Homeಕರ್ನಾಟಕಭಾರಿ ಮಳೆ: ಬೆಂಗಳೂರು ಸೇರಿದಂತೆ ಸುತ್ತಮುತ್ತ ಜನಜೀವನ ಅಸ್ತವ್ಯಸ್ತ

ಭಾರಿ ಮಳೆ: ಬೆಂಗಳೂರು ಸೇರಿದಂತೆ ಸುತ್ತಮುತ್ತ ಜನಜೀವನ ಅಸ್ತವ್ಯಸ್ತ

ಹೆದ್ದಾರಿ ಜಲಾವೃತಗೊಂಡಿರುವುದರಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸಿಲುಕಿಕೊಂಡಿರುವುದಾಗಿ ವರದಿಯಾಗಿದೆ

- Advertisement -
- Advertisement -

ಶನಿವಾರದಿಂದ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತಗೊಂಡಿದೆ. ಸೋಮವಾರ ಬೆಳಿಗ್ಗೆ ಕೂಡಾ ಮಳೆ ಸುರಿದ್ದು, ಇದರಿಂದಾಗಿ ಹೆದ್ದಾರಿಯ ಕೆಂಗೇರಿ-ವಂಡರ್‌ ಲಾ ನಡುವಿನ ಸಂಚಾರಕ್ಕೆ ತೊಂದರೆಯಾಗಿದೆ. ರಾಮನಗರದಲ್ಲೂ ಭಾರಿ ಮಳೆಯಾಗಿದ್ದು, ಸುಮಾರು 20 ವರ್ಷಗಳ ನಂತರ ಕಣ್ವ ಅಣೆಕಟ್ಟು ತುಂಬಿದೆ ಎಂದು ವರದಿಯಾಗಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತಿರುವ ನೀರಿನಿಂದಾಗಿ ಸಂಚಾರ ಅಸ್ತವ್ಯಸ್ಥವಾಗಿದ್ದು ಬಿಡದಿ ರೈಲ್ವೇ ನಿಲ್ದಾಣದ ರೈಲ್ವೇ ಹಳಿಗಳು ನೀರಿನಿಂದ ಆವೃತವಾಗಿದೆ. ನಿರ್ಮಾಣ ಹಂತದಲ್ಲಿರುವ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನೀರು ತುಂಬಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಸಿಲುಕಿಕೊಂಡಿರುವುದಾಗಿ ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಮನಗರ ಜಿಲ್ಲಾ ಪೊಲೀಸರು ಮುಂದಿನ ಮೂರು ದಿನಗಳು ಬದಲಿ ರಸ್ತೆಯ ಮೂಲಕ ಚಲಿಸುಂತೆ ಶನಿವಾರ ಪ್ರಯಾಣಿಕರಿಗೆ ಸೂಚನೆ ನೀಡಿದ್ದರು. “ಜಿಲ್ಲೆಯ ಹಲವು ಕೆರೆ ಕಟ್ಟೆಗಳು ತುಂಬಿದ ಪರಿಣಾಮವಾಗಿ ಕೆರೆಯ ಕೋಡಿಗಳು ಹರಿದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನರಿನ ಪ್ರವಾಹ ಉಂಟಾಗಿ ರಸ್ತೆ ದುರಸ್ತಿಗೊಂಡಿದೆ. ಹೀಗಾಗಿ ಮುಂದಿನ ಮೂರು ದಿನಗಳು ಬೆಂಗಳೂರು- ಮೈಸೂರು ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರು ಬೆಂಗಳೂರು-ಕನಕಪುರ- ಮೈಸೂರು ಮಾರ್ಗವಾಗಿ ಅಥವಾ ಬೆಂಗಳೂರು – ಕುಣಿಗಲ್ – ಮೈಸೂರು ಮಾರ್ಗವಾಗಿ ಪ್ರಯಾಣಿಸಬೇಕು” ಎಂದು ಜಿಲ್ಲಾ ಪೊಲೀಸರು ವಿನಂತಿಸಿಕೊಂಡಿದ್ದರು.

ಈ ನಡುವೆ ರಾಮನಗರಲ್ಲಿ ನರೆ ಪರಿಸ್ಥಿತಿ ಉಂಟಾಗಿದ್ದು ಕಣ್ವಾ ಅಣಕಟ್ಟು 20 ವರ್ಷಗಳ ನಂತರ ತುಂಬಿದೆ ಎಂದು ಪತ್ರಕರ್ತರು ವರದಿ ಮಾಡಿದ್ದಾರೆ. ನಿರ್ಮಾಣ ಹಂತದಲ್ಲಿರುವ ಹೆದ್ದಾರಿಯಲ್ಲಿ ನೆರೆ ಉಂಟಾಗಿದ್ದು ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗವು ದೃಶ್ಯವೂ ವೈರಲ್ ಆಗಿದೆ.

ಇದನ್ನೂ ಓದಿ: ಮಳೆ: ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ತತ್ತರ

ಬಿಡದಿ ರೈಲು ನಿಲ್ದಾಣವೂ ನೀರಿನಿಂದ ಆವೃತ್ತವಾಗಿದ್ದು, “ರೈಲುಗಳನ್ನು ದೋಣಿಗಳೊಂದಿಗೆ ಬದಲಾಯಿಸಲು ಯೋಜಿಸಲಾಗುತ್ತಿದೆ” ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ವ್ಯಂಗ್ಯವಾಡಿದ್ದಾರೆ. ಜೊತೆಗೆ ಅವರು ಬಿಡದಿ ರೈಲು ನಿಲ್ದಾಣದ ವಿಡಿಯೊವನ್ನು ಕೂಡಾ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತಗೊಂಡಿರುವ ವಿಡಿಯೊ ಕೂಡಾ ವೈರಲ್ ಆಗಿದೆ. ವಿಡಿಯೊದಲ್ಲಿ ಹಲವು ವಾಹನಗಳು ನೀರಿನಲ್ಲಿ ಮುಳುಗಿರುವುದು ಕಾಣಿಸಿಕೊಂಡಿದೆ.

ಮಳೆಯಿಂದಾಗಿ ಬೆಂಗಳೂರು ನಗರದ ಒಳಗಡೆಯು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಲಾಲ್​ಬಾಗ್, ಸೌಂತ್ ಎಂಡ್ ಸರ್ಕಲ್, ಜೆ.ಸಿ.ರಸ್ತೆ, ಜಯನಗರ, ಶಾಂತಿನಗರ ಸುತ್ತಮುತ್ತ ಹೆಚ್ಚಿನ ಮಳೆಯಾಗಿದೆ ಎಂದು ವರದಿಯಾಗಿದ್ದು, ಹಲವಾರು ಕಡೆಯಲ್ಲಿ ನೀರು ಶೇಖರಣೆಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...