Homeಕರ್ನಾಟಕಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪೋಕ್ಸೋ ಪ್ರಕರಣದ ಜೊತೆಗೆ ಎಸ್‌.ಟಿ., ಎಸ್.ಟಿ. ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಮುರುಘಾ ಮಠಾಧೀಶ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಚಿತ್ರದುರ್ಗ ಎಸ್‌ಪಿಯವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವುದೇನು?

ಮರುಘಾ ಮಠದ ಮಹಿಳಾ ವಿದ್ಯಾರ್ಥಿ ನಿಲಯದ ಇಬ್ಬರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ  ಮೈಸೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದೂರಿನ ಆಧಾರದಲ್ಲಿ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2) (ಎನ್‌), 376 (ಎ), 149 ಹಾಗೂ  ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ಯ (ಪೋಕ್ಸೋ) ಕಲಂ 5 (ಎಲ್‌), 6, 17, ಅಡಿ ಪ್ರಕರಣ ದಾಖಲಾಗಿತ್ತು.

ಮೇಲ್ಕಂಡ ಪ್ರಕರಣವನ್ನು ಮೈಸೂರು ನಗರ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಚಿತ್ರದುರ್ಗ ಜಿಲ್ಲೆಗೆ ವರ್ಗಾವಣೆ ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ನೊಂದ ಬಾಲಕಿಯರ ಹೇಳಿಕೆ ಪಡೆಯುವ ಕಾಲಕ್ಕೆ ಒಬ್ಬ ಬಾಲಕಿಯು ಪರಿಶಿಷ್ಟ ಜಾತಿಗೆ ಸೇರಿರುವುದಾಗಿ ತಿಳಿದುಬಂದ ಮೇರೆಗೆ ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರತಿಬಂಧಕ ಅಧಿನಿಯಮದ ಕಲಂ 3 ಕ್ಲಾಸ್‌ (1), ಸಬ್‌ ಕ್ಲಾಸ್‌ w(1), (2), 3 ಕ್ಲಾಸ್‌ (2) (v)ಗಳನ್ನು ಹೆಚ್ಚುವರಿಯಾಗಿ ಅಳವಡಿಸಿಕೊಂಡು ತನಿಖೆ ನಡೆಸಲು ಘನ ನ್ಯಾಯಾಲಯಕ್ಕೆ ದಿನಾಂಕ 28.8.2022ರಂದು ಮನವಿ ಸಲ್ಲಿಸಿ ಅನುಮತಿ ಪಡೆಯಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ.

ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮುರುಘಾ ಶರಣರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ. ಇವರ ವಿರುದ್ಧ ‘ಅಟ್ರಾಸಿಟಿ’ ಕಾನೂನಿನ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂಬ ಕೂಗು ಕೇಳಿಬಂದಿತ್ತು.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದರು.

ಭಾನುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಚಳ್ಳಕೆರೆಯ ಮಾಜಿ ಪುರಸಭಾ ಸದಸ್ಯ ಶಿವಮೂರ್ತಿ ಮಾತನಾಡಿ, “ಈ ಪ್ರಕರಣದಲ್ಲಿ ಸ್ವಾಮೀಜಿಯ ವಿರುದ್ಧ ಪರಿಶಿಷ್ಟ ಜಾತಿಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಬೇಕು” ಎಂದು ಆಗ್ರಹಿಸಿದ್ದರು.

“ದಲಿತ ಹುಡಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಸ್ವಾಮೀಜಿ ವಿರುದ್ಧ ಅಟ್ರಾಸಿಟಿ ಪ್ರಕರಣವನ್ನು ಯಾಕೆ ದಾಖಲಿಸಿಲ್ಲ? ಒಂದು ಮಗುವಿಗೆ ಅನ್ಯಾಯವಾಗಿದೆ. ಯಾರೋ ವಿರುದ್ಧ ನಾನು ಮಾತನಾಡಿದ್ದಕ್ಕೆ 24 ಗಂಟೆಗಳಲ್ಲಿ ನನ್ನ ಬಂಧಿಸಿದ್ದರು. ಎರಡು ದಿನವಾದರೂ ಸ್ವಾಮೀಜಿಯ ಬಂಧನ ಏಕೆ ಆಗಿಲ್ಲ” ಎಂದು ಪ್ರಶ್ನಿಸಿದ್ದರು.

ಆರೋಪಿಗಳ ಬಂಧನ ವಿಳಂಬ: ಆಕ್ರೋಶ

ಪೋಕ್ಸೋ ಪ್ರಕರಣದ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಆರೋಪಿಗಳು ಪ್ರಭಾವಿಯಾಗುವುದರಿಂದ ಬಂಧನ ವಿಳಂಬವಾಗುತ್ತಿದ್ದು, ಸಾಕ್ಷ್ಯನಾಶಗಳಿಗೆ ಅವಕಾಶ ನೀಡಿದಂತಾಗಿದೆ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ತಿಳಿಸಿದ್ದಾರೆ.

ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಈವರೆಗೆ ಎರಡು ಭಾರಿ ‘ನಾನುಗೌರಿ.ಕಾಂ’ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದ್ದು ಎರಡು ಭಾರಿಯೂ “ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳು ಸಿಕ್ಕಾಗ ಬಂಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ” ಎಂದು ಕೇಳಿದಾಗ, “ಹಾಗೇನಿಲ್ಲ. ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದೇವೆ. ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದಿದ್ದಾರೆ ಎಸ್‌ಪಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಅನೈತಿಕ ಚಟುವಟಿಕೆಯ ನ***** ಮುರುಗ ಸ್ವಾಮಿಯ ಬಂಧನ ವಾಗದೇ ಇದ್ದದ್ದು ಸಂವಿಧಾನಗೆ ಮಾಡಿದ ಅಪಚಾರ ಅಪಚಾರ ಮಾಡಿದ ಪೊಲೀಸರ ಮೇಲೆ ಮೇಲೆ ಕೇಸು ದಾಖಲಿಸುವುದೇ ಸೂಕ್ತ ದಲಿತರ ಪರವಾಗಿ ಮನ್ವಾದಿಗಳು ಹೇಗೂ ಇಲ್ಲ ಕಾಂಗ್ರೆಸ್ ಸತ್ತೇ ಹೋಗಿದೆ ಮುಂದೆ ದಲಿತರೆಲ್ಲರೂ ಯೋಚಿಸಬೇಕಾದ ಅನಿವಾರ್ಯತೆ ಇದೆ ಮುರುಗ ಸ್ವಾಮಿ ವ್ಯಭಿಚಾರ ಮಾಡಿದ್ದನ್ನು ಮರೆಮಾಚಿ ಮತ್ತೆ ಅದೇ ಪೀಠಕ್ಕೆ ಏರುವುದು ಯಾವ ಮುಖದಲ್ಲಿ ಸಾಯುವವರೆಗೂ ಈ ಕಳಂಕ ಹೋಗೋದಿಲ್ಲ ಈ ಮುರುಗ ಸ್ವಾಮಿ ಮತ್ತೆ ಪೀಠಕ್ಕೆ ಏರಿದ್ರೆ ಹೇಸಿಗೆಯ ಮೇಲೆ ಕೂತಂತೆ ಒಂದಿಷ್ಟು ನಾಚಿಕೆ ಮಾನ ಮರ್ಯಾದೆ ಇದ್ರೆ ಪೀಠ ತ್ಯಜಿಸಿ ಒಂದು ಮದುವೆಯಾಗಲಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...