Homeಕರ್ನಾಟಕದಕ್ಷಿಣ ಕನ್ನಡ ಅನೈತಿಕ ಪೊಲೀಸ್‌ಗಿರಿ: ಸಹಪಾಠಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿಗೆ ಥಳಿತ

ದಕ್ಷಿಣ ಕನ್ನಡ ಅನೈತಿಕ ಪೊಲೀಸ್‌ಗಿರಿ: ಸಹಪಾಠಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿಗೆ ಥಳಿತ

- Advertisement -
- Advertisement -

ಹಿಂದೂ ಸಮುದಾಯದ ಸಹಪಾಠಿ ಯುವತಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿಸಿ 8 ಮಂದಿ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ ಥಳಿಸಿ, ಕೊಲೆ ಬೆದರಿಕೆ ಹಾಕಿರುವ ಅನೈತಿಕ ಪೊಲೀಸ್‌ಗಿರಿ ಘಟನೆ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸರ್ಕಾರಿ ಕಾಲೇಜ್‌ನಲ್ಲಿ ನಡೆದಿದೆ. ಘಟನೆಯು ಸುಳ್ಯದ ಕೊಡಿಯಾಲ್‌ಬೈಲ್‌‌ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ಹಲ್ಲೆ ನಡೆಸಿರುವ 8 ಮಂದಿ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಹಲ್ಲೆಗೀಡಾದ ವಿದ್ಯಾರ್ಥಿಯನ್ನು ಸುಳ್ಯದ ಜಾಲ್ಸೂರ್ ಗ್ರಾಮದ ನಿವಾಸಿ ಮೊಹಮ್ಮದ್‌ ಸನೀಫ್‌ (19) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆ 10.30ರ ಸುಮಾರಿಗೆ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಲ್ಲೆ ನಡೆಸಿದ ದುಷ್ಕರ್ಮಿಗಳಾದ ದೀಕ್ಷಿತ್‌, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್‌ ಹಾಗೂ ಇತರರ ವಿರುದ್ಧ 143, 147, 148, 323, 324, 506 ಜೊತೆಗೆ 149 ಐಪಿಸಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವಕ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು ನಗರ ದಕ್ಷಿಣ: ಅನೈತಿಕ ಪೊಲೀಸ್ ಪಹರೆಯಲ್ಲಿ ಹಿಂದುತ್ವ-ಬಂಧುತ್ವ ಹೋರಾಟ!

“ವಿದ್ಯಾರ್ಥಿನಿಯು ನನ್ನ ಸ್ನೇಹಿತೆಯಾಗಿದ್ದು ಆಕೆಯೊಂದಿಗೆ ಮಾತನಾಡುವುದು ಕೆಲವರಿಗೆ ಇಷ್ಟವಿಲ್ಲದ ಕಾರಣ ನನ್ನನ್ನು ಕಾಲೇಜಿನ ಗ್ರೌಂಡ್‌ಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಜೊತೆಗೆ ಮುಂದಕ್ಕೆ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದರೆ ಜೀವ ಸಹಿತ ಬಿಡುವುದಿಲ್ಲ” ಎಂದು ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿ ಹೇಳಿದ್ದಾರೆ ಎಂದು ವಾರ್ತಾಭಾರತಿ ವರದಿ ಹೇಳಿದೆ.

ಸನೀಫ್ ನೀಡಿದ ದೂರಿನಂತೆ ಪೋಲೀಸರು ದೀಕ್ಷಿತ್, ಧನುಷ್ , ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಬೇರೆ ಕಾಲೇಜಿನ ವಿದ್ಯಾರ್ಥಿಯಾಗಿದ್ದು ಉಳಿದವರು ಸುಳ್ಯ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳೆಂದು ಪೊಲೀಸರು ತಿಳಿಸಿದ್ದಾರೆ ಎಂದು ವಾರ್ತಾಭಾರತಿ ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

3 COMMENTS

  1. ಅಮಾನುಷವಾಗಿ ತಳಿಸಿರುವ ಆರೋಪಿಗಳಿಗೆ ಕಟಿಣ ಶಿಕ್ಷೆ ಆಗಬೇಕು.

  2. ಪೊಲೀಸ್ ಗಿರಿಯನ್ನು ಕೈಗೆತ್ತಿಕೊಳ್ಳುವುದು ತಪ್ಪು ಆದರೆ ಈ ಸಂಬಂಧವಾಗಿ ದೂರು ದಾಖಲು ಮಾಡಬಹುದು ಇತ್ತು ಕಾನೂನು ಹದಗೆಟ್ಟಿ ಹೋಗಿದೆ ಆದರೆ ಎಷ್ಟೋ ಕಡೆ ಲವ್ ಜಿಹಾದಿ ನಡಿತಾ ಇರುವುದನ್ನು ಖಂಡಿಸಬೇಕು

  3. ಮುಸ್ಲಿಂ ಹುಡುಗಿ ಹಿಂದೂ ಯುವಕನ ಜೊತೆ ಮದುವೆ ಆದ್ರೆ ಅದು ಯಾವ ಜಿಹಾದ್? ಪರಸ್ಪರ ಪ್ರೀತಿಸಿ ಮದುವೆಯಾದ ಮೇಲೆ ಯಾವ ಜಿಹಾದ್?

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...