Homeಸಿನಿಮಾಕ್ರೀಡೆಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ - ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್‌ನಲ್ಲಿ ಮತ್ತೆ ಎರಡು ಭಾರಿ ಭಾರತ – ಪಾಕ್ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಆರಂಭವಾಗಿದ್ದು ಭಾರತ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ಎದುರು 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಅಷ್ಟು ಮಾತ್ರವಲ್ಲದೇ ಇನ್ನೂ 13 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮತ್ತೆರೆಡು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸಿರುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸಿವೆ. ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಭಾರತ, ಪಾಕಿಸ್ತಾನ, ಹಾಂಕಾಗ್‌ ಎ ಗುಂಪಿನಲ್ಲಿದ್ದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಬಿ ಗುಂಪಿನಲ್ಲಿವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಹಾಂಕಾಂಗ್‌ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 11 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಭಾರತ ಪಾಕ್ ನಡುವಿನ ಆಗಸ್ಟ್ 28 ರಂದು ಮೊದಲ ಪಂದ್ಯ ಮುಗಿದಿದೆ. ಭಾರತ ಮತ್ತು ಪಾಕ್ ತನ್ನ ಉಳಿದ ಒಂದೊಂದು ಪಂದ್ಯವನ್ನು ಹಾಂಕಾಂಗ್ ವಿರುದ್ಧ ಸೆಣಸಲಿದ್ದು ಅಲ್ಲಿ ಗೆದ್ದರೆ ಎರಡೂ ತಂಡಗಳು ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 11 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ಇದನ್ನೂ ಓದಿ: ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...