Homeಮುಖಪುಟಮುರುಘಾ ಶರಣರ ಮೇಲೆ ಅತ್ಯಾಚಾರ ಆರೋಪ: ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪಿ. ಸಾಯಿನಾಥ್

ಮುರುಘಾ ಶರಣರ ಮೇಲೆ ಅತ್ಯಾಚಾರ ಆರೋಪ: ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪಿ. ಸಾಯಿನಾಥ್

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವುದರ ಹಿನ್ನೆಲೆಯಲ್ಲಿ ಮುರುಘಾ ಮಠ ನೀಡುವ ಬಸವಶ್ರೀ ಪ್ರಶಸ್ತಿಯನ್ನು ಖ್ಯಾತ ಪತ್ರಕರ್ತ, ಚಿಂತಕ ಪಿ ಸಾಯಿನಾಥ್ ಹಿಂದಿರುಗಿಸಿದ್ದಾರೆ.

ಈ ಪ್ರಕರಣದಲ್ಲಿನ ಹೋರಾಟದಲ್ಲಿ ನಾನು ಸಂತ್ರಸ್ತರ ಪರವಾಗಿ ನಿಲ್ಲುವುದಕ್ಕಾಗಿ ನನಗೆ ನೀಡಿದ ಪ್ರಶಸ್ತಿ ಮತ್ತು 5 ಲಕ್ಷ ರೂ ಹಣವನ್ನು ವಾಪಸ್ ಮಾಡುತ್ತೇನೆ ಎಂದು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರಾಗಿರುವ ಸಾಯಿನಾಥ್ ಹೇಳಿದ್ದಾರೆ.

“ಚಿತ್ರದುರ್ಗದ ಶ್ರೀ ಮುರುಘಾಮಠದ ಮಠಾಧೀಶರಾದ ಶ್ರೀ ಶಿವಮೂರ್ತಿ ಮುರುಘಾ ಶರಣರ ಮೇಲಿನ ಆರೋಪಗಳನ್ನು ಮಾಧ್ಯಮ ವರದಿಗಳಿಂದ ತಿಳಿದು ನಾನು ವಿಚಲಿತನಾಗಿದ್ದೇನೆ. ಅವರು ಈಗ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಮಕ್ಕಳ ಮೇಲೆ, ವಿಶೇಷವಾಗಿ ಹೈಸ್ಕೂಲ್ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ. ಮಕ್ಕಳ ಮೇಲಿನ ಯಾವುದೇ ರೀತಿಯ ಅಪರಾಧಗಳನ್ನು ಖಂಡಿಸಲು ಯಾವುದೇ ಪದಗಳು ಸಾಲುವುದಿಲ್ಲ” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒಗ್ಗಟ್ಟಿನಿಂದ ಹೋರಾಡುವುದಕ್ಕಾಗಿ 2017 ರಲ್ಲಿ ಮಠವು ನನಗೆ ನೀಡಿದ ಬಸವಶ್ರೀ ಪ್ರಶಸ್ತಿಯನ್ನು ಮತ್ತು ಅದರೊಂದಿಗೆ ಬಂದ 5 ಲಕ್ಷ ರೂ. ಬಹುಮಾನದ ಮೊತ್ತವನ್ನು ಚೆಕ್ ಮೂಲಕ ಹಿಂದಿರುಗಿಸುತ್ತೇನೆ ಎಂದು ಅವರು ಘೋಷಿಸಿದ್ದಾರೆ.

ಇಂತಹ ಘೋರ ಘಟನೆಗಳನ್ನು ಬೆಳಕಿಗೆ ತರಲು ಶ್ರಮಿಸಿದ ಮೈಸೂರು ಮೂಲದ ಎನ್‌ಜಿಒ “ಒಡನಾಡಿ”ಯ ಪ್ರಯತ್ನಗಳು ಮತ್ತು ಸಾಮಾಜಿಕ ಅನಿಷ್ಟಗಳ ವಿರುದ್ಧದ ಅವರ ದಶಕಗಳ ಹೋರಾಟಕ್ಕೆ ಮೆಚ್ಚುಗೆ ದಾಖಲಿಸುತ್ತೇನೆ. ಅದೇ ಸಂದರ್ಭದಲ್ಲಿ ಮುರುಘಾ ಶರಣ ಮೇಲಿನ ತನಿಖೆಯನ್ನು ತೀವ್ರವಾಗಿ ಮುಂದುವರಿಸಬೇಕು ಮತ್ತು ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ವಿಚಾರಕ್ಕೆ ಕಿಡಿಕಾರಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...