Homeಮುಖಪುಟಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

- Advertisement -
- Advertisement -

ಬುಧವಾರ ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್(ಕೆಸಿಆರ್‌‌) ಅವರು ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ ‘ಬಿಜೆಪಿ-ಮುಕ್ತ ಭಾರತ’ ಕ್ಕೆ ಕರೆ ನೀಡಿದ್ದಾರೆ.

ಇಬ್ಬರು ನಾಯಕರ ಭೇಟಿಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಸಿಎಂ ಕೆಸಿಆರ್‌, ದೇಶವನ್ನು ಕಾಡುತ್ತಿರುವ ಅನೇಕ ಅನಾಹುತಗಳಿಗೆ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ, ನಿರುದ್ಯೋಗ ಮತ್ತು ಬೆಲೆ ಏರಿಕೆಗೆ ನರೇಂದ್ರ ಮೋದಿ ಸರ್ಕಾರವೆ ಕಾರಣ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯ ವಿರುದ್ಧ ತೃತೀಯ ರಂಗದ ವಿಚಾರವಾಗಿ ಕೆಸಿಆರ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ. ಜೂನ್ 2020 ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನೀ ಸೈನಿಕರೊಂದಿಗಿನ ಘರ್ಷಣೆಯಲ್ಲಿ ಮಡಿದ ಬಿಹಾರದ ಐವರು ಸೈನಿಕರ ಸಂಬಂಧಿಕರಿಗೆ ತಲಾ 10 ಲಕ್ಷ ರೂಪಾಯಿ ಚೆಕ್‌ಗಳನ್ನು ಹಸ್ತಾಂತರಿಸುವುದು ಕೆಸಿಆರ್ ಅವರ ಪಾಟ್ನಾ ಭೇಟಿಯ ಅಧಿಕೃತ ಉದ್ದೇಶವಾಗಿತ್ತು.

ಇದನ್ನೂ ಓದಿ: ಬಿಹಾರ ರಾಜಕೀಯ: ನಿತೀಶ್ ಹೊಸ ಪಟ್ಟು; ದೆಹಲಿ ರಾಜಕೀಯದಲ್ಲಿ ಬೀಸುವುದೇ ಹೊಸ ಗಾಳಿ?

ಸಿಎಂ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರೊಂದಿಗೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಸಿಆರ್, ಬೆಲೆ ಏರಿಕೆ, ನಿರುದ್ಯೋಗ, ಖಾಸಗೀಕರಣ ನೀತಿಗಳ ಮೇಲೆ ಒಕ್ಕೂಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ‘ಬಿಜೆಪಿ-ಮುಕ್ತ ಭಾರತ’ಕ್ಕೆ ಕರೆ ನೀಡಿದ್ದಾರೆ.

ಸಾಧ್ಯವಿರುವ ಯಾವುದೇ ವಿಧಾನದಿಂದ ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಲು ನಾವು ಪ್ರಯತ್ನಿಸಬೇಕು ಎಂದು ಕೆಸಿಆರ್ ಹೇಳಿದ್ದಾರೆ.

ಇದನ್ನೂ ಓದಿ: 2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

ಪಾಟ್ನಾದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಕೆಸಿಆರ್‌‌ ಭೇಟಿ ಮಾಡಿದ್ದಾರೆ. 2024 ರಲ್ಲಿ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಸವಾಲಾಗುತ್ತಾರೆಯೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೆಸಿಆರ್‌, “ನಿತೀಶ್ ಅವರು ದೇಶದ ಅತ್ಯುತ್ತಮ ಮತ್ತು ಹಿರಿಯ ನಾಯಕರಲ್ಲಿ ಒಬ್ಬರು. ಈ ಬಗ್ಗೆ ನಾನು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಕೂತು ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಪ್ರಾದೇಶಿಕ ಪಕ್ಷಗಳ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದ ಕೆಸಿಆರ್ ನಡೆಸುತ್ತಿರುವ ಆರನೇ ಪ್ರವಾಸ ಇದಾದೆ. ಈ ಹಿಂದೆ ಅವರು ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಮತ್ತು ಅವರ ಪುತ್ರ, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಶಿವಸೇನೆಯ ಉದ್ಧವ್ ಠಾಕ್ರೆ, ತಮಿಳುನಾಡು ಸಿಎಂ, ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಮತ್ತು ಪಶ್ಚಿಮ ಬಂಗಾಳ ಸಿಎಂ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ.

