Homeಕರ್ನಾಟಕಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

- Advertisement -
- Advertisement -

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದ್ದು, ಒಡನಾಡಿ ಸಂಸ್ಥೆಯ ಮುಖ್ಯಸ್ಥರಲ್ಲಿ ಒಬ್ಬರಾದ ಪರಶು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು ಎಂಬ ಭಾವನೆ ಇತ್ತು. ಮಕ್ಕಳ ಹೇಳಿಕೆ ಬಳಿಕ‌ ಸ್ವಾಮೀಜಿಯವರ ಬಗ್ಗೆ ನಮಗೆ ಅಸಹ್ಯ ಹುಟ್ಟಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಬ್ಬರು ಮಕ್ಕಳು ಚಿತ್ರದುರ್ಗದಲ್ಲಿ ಓದುತ್ತಿದ್ದರು. ಆ ಮಕ್ಕಳ ಮೇಲೆ ಸ್ವಾಮೀಜಿಯವರು ನಿರಂತರವಾಗಿ ದೌರ್ಜನ್ಯ ನಡೆಸಿದ್ದಾರೆ. ಅವರ ಕಿರುಕುಳದಿಂದ‌ ಬೇಸತ್ತ ಮಕ್ಕಳು ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅಲ್ಲಿ ಸಾಧ್ಯವಾಗದೇ ಇದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾಗಿದ್ದರು” ಎಂದು ತಿಳಿಸಿದ್ದಾರೆ.

“ಆಟೋ ಚಾಲಕನೊಬ್ಬ ಸಹಾಯ ಮಾಡಿ ನಮ್ಮ ಬಳಿ ಹೋಗಿ ನ್ಯಾಯ ಸಿಗುತ್ತದೆ ಎಂದು ಕಳುಹಿಸಿಕೊಟ್ಟರು. ಆ ಇಬ್ಬರು ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿದಾಗ ಸ್ವಾಮೀಜಿಯವರ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ತಕ್ಷಣ ನಾವು ಮಕ್ಕಳು ಹಕ್ಕುಗಳ ರಕ್ಷಣಾ ಕೇಂದ್ರದವರಿಗೆ ವಿಚಾರ ತಲುಪಿಸಿದೆವು. ಅವರೂ ಸಹ ಕೌನ್ಸಲಿಂಗ್‌ ಮಾಡಿ ಮಕ್ಕಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಖಚಿತವಾದ ನಂತರ‌ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ನಾವು ಅದಾವುದನ್ನು ಲೆಕ್ಕಿಸದೇ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇದು ಕೇವಲ ಇಬ್ಬರು ಮಕ್ಕಳಿಗೆ ದೌರ್ಜನ್ಯವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಮಕ್ಕಳು ಹೇಳುವ ಪ್ರಕಾರ ಅಲ್ಲಿ 120 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು ಅದೆಷ್ಟು ಮಕ್ಕಳಿಗೆ ಈ ರೀತಿಯ ದೌರ್ಜನ್ಯವಾಗಿದೆ ಎಂದು ನೋಡಬೇಕಿದೆ. ಸರಿಯಾದ ತನಿಖೆಯಾಗಬೇಕಿದೆ. ಇದಕ್ಕೆ ಸಹಕಾರ ಕೊಟ್ಟವರ ವಿರುದ್ದವು ಪ್ರಕರಣ ದಾಖಲು ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಸ್ವಾಮೀಜಿಯವರಿಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅತ್ಯಂತ ಪ್ರಭಾವಿಗಳು ಪರಿಚಯವಿದ್ದಾರೆ. ಮಕ್ಕಳು ಅಷ್ಟು ದೂರದಿಂದ ಇಲ್ಲಿಗೆ ಬಂದಿರೋದೇ ನ್ಯಾಯ ಸಿಗುತ್ತೆ ಎಂಬ ಭರವಸೆಯಿಂದ. ಹಾಗಾಗಿ‌ ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆಯೇ ಆಗಬೇಕು” ಎಂದು ಹೇಳಿದ್ದಾರೆ.

ಮುರುಘ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಮಹಿಳಾ ವಾರ್ಡನ್ ನೀಡಿರುವ ದೂರಿನ ಅನ್ವಯ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನನ್ನು ಅತ್ಯಾಚಾರ ಮಾಡಲು ಬಸವರಾಜನ್ ಯತ್ನಿಸಿದ್ದಾರೆಂದು ವಾರ್ಡನ್ ಆರೋಪಿಸಿದ್ದಾರೆ. ಮಠದ ಆಡಳಿತಾಧಿಕಾರಿ ಆಗಿದ್ದ ಅವರು ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದೂ ವಾರ್ಡನ್‌ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಒಡನಾಡಿಯ ಪರಶು ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಬಸವರಾಜನ್‌ ಮೇಲೆ ಪ್ರಕರಣ ದಾಖಲಿಸಿದ್ದರೆ, ಆ ವಿಚಾರವಾಗಿಯೂ ತನಿಖೆಯಾಗಲಿ. ಸತ್ಯ ಹೊರಬರಲಿ. ಮಕ್ಕಳನ್ನು ಮುಂದಿಟ್ಟುಕೊಂಡು ಯಾರೂ ಸುಖಾಸುಮ್ಮನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸ್ವಾಮೀಜಿಯವರ ಮಾನ ಹರಣ ಮಾಡಲೆಂದು ಇಲ್ಲಿ ಯಾರೂ ಮುಂದಾಗಿಲ್ಲ. ಇದು ಪೌರ ಪ್ರಜ್ಞೆಗೆ ಬಿಟ್ಟ ವಿಚಾರ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಧರ್ಮಗುರುಗಳು: ಇಲ್ಲಿದೆ ಪ್ರಮುಖರ ಪಟ್ಟಿ

