Homeಕರ್ನಾಟಕಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

- Advertisement -
- Advertisement -

ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣದ ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌‌ ರಶ್ಮಿ ಅವರನ್ನು ಚಿತ್ರದುರ್ಗದ ಪೊಲೀಸರು ಶುಕ್ರವರ ಬಂಧಿಸಿದ್ದಾರೆ. ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದು, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇಟ್ಟಿದ್ದರು. ಇದೀಗ ಅಲ್ಲಿಂದಲೇ ಅವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಮಠದ ಮುಖ್ಯಸ್ಥ ಶಿವಮೂರ್ತಿ ಮುರುಘಾ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿತ್ತು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಪೋಕ್ಸೊ ಪ್ರಕರಣದಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಎಲ್ಲಾ ವೈದ್ಯಕೀಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದರಂತೆ ಬೆಳಗ್ಗಿನ ಜಾವ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ಬಂಧೀಖಾನೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಪದೇ ಪದೇ ಎದೆ ನೋವು ಎಂದು ಹೇಳಿದ್ದರು. ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಿಸಲಾಗಿತ್ತು. ಆನಂತರ ಇಸಿಜಿ ಮಾಡಿಸಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಎದೆ ನೋವು ನೆಪದಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ಶಿವಮೂರ್ತಿ ಮುರುಘಾ 

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮುರುಘಾ ಅವರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿತ್ತು.

ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮಠದ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮಠಾಧೀಶರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿ ಪ್ರಕರಣವನ್ನು ಬೆಳಕಿಗೆ ತಂದಿದ್ದರು.

ಇದನ್ನೂ ಓದಿ: Breaking News: ಪೋಕ್ಸೋ ಪ್ರಕರಣದ ಆರೋಪಿ ಶಿವಮೂರ್ತಿ ಮುರುಘಾ ಬಂಧನ

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತ್ತು. ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಪೀಠಾಧೀಶನ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.

ಆರಂಭದಲ್ಲಿ ಪ್ರಕರಣ ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿದೆ. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಿದ್ದಾರೆ. ಎಫ್‌ಆರ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿ ಮುರುಘಾ ಪೀಠಾಧೀಶರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಬಾಲಕಿಯರ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶಿವಮೂರ್ತಿ ಮುರುಘಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮತ್ತು ಬರಿಸಿ ಲೈಂಗಿಕ ದೌರ್ಜನ್ಯ; ಮಕ್ಕಳ ಆರೋಪ

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ಒಡನಾಡಿ ಸಂಸ್ಥೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು. ವಿಸ್ಕೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಕಮಲ ಅವರು ರಜೆ ಇದ್ದ ಕಾರಣ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರ ಪರ ಮಾತನಾಡುವ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಹಿರಂಗ ಪತ್ರ

ಈ ಹಿಂದೆ ತಡೆಯಾಜ್ಞೆ ಕೋರಿದ್ದ ಮುರುಘಾ ಪೀಠಾಧೀಶ

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು” ಎಂದು ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಆದರೆ ನಿರ್ದಿಷ್ಟ ಪ್ರಕರಣ, ನಿರ್ದಿಷ್ಟ ವಸ್ತು ಸಂಗತಿಯನ್ನು ಉಲ್ಲೇಖಿಸದೇ ತಡೆಯಾಜ್ಞೆ ಕೋರಿದ್ದರು ಎಂದು ‘ದಿ ಫೈಲ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಜಕಾರನಿಯಾಗಲಿ, ಧಾರ್ಮಿಕ ವ್ಯಕ್ತಿಯಾಗಲಿ, ಸಾಮಾನ್ಯ ವ್ಯಕ್ತಿಯಾಗಲಿ ಯಾರೂ ಕಾನೂನಾತೀತರಲ್ಲ, ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು, ಸಂತ್ರಸ್ತರಿಗೆ ನ್ಯಾಯ ಸಿಗಬೇಕು, ಜಾತಿ, ಪಂಥ ಮೀರಿ ಸಮಾಜವು ಸಂತ್ರಸ್ತರ ಪರವಾಗಿ ನಿಲ್ಲಬೇಕು, ಅದೂ ಸಮಾಜದ ಆದ್ಯ ಕರ್ತವ್ಯ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...