ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು ಕರ್ನಾಟಕ ಸರ್ಕಾರ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ನೀಡಿದೆ.
ಮಾರ್ಚ್ 15 ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ಒಂದೇ ಅರ್ಜಿಯನ್ನಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸುವಾದಾಗಿ ಭಾನುವಾರ ಲಿಸ್ಟ್ ಮಾಡಿತ್ತು. ಒಂದಷ್ಟು ಕಾಲಾವಕಾಶ ಬೇಕೆಂದು ಕೆಲವು ಅರ್ಜಿದಾರರು ವಾದಿಸಿದ್ದರು. ಅವರನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್ ತ್ವರಿತ ವಿಚಾರಣೆ ಬೇಕು ಅನ್ನುವವರು ನೀವೆ, ಈಗ ಮುಂದೂಡಿ ಎಂದು ಕೇಳುವವರು ನೀವೆ ಎಂದು ತರಾಟೆಗೆ ತೆಗೆದುಕೊಂಡಿದೆ.
ಅರ್ಜಿದಾದರರು ಕರ್ನಾಟಕ ಸೇರಿದಂತೆ ಬಹಳ ದೂರದಿಂದ ಬರಬೇಕಿರುವುದರಿಂದ ಕನಿಷ್ಟ ಎರಡು ವಾರ ಕಾಲಾವಕಾಶ ಬೇಕೆಂದು ಕೇಳಿದರು. ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠವು ಒಂದು ವಾರ ಮಾತ್ರ ಸಮಯ ನೀಡಿ ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 05ಕ್ಕೆ ನಿಗಧಿ ಪಡಿಸಿದೆ.
ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯಲ್ಲಿ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡುವ ಮೂಲಕ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿತ್ತು. ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್