“ಸರ್ವರ ಏಳ್ಗೆಯಾಗಬೇಕು ಎಂಬುದು ಸಂವಿಧಾನದ ಆಶಯ. ಅದಕ್ಕೆ ವಿರುದ್ಧವಾಗಿ ನಡೆಯುತ್ತಿದ್ದರೆ ನಾವೇನೂ ಮಾಡಲು ಆಗಲ್ಲ. ಮಕ್ಕಳು ನಮ್ಮ ಸಂಸ್ಥೆಯ ಮುಂದೆ ಬಂದರು. ಕಾನೂನು ಸುಪರ್ದಿಗೆ ನೀಡುವುದು ನಮ್ಮ ಜವಾಬ್ದಾರಿಯಾಗಿತ್ತು. ನಾವು ಕಾನೂನು ಸುಪರ್ದಿಗೆ ನೀಡಿದ್ದೇವೆ. ಮಕ್ಕಳ ಕಲ್ಯಾಣ ನ್ಯಾಯಾಧೀಶರ ಗಮನಕ್ಕೆ ತಂದಿದ್ದೇವೆ. ನ್ಯಾಯಾಧೀಶರ ಮೂಲಕ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ” ಎಂದರು.

“ಇಂತಹ ಘಟನೆಗಳು ನಡೆದಾಗ ಜೆವಿನಿಲ್ಲೆ ಜಸ್ಟೀಸ್ ಆಕ್ಟ್ ಹಾಗೂ ಪೋಸ್ಕೊ ಕಾಯ್ದೆ ಪ್ರಕಾರ ಸಿಡಬ್ಲ್ಯೂಸಿ ಗಮನಕ್ಕೆ ತರಬೇಕು. ಮೇಲ್ಮೋಟಕ್ಕೆ ಪ್ರಕರಣ ನಡೆದಿರುವುದು ಕಂಡು ಬಂದಿದೆ. ನಮ್ಮ ಆತ್ಮಸಮಾಲೋಚನಾ ವರದಿ ಹಾಗೂ ಸಿಡಬ್ಲ್ಯೂಸಿ ಆತ್ಮಸಮಾಲೋಚನೆಯ ವರದಿ ಹೊಂದಾಣಿಕೆಯಾಗಿದೆ. ಅದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ” ಎಂದು ಮಾಹಿತಿ ನೀಡಿದರು.

ಒಡನಾಡಿ ಸಂಸ್ಥೆಯ ಮೇಲೆ ಒತ್ತಡ ಹಾಗೂ ಬೆದರಿಕೆ ಬರುತ್ತಿವೆ ಎಂಬ ವರದಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಯಾವ ಪ್ರಕರಣದಲ್ಲಿ ನಮಗೆ ಬೆದರಿಕೆ ಬಂದಿಲ್ಲ ಹೇಳಿ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುರುಗಾ ಶರಣರ ವಿರುದ್ಧ ಎಫ್.ಐ.ಆರ್. ದಾಕಲಾಗುತ್ತಿದ್ದಂತೆಯೇ, ಈ ಪ್ರಕರಣದ ಮತ್ತೊಬ್ಬ ಆರೋಪಿ ವಾರ್ಡನ್, ಬಸವರಾಜನ್ ವಿರುದ್ಧ ಅತ್ಯಾಚಾರದ ದೂರು ದಾಕಲಿಸಿರುವುದು, ಕರ್ನಾಟಕ ಸರ್ಕಾರ ಮುರುಗಾ ಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿರುವುದರ ಸ್ಪಷ್ಟ ಸೂಚನೆ. ಹಾಗಾಗಿ ಈ “ಒಡನಾಡಿ” ಹೇಳಿದಂತೆ ನ್ಯಾಯಾಂಗ ತನಿಕೆಯೇ ಸೂಕ್ತ.

  2. ಈ ದೇಶದ ಕಾನೂನು ಹಣವಂತರು ಮತ್ತು ಅಧಿಕಾರ ಹೊಂದಿದವರ ಕೈಗೊಂಬೆ, ಈ ಖಾವಿ ಬಳಿ ಯರಡು ಇದೆ ಮುಂದೇನಾಗುತ್ತದೆ ಊಹಿಸಲಾರದಷ್ಟು ದಡ್ಡರೇ ನಾವು

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...