Homeಕರ್ನಾಟಕಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಎಫ್‌ಐಆರ್‌

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಎಫ್‌ಐಆರ್‌

ಚಿತ್ರದುರ್ಗದಲ್ಲಿ ನ್ಯಾಯ ಸಿಗುವುದಿಲ್ಲವೆಂದು ಅರಿತ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ ಬಳಿಕ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ ಎಂದು ತನಿಖಾ ವರದಿಗಳ ಜಾಲತಾಣ ‘ದಿ ಫೈಲ್‌’ ಹಾಗೂ ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ ಮಾಡಿವೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅವರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದರು ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿದೆ ಎಂದು ವರದಿಗಳು ಹೇಳಿವೆ.

ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿದೆ.

ಆರಂಭದಲ್ಲಿ ಪ್ರಕಣವನ್ನು ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿದೆ. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಎಫ್‌ಆರ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿ ಮುರುಘಾ ಶರಣರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ.

“ಸ್ವಾಮೀಜಿ ಅವರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೂರು ನೀಡಿದ್ದು, ನಜರ್‌ಬಾದ್‌ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ” ಎಂದು ಮೈಸೂರು ಡಿಸಿಪಿ ಪ್ರದೀಪ್ ಗುಂಟಿ ಅವರು ‘ಆಂದೋಲನ’ ದಿನಪತ್ರಿಕೆಗೆ ತಿಳಿಸಿದ್ದಾರೆ.

ಮತ್ತುಬರಿಸಿ ಲೈಂಗಿಕ ದೌರ್ಜನ್ಯ; ಮಕ್ಕಳ ಆರೋಪ

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ಒಡನಾಡಿ ಸಂಸ್ಥೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು. ವಿಸ್ಕೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಕಮಲ ಅವರು ರಜೆ ಇದ್ದ ಕಾರಣ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದ್ದಾರೆ.

ಈ ಹಿಂದೆ ತಡೆಯಾಜ್ಞೆ ಕೋರಿದ್ದ ಮುರುಘಾ ಶರಣರು

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು” ಎಂದು ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಆದರೆ ನಿರ್ದಿಷ್ಟ ಪ್ರಕರಣ, ನಿರ್ದಿಷ್ಟ ವಸ್ತು ಸಂಗತಿಯನ್ನು ಉಲ್ಲೇಖಿಸದೇ ತಡೆಯಾಜ್ಞೆ ಕೋರಿದ್ದರು ಎಂದು ‘ದಿ ಫೈಲ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...