ನವದೆಹಲಿ – ಪಂಜಾಬ್ ಪ್ರವಾಸದಲ್ಲಿ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಅವರನ್ನು ಭೇಟಿಯಾಗಿದ್ದಾರೆ. ಇಷ್ಟೆ ಅಲ್ಲದೆ ಅವರು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರನ್ನು ಎರಡು ಬಾರಿ ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಭಾರತ ಬಿಟ್ಟು ತೊಲಗು’ ಅಭಿಯಾನ ಬಿಹಾರದಲ್ಲಿ ಉತ್ತಮ ಆರಂಭ ಕಂಡಿದೆ: ಅಖಿಲೇಶ್ ಯಾದವ್

ಪಾಟ್ನಾ ಸಭೆಯ ಸಂದರ್ಭದಲ್ಲಿ, ಕೆಸಿಆರ್ ಮತ್ತು ನಿತೀಶ್ ಕುಮಾರ್ ಇಬ್ಬರೂ ಬಿಜೆಪಿಗೆ ಪರ್ಯಾಯವಾಗಿ ಮುಖ್ಯ ವಿರೋಧ ಪಕ್ಷದ ರಂಗ (ಕಾಂಗ್ರೆಸ್ ಇಲ್ಲದೆ)ವಾಗಿ ಇರುತ್ತೇವೆ, ಇದು ತೃತೀಯ ರಂಗವಲ್ಲ ಎಂದು ಹೇಳಿದ್ದಾರೆ. “ತನ್ನ ಸಣ್ಣ ರಾಜಕೀಯ ಲಾಭಕ್ಕಾಗಿ ಕೋಮು ಭಾವನೆಗಳನ್ನು ಪ್ರಚೋದಿಸಿ ಅಪಾಯಕಾರಿ ಆಟವಾಡುತ್ತಿರುವ ಬಿಜೆಪಿ ವಿರುದ್ಧ ನಮ್ಮದು ತೃತೀಯ ರಂಗವಲ್ಲ, ಪ್ರಮುಖ ರಂಗವಾಗಿದೆ” ಎಂದು ಕೆಸಿಆರ್ ಹೇಳಿದ್ದಾರೆ.

ಕೆಸಿಆರ್-ನಿತೀಶ್ ಭೇಟಿಯನ್ನು ವ್ಯಂಗವಾಡಿದ ಬಿಜೆಪಿ ರಾಜ್ಯಸಭಾ ಸಂಸದ ಮತ್ತು ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ,“ಕೆಸಿಆರ್-ನಿತೀಶ್ ಭೇಟಿಯು ಕಾಮಿಡಿ ಶೋ ಅಷ್ಟೆ ಹೊರತು ಬೇರೇನಿಲ್ಲ” ಎಂದು ಹೇಳಿದ್ದಾರೆ.

ಕೆಸಿಆರ್ ಅವರು ತಮ್ಮ ಭೇಟಿಯ ಸಮಯದಲ್ಲಿ ಈ ವರ್ಷ ಹೈದರಾಬಾದ್‌ನ ಸ್ಕ್ರ್ಯಾಪ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ಸಾವನ್ನಪ್ಪಿದ ಬಿಹಾರದ 12 ಕಾರ್ಮಿಕರ ಸಂಬಂಧಿಕರಿಗೆ ತಲಾ ಐದು ಲಕ್ಷ ರೂ. ಚೆಕ್‌ಗಳನ್ನು ಹಸ್ತಾಂತರಿಸಿದರು.

ಇದನ್ನೂ ಓದಿ: ಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

ಬಿಹಾರವನ್ನು ಕ್ರಾಂತಿಯ ನಾಡು ಎಂದು ಉಲ್ಲೇಖಿಸಿದ ಕೆಸಿಆರ್, ಗುರು ಗೋಬಿಂದ್ ಸಿಂಗ್ ಜನಿಸಿದ ಸ್ಥಳದಲ್ಲಿ ನಿರ್ಮಿಸಲಾದ ತಖ್ತ್ ಹರ್ಮಂದಿರ್ ಪಾಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸವನ್ನು ಕೊನೆಗೊಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...