Homeದಲಿತ್ ಫೈಲ್ಸ್ಅರಸೀಕೆರೆ: ಜಾತಿ ದೌರ್ಜನ್ಯದ ದೂರು ನೀಡಲು ಹೋದ ದಲಿತ ಯುವಕರನ್ನೇ ಕೂಡಿ ಹಾಕಿದ ಪಿಎಸ್‌ಐ!

ಅರಸೀಕೆರೆ: ಜಾತಿ ದೌರ್ಜನ್ಯದ ದೂರು ನೀಡಲು ಹೋದ ದಲಿತ ಯುವಕರನ್ನೇ ಕೂಡಿ ಹಾಕಿದ ಪಿಎಸ್‌ಐ!

- Advertisement -
- Advertisement -

ಜಾತಿ ದೌರ್ಜನ್ಯ ಪ್ರಕರಣದ ಕುರಿತು ದೂರು ನೀಡಲು ಹೋದ ಇಬ್ಬರು ದಲಿತ ಯುವಕರನ್ನು ಪೊಲೀಸ್‌‌ ಸಬ್‌ಇನ್‌ಸ್ಪೆಕ್ಟರ್‌ ಕೂಡಿ ಹಾಕಿದ್ದ ಆರೋಪ ಕೇಳಿಬಂದಿದೆ.

ದೂರು ನೀಡಲು ಬಂದ ಇಬ್ಬರು ದಲಿತ ಯುವಕರನ್ನು ಬಾಣಾವರ ಪೊಲೀಸ್ ಠಾಣೆಯ ಪಿಎಸ್‌ಐ ಠಾಣೆಯಲ್ಲೇ ಕೂಡಿ ಹಾಕಿರುವ ಬಗ್ಗೆ ವರದಿಯಾಗಿದೆ.

ತಮ್ಮ ತಂದೆ ಹಾಗೂ ತಾಯಿಗೆ ಜಮೀನಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಇಬ್ಬರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ಯುವಕರಿಬ್ಬರು ಬಾಣಾವರ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಆ ವೇಳೆ ಕೂಡಿ ಹಾಕಲಾಗಿತ್ತು ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಮಾಹಿತಿ ತಿಳಿದ ಕೆಲವು ದಲಿತ ಮುಖಂಡರು ಪೊಲೀಸ್ ಠಾಣೆಗೆ ತೆರಳಿ, ಯುವಕರನ್ನು ಬಿಟ್ಟು ಕಳುಹಿಸುವಂತೆ ಪಿಎಸ್ಐ ಅಭಿಜಿತ್‌ಗೆ ಒತ್ತಾಯಿಸಿದ್ದಾರೆ.

ಮಾರಣಾಂತಿಕ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಬಾಣಾವರ ಹೋಬಳಿಯ ಹಿರಿಯೂರು ಗ್ರಾಮದ ಜಯಣ್ಣ ಮತ್ತು ಅವರ ಪತ್ನಿ ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಅದೇ ಗ್ರಾಮದ ಸ್ವಾಮಿ ಮತ್ತು ಅವರ ಪತ್ನಿ ದಾಳಿ ಮಾಡಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜಯಣ್ಣ ಮತ್ತು ಅವರ ಪತ್ನಿಗೆ ಮಚ್ಚಿನಿಂದ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದ್ದಾರೆ ಎಂದು ವರದಿಗಳಾಗಿವೆ.

ಹಲ್ಲೆಗೊಳಗಾದ ಜಯಣ್ಣ ಮತ್ತು ಅವರ ಪತ್ನಿ ಸರ್ಕಾರಿ ಆಸ್ಪತ್ರೆ ಅರಸೀಕೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ದಂಪತಿಯ ಮಕ್ಕಳಾದ ಅರುಣ್ ಮತ್ತು ನಿರಂಜನ್ ದೂರು ನೀಡಲು ಬಾಣಾವರ ಪೊಲೀಸ್ ಠಾಣೆಗೆ ಹೋಗಿದ್ದಾಗ, ಪಿಎಸ್‌ಐ ಅನುಚಿತವಾಗಿ ವರ್ತಿಸಿರುವ ಆರೋಪ ಬಂದಿದೆ.

ಪಿಎಸ್‌ಐ ಅಭಿಜಿತ್ ದೂರು ನೀಡಲು ಬಂದ ಇಬ್ಬರು ಯುವಕರನ್ನು ಬೆದರಿಸಿ ಠಾಣೆಯಲ್ಲಿ ಆರೋಪಿಗಳಂತೆ ಸುಮಾರು 10 ಗಂಟೆಯಿಂದ ಸಂಜೆ 4 ಗಂಟೆಗಳವರೆಗೆ ಕೂಡಿ ಹಾಕಿದ್ದರು ಎಂದು ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದೌರ್ಜನ್ಯ ಕಂಡನಾರ್ಹ. ಆ ಪಿ.ಎಸ್. ಐ.ಅನ್ನು ಅಮಾನತುಗೊಳಿಸಬೇಕು.

  2. ಆ ಪೊಲೀಸ ಸಬ್ ಇನ್ಸ್ಪೆಕ್ಟರ್ ಮೇಲೆ ಖಾಸಗಿ ದೂರು ದಾಖಲು ಮಾಡಿ ಕೆಲಸದಿಂದ ವಜಾ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...