್ವ ಸಂಘಟನೆಗಳು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವುದಾಗಿ ಘೋಷಿಸಿದವು. ಅಲ್ಲದೆ ಸ್ಥಳೀಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರೂ ಇಲ್ಲಿ ರಾಷ್ಟ್ರಧ್ವಜ ಹಾರಿಸುವುದಾಗಿ ತಿಳಿಸಿದರು.

ಇದನ್ನೂ ಓದಿರಿ: ಕೋಮುವಾದಿಗಳು ಎಬ್ಬಿಸಿದ ವಿವಾದದ ಸುಳಿಯಲ್ಲಿ ಈದ್ಗಾ ಮೈದಾನದ ಬಯಲು

ರಾಜ್ಯ ಕಂದಾಯ ಇಲಾಖೆಯು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆಗಸ್ಟ್ 15ರಂದು ಈದ್ಗಾ ಮೈದಾನದಲ್ಲಿ ಸಹಾಯಕ ಆಯುಕ್ತ ಶ್ರೇಣಿಯ ಅಧಿಕಾರಿಯೊಬ್ಬರು ಧ್ವಜಾರೋಹಣ ಮಾಡಿದ್ದರು.

ಇದೇ ವೇಳೆ ಕೆಲವು ಹಿಂದುತ್ವ ಸಂಘಟನೆಗಳು ಆಟದ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಿಸುವಂತೆ ಒತ್ತಾಯಿಸಿದ್ದವು. ಈ ಮೂಲಕ ಈದ್ಗಾ ಮೈದಾನವನ್ನು ವಿವಾದದ ಕೇಂದ್ರ ಬಿಂದು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಯಥಾಸ್ಥಿತಿ ಮುಂದುವರಿಸಲು ಸೂಚಿಸಿದೆ.

ವಿವಾದಿತ ಈದ್ಗಾ ಮೈದಾನವನ್ನು ಆಟದ ಮೈದಾನವಾಗಿ ಮತ್ತು ಮುಸ್ಲಿಮರು ಹಬ್ಬದ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಮಾತ್ರ ಬಳಸಬೇಕೆಂದು ನ್ಯಾಯಮೂರ್ತಿ ಹೇಮಂತ್‌ ಚಂದನ್ ಗೌಡರ್ ತೀರ್ಪು ನೀಡಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...