Homeಮುಖಪುಟ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

- Advertisement -
- Advertisement -

ತಮ್ಮ ಪಕ್ಷವನ್ನು ಒಡೆಯಲು ಮತ್ತು ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿಯ ಪ್ರಯತ್ನಗಳ ಹೊರತಾಗಿಯೂ ಎಲ್ಲಾ ಎಎಪಿ ಶಾಸಕರು ತಮ್ಮೊಂದಿಗೆ ಇದ್ದಾರೆ ಎಂಬುದನ್ನು ಸಾಬೀತುಪಡಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಸದನದಲ್ಲಿ ವಿಶ್ವಾಸ ಯಾಚನೆ ಮಾಡಲಿದ್ದಾರೆ. ತಮ್ಮ ಪಕ್ಷದ ಶಾಸಕರು ಯಾವುದೆ ಪ್ರಲೋಭನೆಗೆ ಒಳಗಾಗುವುದಿಲ್ಲ ಎಂಬುದನ್ನು ಸಾಬೀತುಪಡಿಸಲು ಬಹುಮತದ ಸಾಬೀತು ಮಾಡುತ್ತಿದ್ದೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

‘ಆಪರೇಷನ್ ಕಮಲ’ದ ಭಾಗವಾಗಿ ಎಎಪಿ ಶಾಸಕರಿಗೆ ತಲಾ 20 ಕೋಟಿ ರೂ.ಗಳನ್ನು ನೀಡುವುದಾಗಿ ಬಿಜೆಪಿ ಆಫರ್‌ ನೀಡಿದೆ ಎಂದು ಅವರು ಆರೋಪಿಸಿದ್ದಾರೆ. ಕಳೆದ ವಾರ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ದೆಹಲಿ ಸರ್ಕಾರದ 62 ಎಎಪಿ ಶಾಸಕರಲ್ಲಿ 53 ಮಂದಿ ಭಾಗವಹಿಸಿದ್ದರು. ಉಳಿದವರು ಆನ್‌ಲೈನ್‌ ಮುಖಾಂತರ ಸಭೆಗೆ ಸೇರಿಕೊಂಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮ್ಮ ನಿವಾಸದಲ್ಲಿ ನಡೆದ ಸಭೆಯ ನಂತರ ತಮ್ಮ ಶಾಸಕರೊಂದಿಗೆ ಮಹಾತ್ಮ ಗಾಂಧಿ ಸ್ಮಾರಕ ರಾಜ್‌ಘಾಟ್‌ಗೆ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ರಾಜ್‌ಘಾಟ್‌‌ ಭೇಟಿ ನಂತರ ಮಾತನಾಡಿದ ಕೇಜ್ರಿವಾಲ್, ‘‘ಅವರು ಎಎಪಿಯ 40 ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸುತ್ತಿದ್ದಾರೆಂದು ನನಗೆ ತಿಳಿಯಿತು. ಆದರೆ ಒಬ್ಬನೇ ಒಬ್ಬ ಶಾಸಕ ಮಣಿಯದಿರುವುದು ನನಗೆ ಸಂತೋಷವಾಗಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: `ಬಿಜೆಪಿ ಸೇರುವುದಾದರೆ CBI & ED ಪ್ರಕರಣ ಮುಕ್ತಾಯ’: ಬಿಜೆಪಿಯಿಂದ ಆಫರ್‌ ಬಂದಿದೆ ಎಂದ ದೆಹಲಿ ಉಪಮುಖ್ಯಮಂತ್ರಿ

ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಲಿ ಎಂದು ಪ್ರಾರ್ಥಿಸಲು ರಾಜ್‌ಘಾಟ್‌ಗೆ ಹೋಗಿದ್ದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮಾದರಿಯಲ್ಲಿ ಬಿಜೆಪಿ ತಮ್ಮ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲದ ಸಂಚು ರೂಪಿಸುತ್ತಿದೆ ಎಂದು ಎಎಪಿ ಆರೋಪಿಸಿದೆ.

ದೆಹಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರು ಎಎಪಿ ತೊರೆದರೆ ಅವರ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕುವುದಾಗಿ ಬಿಜೆಪಿ ಅವರಿಗೆ ಆಫರ್‌ ನೀಡಿದ್ದಾಗಿ ಸಿಸೋಡಿಯಾ ಹೇಳಿಕೊಂಡಿದ್ದರು.

ಈ ವರ್ಷದ ಆರಂಭದಲ್ಲಿ ಪರಿಚಯಿಸಲಾದ ದೆಹಲಿಯ ಮದ್ಯ ನೀತಿಯಲ್ಲಿನ ಅಕ್ರಮಗಳು ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಸೋಡಿಯಾ ಅವರ ಮೇಲೆ ಇತ್ತೀಚೆಗೆ ಸಿಬಿಐ ದಾಳಿ ನಡೆಸಿತ್ತು. ಈ ನೀತಿಯನ್ನು ಸರ್ಕಾರವು ನಂತರ ಹಿಂಪಡೆದಿತ್ತು. ಮದ್ಯದ ನೀತಿ ಉಲ್ಲಂಘನೆಯ ಕುರಿತ ಸಿಬಿಐ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಆರೋಪಿಗಳ ಪಟ್ಟಿಯಲ್ಲಿ ಸಿಸೋಡಿಯಾ ಅವರ ಹೆಸರು ಮೊದಲ ಸ್ಥಾನದಲ್ಲಿದ್ದಾರೆ. ಅವರ ವಿರುದ್ಧ ಜಾರಿ ನಿರ್ದೇಶನಾಲಯ ಕೂಡಾ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಎಎಪಿ 62 ಶಾಸಕರನ್ನು ಹೊಂದಿದೆ. ಬಿಜೆಪಿಗೆ ಎಂಟು ಸ್ಥಾನಗಳಷ್ಟೆ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....